ಮಸ್ಕಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಈಶಾನ್ಯ ಪದವೀಧರರ ಕ್ಷೇತ್ರದ ಅಭ್ಯರ್ಥಿ ಡಾ.ಚಂದ್ರಶೇಖರ್ ಪಾಟೀಲ್ ಗೆಲುವು ಸಾಧಿಸಿದ ಹಿನ್ನೆಲೆ ವೀಜಯೋತ್ಸವ ಆಚರಿಸಿದರು.
ಮಸ್ಕಿ: ಕಳೆದ ಜೂ.3ರಂದು ನಡೆದ ಈಶಾನ್ಯ ಪದವೀಧರ ಮತ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಡಾ.ಚಂದ್ರಶೇಖರ್ ಪಾಟೀಲ್ ಅವರು ಗೆಲುವು ಸಾಧಿಸಿ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾದ ಹಿನ್ನೆಲೆ ಕಾಂಗ್ರೆಸ್ ಕಾರ್ಯಕರ್ತರು ವೀಜಯೋತ್ಸವ ಆಚರಿಸಿದರು.
ಪಟ್ಟಣದ ದೈವದಕಟ್ಟೆ ಮುಂಭಾಗದಲ್ಲಿ ಇಲ್ಲಿನ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಪಟಾಕಿ ಸಿಡಿಸಿ ಸಿಡಿ ಸಿಹಿ ಹಂಚಿ ಸಂಭ್ರಮಿಸಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡ ಅಂದಾನಪ್ಪ ಗುಂಡಳ್ಳಿ ಮಾತನಾಡಿ, ಈಶಾನ್ಯ ಪದವೀಧರರ ಕ್ಷೇತ್ರಕ್ಕೆ ನಡೆದ ಚುನಾವಣೆಯಲ್ಲಿ ಪದವೀಧರರು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತದಲ್ಲಿರುವುದರಿಂದ ಬೆಂಬಲಿಸಿದ್ದಾರೆ. ಅಲ್ಲದೇ ಸರ್ಕಾರವೂ ಕೂಡ ಜನಪರ ಯೋಜನೆ ಜಾರಿಗೆ ತಂದು ಮನೆ-ಮನೆಗೆ ಮುಟ್ಟಿಸಿದೆ. ಆದ್ದರಿಂದ ಮತದಾರರು ನಮ್ಮ ಪಕ್ಷದ ಮೇಲೆ ವಿಶ್ವಾಸ ಇಟ್ಟು ಕಾಂಗ್ರೆಸ್ ಅಭ್ಯರ್ಥಿಗೆ ಮತ ನೀಡಿ ಗೆಲುವು ತಂದುಕೊಟ್ಟಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಮುಖಂಡರಾದ ಬಸನಗೌಡ ಪೊಲೀಸ್ ಪಾಟೀಲ್, ಎಂ.ಅಮರೇಶ, ದೊಡ್ಡಪ್ಪ ಕಡಬೂರು, ಬಸಪ್ಪ ಬ್ಯಾಳಿ, ಮಸ್ಕಿ ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಮೈಬುಸಾಬ ಮುದ್ದಪೂರ, ಮಸ್ಕಿ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೃಷ್ಣಾ ಡಿ.ಚಿಗರಿ, ಪಂಪನಗೌಡ ಗುಡದೂರು, ವೀರೇಶ ಪಾಟೀಲ್, ಕಾಂಗ್ರೆಸ್ ಹಿಂದುಳಿದ ವರ್ಗದ ರಾಜ್ಯ ಪ್ರಧಾನ ಕಾರ್ಯದರ್ಶಿ ಆನಂದ ವಿರಾಪೂರ, ಸುರೇಶ್ ಬ್ಯಾಳಿ, ರವಿಕುಮಾರ್ ಚಿಗರಿ, ಶರಣಪ್ಪ ಎಲಿಗಾರ, ಶಂಕರಗೌಡ, ಶಿವು ಸೇರಿದಂತೆ ಇನ್ನಿತರರು ಇದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.