ಈಶಾನ್ಯ ಶಿಕ್ಷಕರ ಎಲೆಕ್ಷನ್‌: ಕೈ ಅಭ್ಯರ್ಥಿ ಪರ ಪ್ರಚಾರ

KannadaprabhaNewsNetwork |  
Published : Oct 18, 2026, 02:45 AM IST
16ಕೆಪಿಎಲ್ಎನ್ಜಿ01  | Kannada Prabha

ಸಾರಾಂಶ

ಈಶಾನ್ಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಎ.ವಸಂತಕುಮಾರ ಅವರು ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯದಲ್ಲಿ ಉಪನ್ಯಾಸಕರನ್ನು ಭೇಟಿಯಾಗಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಶರಣಪ್ಪ ಮಟ್ಟೂರ ಅವರಿಗೆ ಪ್ರಥಮ ಪ್ರಾಶಸ್ತ್ಯ ದ ಮತ ನೀಡಬೇಕೆಂದು ಕೋರಿದರು.

ಕನ್ನಡಪ್ರಭ ವಾರ್ತೆ ರಾಯಚೂರು

ಈಶಾನ್ಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಎ.ವಸಂತಕುಮಾರ ಅವರು ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯದಲ್ಲಿ ಉಪನ್ಯಾಸಕರನ್ನು ಭೇಟಿಯಾಗಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಶರಣಪ್ಪ ಮಟ್ಟೂರ ಅವರಿಗೆ ಪ್ರಥಮ ಪ್ರಾಶಸ್ತ್ಯ ದ ಮತ ನೀಡಬೇಕೆಂದು ಕೋರಿದರು.

ಕಾಂಗ್ರೆಸ್ ಸರ್ಕಾರ ಈ ವಿಶ್ವವಿದ್ಯಾಲಯ ಮಂಜೂರು ಮಾಡಿ ಪ್ರಾರಂಭಿಸಲು ಕಾರಣವಾಗಿದೆ, ಮುಂದಿನ ದಿನಗಳಲ್ಲಿ ಈ ವಿಶ್ವವಿದ್ಯಾಲಯದ ಅಭಿವೃದ್ಧಿಗೆ ಎಲ್ಲಾ ರೀತಿಯ ಪ್ರಯತ್ನ ಮಾಡಲಾಗುವುದು ಮತ್ತು ಇಲ್ಲಿ ಖಾಲಿ ಇರುವ ಬೋಧಕ ಹಾಗೂ ಬೋದಕೇತರ ವರ್ಗಗಳ ಹುದ್ದೆಗಳ ಭರ್ತಿಗೆ ಸರಕಾರದ ಮಟ್ಟದಲ್ಲಿ ಪ್ರಯತ್ನ ಮಾಡಲಾಗುವುದು ಎಂದು ಹೇಳಿದರು.

ಈ ಸಂದರ್ಭದಲ್ಲಿ ಮುಖಂಡರಾದ ಅಬ್ದುಲ್ ಕರೀಮ್‌, ಬಸವರಾಜ ದರೂರು, ರಾಮಕೃಷ್ಣ ನಾಯಕ, ಡಾ.ರಝಾಕ ಉಸ್ತಾದ, ವಿವಿ ಬೋಧಕ-ಬೋಧಕೇತರ ಸಿಬ್ಬಂದಿ ಸೇರಿ ಇತರರು ಉಪಸ್ಥಿತರಿದ್ದರು.

ಶಿಕ್ಷಕರ ಹಿತಾಸಕ್ತಿ ಕಾಪಾಡುವ ಶರಣಪ್ಪ ಮಟ್ಟೂರ ಅವರ ಗೆಲ್ಲಿಸಿ: ಶಿಕ್ಷಕರ ಸಮಸ್ಯೆಗಳ ಅರಿತು ಕೆಲಸ ಮಾಡಲು ಈಶಾನ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಗೆಲ್ಲಿಸಬೇಕೆಂದು ಲಿಂಗಸುಗೂರಿನಲ್ಲಿ ಮತಯಾಚಿಸಿ ಜಿಲ್ಲಾ ಗ್ಯಾರಂಟಿ ಯೋಜನೆ ಅಧ್ಯಕ್ಷ ಪಾಮಯ್ಯ ಮುರಾರಿ ಕರೆ ನೀಡಿದರು.

ಈಶಾನ್ಯ ಶಿಕ್ಷಕರ ವಿಧಾನ ಪರಿಷತ್ ಕ್ಷೇತ್ರದಿಂದ ಸ್ಪರ್ಧೆ ಮಾಡಿರುವ ಶರಣಪ್ಪ ಮಟ್ಟೂರ ಪರವಾಗಿ ಪಟ್ಟಣದ ನಾನಾ ಶಾಲಾ-ಕಾಲೇಜು, ಶಿಕ್ಷಣ ಸಂಸ್ಥೆಗಳಲ್ಲಿ ಮತಯಾಚನೆ ಮಾಡಿ ಮಾತನಾಡಿದ ಅವರು, ಶಿಕ್ಷಕರ ಸಮಸ್ಯೆಗಳ ಹೋಗಲಾಡಿಸಲು ಈ ಹಿಂದೆ ಅನೇಕ ಸಮಸ್ಯೆಗಳನ್ನು ಪರಿಹಾರ ಮಾಡಿದ್ದಾರೆ. ಈಗ ಮತ್ತೊಮ್ಮೆ ಸ್ಪರ್ಧೆ ಮಾಡಿದ್ದಾರೆ. ಶಿಕ್ಷಕರು ಮತ್ತೊಮ್ಮೆ ಮತ ನೀಡಿ ಗೆಲ್ಲಿಸಬೇಕೆಂದರು.

ಈ ವೇಳೆ ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷ ಭೂಪನಗೌಡ ಕರಡಕಲ್, ಹಿರಿಯ ಮುಖಂಡರಾದ ಡಿ.ಜಿ ಗುರಿಕಾರ, ಗುಂಡಪ್ಪ ನಾಯಕ, ಸೋಮಶೇಖರ ಐದನಾಳ, ಅಮರೇಶ ಮೇದಿನಾಪುರ, ಹುಸೇನಪ್ಪ ಸೇರಿದಂತೆ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಏಷ್ಯನ್ ಪ್ಯಾರಾ ಗೇಮ್ಸ್‌ಗೆ ಬಳ್ಳಾರಿಯ ಗೋಪಿಚಂದ್ ಲಿಂಗುಟ್ಲ ಆಯ್ಕೆ
ಪಡಿತರ ಚೀಟಿದಾರರ ಇ-ಕೆವೈಸಿ ಗಡುವು ವಿಸ್ತರಿಸಿ