ಕನ್ನಡಪ್ರಭ ವಾರ್ತೆ ಬಾಗಲಕೋಟೆ
ನವನಗರದ ಭೋವಿ ಪೀಠದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಸವಣ್ಣನವರನ್ನು ಒಪ್ಪಿಕೊಂಡವರು ಸೇರಿದಂತೆ ನಾಡಿನ ನಾನಾ ಮಠಾಧೀಶರು ಈ ಅಭಿಯಾನದಲ್ಲಿ ಭಾಗವಹಿಸಲಿದ್ದಾರೆ. ಇದು ಜಾತಿ ಸಮಾವೇಶ ಅಲ್ಲ. ಬಸವ ತತ್ವ ಸಮಾಜವೇಶ, ಜಾತ್ಯತೀತ ಸಮಾವೇಶ ಎಂದು ಹೇಳಿದರು.
ಚರಂತಿಮಠದ ಪ್ರಭು ಸ್ವಾಮೀಜಿ, ಕೂಡಲಸಂಗಮದ ಪಂಚಮಸಾಲಿ ಪೀಠದ ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿ, ಗುಳೇದಗುಡ್ಡ ಗುರುಸಿದ್ದೇಶ್ವರ ಬ್ರಹ್ಮನಮಠದ ಬಸವರಾಜ ಪಟ್ಟದಾರ್ಯ ಶ್ರೀಗಳು ಮಾತನಾಡಿ, ಸಮಾಜದಲ್ಲಿನ ಎಲ್ಲರೂ ಒಗ್ಗಟ್ಟಾಗಿ ಬಾಳುವ ನಿಟ್ಟಿನಲ್ಲಿ ಈ ಸಮಾವೇಶ ಆಯೋಜನೆ ಮಾಡಲಾಗಿದೆ. ಆ ಹಿನ್ನೆಲೆಯಲ್ಲಿ ಈಗ ರಾಜ್ಯದಲ್ಲಿ ಶರಣ ಸಂಸ್ಕೃತಿ ಅಭಿಯಾನ ಆರಂಭಿಸಲಾಗಿದೆ. ಅದರ ನಿಮಿತ್ತ ಬಾಗಲಕೋಟೆ ನವನಗರದ ಕಲಾಭವನದಲ್ಲಿ ಬಸವ ಸಂಸ್ಕೃತಿ ಅಭಿಯಾನ ಹಮ್ಮಿಕೊಳ್ಳಲಾಗುತ್ತಿದೆ ಎಂದರು.ನಾಳೆ ಅಭಿಯಾನ ಉದ್ಘಾಟನೆ:ಲಿಂಗಾಯತ ಮಠಾಧಿ ಪತಿಗಳ ಒಕ್ಕೂಟ ಹಾಗೂ ಸಮಸ್ತ ಬಸವಪರ ಸಂಘಟನೆಗಳ ಆಶ್ರಯದಲ್ಲಿ ಈ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಸೆ.10ರಂದು ಸಂಜೆ 6 ಗಂಟೆಗೆ ಕಾರ್ಯಕ್ರಮದ ಉದ್ಘಾಟನೆ ನಡೆಯಲಿದ್ದು, ಗದಗ-ಡಂಬಳದ ಎಡೆಯೂರ ತೋಟಂದಾರ್ಯ ಮಠದ ಡಾ.ತೋಂಟದ ಸಿದ್ದರಾಮ ಸ್ವಾಮೀಜಿ, ಸಾಣೆಹಳ್ಳಿ ತರಳುಬಾಳು ಶಾಖಾಮಠದ ಪಂಡಿತಾರಾರ್ಧ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸುವರು.