ಕನ್ನಡಪ್ರಭ ವಾರ್ತೆ ಶಿವಮೊಗ್ಗ
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯವು ಆರ್ಥಿಕ ದಿವಾಳಿತನ ಎದುರಿಸುತ್ತಿದೆ. ಖಜಾನೆ ಖಾಲಿಯಾಗಿದ್ದರೂ ದೊಡ್ಡ ದೊಡ್ಡ ಮಾತನಾಡುತ್ತಿರುವ ಕಾಂಗ್ರೆಸ್ ಸರ್ಕಾರ, ರಾಜ್ಯದ ಹಣಕಾಸಿನ ಕುರಿತು ಶ್ವೇತಪತ್ರ ಹೊರಡಿಸಬೇಕು ಎಂದು ಒತ್ತಾಯಿಸಿದರು.
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ರಾಜ್ಯದ ಜನರು ಒಂದಲ್ಲಾ ಒಂದು ರೀತಿಯಲ್ಲಿ ಸಂಕಷ್ಟ ಎದುರಿಸುತ್ತಿದ್ದಾರೆ. ಕುರ್ಚಿಗಾಗಿ ದೊಡ್ಡ ಕಚ್ಚಾಟವೇ ನಡೆಯುತ್ತಿದ್ದು, ಇದರ ಹೊರತಾದ ಯಾವುದೇ ಕಾರ್ಯಕ್ರಮ ಈ ಸರ್ಕಾರದಿಂದ ಇಲ್ಲವಾಗಿದೆ ಎಂದು ಟೀಕಿಸಿದರು.ಈ ಸರ್ಕಾರದಲ್ಲಿ ಅಭಿವೃದ್ಧಿ ಎಂಬುದು ಮರೀಚಿಕೆಯಾಗಿದೆ. ಗುತ್ತಿಗೆದಾರರು ಕಣ್ಣೀರಿನಲ್ಲಿ ಕೈ ತೊಳೆಯುತ್ತಿದ್ದಾರೆ. ಯುವನಿಧಿ ಯೋಜನೆಯಡಿ ಶೇ.60 ರಷ್ಟು ಯುವಕರಿಗೆ ಸ್ಟೈಫಂಡ್ ದೊರೆಯುತ್ತಿಲ್ಲ. ರೈತರ ಆತ್ಮಹತ್ಯೆ ಜಾಸ್ತಿಯಾಗಿದೆ. ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಜೈಲುಗಳು ರೆಸಾರ್ಟ್‌ಗಳಾಗಿ ಪರಿವರ್ತನೆಯಾಗಿದೆ. ಜೈಲಿನಲ್ಲಿ ಅಕ್ರಮ ಚಟುವಟಿಕೆ ನಡೆಯುತ್ತಿದೆ. ರಾಜ್ಯದಲ್ಲಿ ಮಹಿಳೆಯರಿಗೆ ಸುರಕ್ಷತೆ ಇಲ್ಲವಾಗಿದ್ದು, ಇದಕ್ಕೆ ಸಾಕ್ಷಿ ಎಂಬಂತೆ ಪೊಲೀಸ್ ವಶದಲ್ಲಿದ್ದ ಮಹಿಳೆಯನ್ನೇ ವಿವಸ್ತ್ರಗೊಳಿಸಿದ ಘಟನೆ ಹಾಗೂ ಓಂಶಕ್ತಿ ಬಸ್ಸಿನ ಮೇಲೆ ಕಲ್ಲು ತೂರಾಟ ನಡೆದಿದೆ ಎಂದು ದೂರಿದರು.
ಗೃಹಜ್ಯೋತಿ ಯೋಜನೆಯಡಿ ಉಚಿತ ವಿದ್ಯುತ್ ಕೊಟ್ಟಿದ್ದಾರೆ. ಆದರೆ ಈ ಕೈಯಲ್ಲಿ ಕೊಟ್ಟು ಆ ಕೈಯಲ್ಲಿ ಕಿತ್ತುಕೊಳ್ಳುವ ಹಾಗೆ ಮಾಡಿ ವಾಣಿಜ್ಯ ಮತ್ತು ಕೈಗಾರಿಕೆ ಗ್ರಾಹಕರಿಗೆ ವಿದ್ಯುತ್ ಬೆಲೆಯನ್ನು ಏರಿಕೆ ಮಾಡಿದೆ. ಇದರಿಂದ ಕೈಗಾರಿಕೆಗಳ ಅವಸಾನಕ್ಕೆ ಕಾರಣವಾಗಿದೆ. ಅನ್ನಭಾಗ್ಯ ಯೋಜನೆಯಡಿ ಅಕ್ಕಿಯೂ ಇಲ್ಲ, ಅದರ ಬದಲಿಗೆ ಕೊಡುತ್ತಿದ್ದ 120 ರು.ಗಳೂ ಇಲ್ಲ. ಜನವರಿಯಿಂದ 657 ಕೋಟಿ ರು. ಅನ್ನಭಾಗ್ಯದ ಹಣ ಇನ್ನೂ ಫಲಾನುಭವಿಗಳ ಖಾತೆಗೆ ಜಮಾ ಆಗಿಲ್ಲ. ಎಸ್‌ಸಿಪಿ, ಟಿಎಸ್‌ಪಿ ಯೋಜನೆಯ ಶೇ.35ರಷ್ಟು ಹಣ ಗ್ಯಾರೆಂಟಿ ಯೋಜನೆಗೆ ಬಳಸಿಕೊಂಡಿದ್ದು, ದಲಿತರ ಉದ್ಧಾರಕ್ಕೆ ಇಟ್ಟ ಹಣಕ್ಕೆ ಕನ್ನ ಹಾಕಲಾಗಿದೆ ಎಂದರು.
ಗೋಷ್ಠಿಯಲ್ಲಿ ಶಾಸಕ ಎಸ್.ಎನ್.ಚನ್ನಬಸಪ್ಪ, ಡಿ.ಎಸ್.ಅರುಣ್, ಜಿಲ್ಲಾಧ್ಯಕ್ಷ ಎನ್.ಕೆ. ಜಗದೀಶ್, ಪ್ರಮುಖರಾದ ಎಸ್. ದತ್ತಾತ್ರಿ, ಮಾಲತೇಶ್, ಮೋಹನ್‌ರೆಡ್ಡಿ, ಮೇಘರಾಜ್, ದಿವಾಕರ ಶೆಟ್ಟಿ, ರಾಜೇಶ್ ಕಾಮತ್, ರಾಜುತಲ್ಲೂರು, ಮಂಜುನಾಥ್ ಮತ್ತಿತರರಿದ್ದರು.