ನಾನ್ ವೆಜ್ ತುಳು ಚಲನಚಿತ್ರ ಫೆ.6 ರಂದು ತೆರೆಗೆ

KannadaprabhaNewsNetwork |  
Published : Jan 13, 2026, 03:15 AM IST
ನಾನ್‌ ವೆಜ್‌ ಚಿತ್ರದ ಪೋಸ್ಚರ್‌  | Kannada Prabha

ಸಾರಾಂಶ

ಮಂಗಳೂರು: ಜಯಕಿರಣ ಫಿಲಂಸ್ ಲಾಂಛನದಲ್ಲಿ ತಯಾರಾದ ಪ್ರಕಾಶ್ ಪಾಂಡೇಶ್ವರ್ ನಿರ್ಮಾಣದಲ್ಲಿ ಕೆ. ಸೂರಜ್ ಶೆಟ್ಟಿ ನಿರ್ದೇಶನದ ‘ನಾನ್ ವೆಜ್’ ತುಳು ಸಿನಿಮಾ ಫೆಬ್ರವರಿ 6 ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆಕಾಣಲಿದೆ.

ಮಂಗಳೂರು: ಜಯಕಿರಣ ಫಿಲಂಸ್ ಲಾಂಛನದಲ್ಲಿ ತಯಾರಾದ ಪ್ರಕಾಶ್ ಪಾಂಡೇಶ್ವರ್ ನಿರ್ಮಾಣದಲ್ಲಿ ಕೆ. ಸೂರಜ್ ಶೆಟ್ಟಿ ನಿರ್ದೇಶನದ ‘ನಾನ್ ವೆಜ್’ ತುಳು ಸಿನಿಮಾ ಫೆಬ್ರವರಿ 6 ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆಕಾಣಲಿದೆ.

ಕರಾವಳಿಯ ಪ್ರತಿಭೆಗಳಿಂದಲೇ ಸಿದ್ಧವಾಗಿರುವ ‘ನಾನ್‌ವೆಜ್‌’ ಒಂದು ಅತ್ಯುತ್ತಮ ಭಿನ್ನ ಕಥಾವಸ್ತುವನ್ನು ಹೊಂದಿದೆ. ಯಾವುದನ್ನು ಮಡಿಮೈಲಿಗೆ, ಅಸಹ್ಯ ಎಂದು ಪರಿಗಣಿಸಿದ್ದೇವೆಯೋ ಅದು ಎಷ್ಟು ಅನಿವಾರ್ಯ ಮತ್ತು ಸಹಜ ಎಂಬುದು ಈ ಚಿತ್ರದ ಒಂದು ಸಂದೇಶವೂ ಆಗಿದೆ.

‘ಸು ಫ್ರಂ ಸೋ’ ಸಿನಿಮಾದಲ್ಲಿ ನಟಿಸಿರುವ ಹೆಚ್ಚಿನ ಕಲಾವಿದರು ‘ನಾನ್‌ವೆಜ್‌’ ಸಿನಿಮಾದಲ್ಲೂ ಇದ್ದಾರೆ. ಪ್ರಕಾಶ್ ತೂಮಿನಾಡು, ‘ಬಂದರೊ ಬಂದರು ಬಾವ ಬಂದರು’ ಖ್ಯಾತಿಯ ಪುಷ್ಪರಾಜ್ ಬೊಳ್ಳೂರು, ದೀಪಕ್‌ ರೈ ಪಾಣಾಜೆ, ಮೈಮ್‌ ರಾಮದಾಸ್‌, ವಿಸ್ಮಯ ವಿನಾಯಕ್, ರೂಪಾ ವರ್ಕಾಡಿ ಅವರು ನಾನ್‌ವೆಜ್‌ ಸಿನಿಮಾದಲ್ಲೂ ನಟಿಸಿದ್ದಾರೆ. ನಾಯಕಿಯಾಗಿ ಪುಟ್ಟಕ್ಕನ ಮಕ್ಕಳು ಧಾರಾವಾಹಿ ಖ್ಯಾತಿಯ ಸಂಜನಾ ಬುರ್ಲಿ ತಮ್ಮ ಅದ್ಭುತ ನಟನಾ ಕೌಶಲವನ್ನು ಪ್ರದರ್ಶಿಸಿದ್ದಾರೆ. ಜತೆಗೆ ಕುಸೇಲ್ದರಸೆ ನವೀನ್‌ ಡಿ. ಪಡೀಲ್‌ ಅವರೂ ಪ್ರಮುಖ ಪಾತ್ರದಲ್ಲಿದ್ದಾರೆ. ಈಗಾಗಲೇ ಕೆಲವು ತುಳು, ಕನ್ನಡ ಸಿನಿಮಾಗಳಲ್ಲಿ ನಟಿಸಿ ಭರವಸೆಯ ನಾಯಕ ನಟ ಎಂದೇ ಗುರುತಿಸಿಕೊಂಡಿರುವ ಅಥರ್ವ ಪ್ರಕಾಶ್‌ ಕೂಡ ನಾನ್‌ವೆಜ್‌ನ ಪ್ರಮುಖ ಪಾತ್ರದಲ್ಲಿದ್ದು, ಈ ಸಿನಿಮಾ ಭರ್ಜರಿ ಹಿಟ್‌ ಆಗುವ ನಿರೀಕ್ಷೆ ಇದೆ. ಹಾಸ್ಯಕ್ಕೂ ಕೊರತೆಯಿಲ್ಲ, ಮನೋರಂಜನೆಯೂ ಕಡಿಮೆ ಇಲ್ಲ, ಸಂದೇಶ - ಕಥೆಯೂ ಅದ್ಭುತ ಎಂಬುದು ಚಿತ್ರತಂಡದ ಮಾತು. ನಾನ್‌ವೆಜ್‌ನ ವಿಷಯವೇ ಎಲ್ಲರಿಗೂ ಖುಷಿ ಕೊಡಲಿದೆ. ಪ್ರೀತಿಯ ಹಿಂದೆ ಹೋಗುತ್ತಿರುವ ಮುಗ್ಧ ಯುವಕನೊಬ್ಬನ ಸುತ್ತ ಹೆಣೆದಿರುವ ಕಥೆಯನ್ನು ಈ ಸಿನಿಮಾ ಹೊಂದಿದೆ. ಆದ ಕಾರಣ ಇದು ಯುವ ಸಮುದಾಯವನ್ನು ಸೆಳೆಯುವ ಸಾಧ್ಯತೆ ನಿಚ್ಚಳವಾಗಿದೆ. ಮಕ್ಕಳೊಂದಿಗೆ ಹೆತ್ತವರು ಜತೆಯಾಗಿ ಕುಳಿತು ನೋಡಬೇಕಾದ ಸಿನಿಮಾವಾಗಿದ್ದು, ಇದು ಮಕ್ಕಳು ದಾರಿ ತಪ್ಪುವುದನ್ನು ತಡೆಯಲಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ದ್ವೇಷಭಾಷಣ ಬಿಲ್‌ಗೆ ಸಹಿ ಬೇಡ : ಗೌರ್ನರ್‌ಗೆ ಬಿಜೆಪಿ
‘ಜಿ ರಾಮ್‌ ಜಿ’ ವಿರುದ್ಧ ಸಮರಕ್ಕೆ ನಾಳೆ ಕೈ ವಿಶೇಷ ಸಂಪುಟ ಸಭೆ