ವಿರೋಧಿಗಳ ಟೀಕೆಗಳಿಗೆ ಹೆದರುವುದಿಲ್ಲ: ಶಾಸಕ ಶಾಸಕ ಕೆ.ಎಂ.ಉದಯ್

KannadaprabhaNewsNetwork |  
Published : Jun 22, 2025, 11:48 PM IST
22ಕೆಎಂಎನ್ ಡಿ19 | Kannada Prabha

ಸಾರಾಂಶ

ಮದ್ದೂರು ತಾಲೂಕನ್ನು ಮಾದರಿ ಕ್ಷೇತ್ರ ಮಾಡುವ ಗುರಿ ಹೊಂದಿದ್ದೇನೆ. ಯಾವುದೇ ಮುಲಾಜಿಗೂ, ಟೀಕೆಗಳಿಗೆ ಸೊಪ್ಪು ಹಾಕುವುದಿಲ್ಲ. ಸೂಳೆಕೆರೆ ಅಭಿವೃದ್ಧಿಗೆ 34 ಕೋಟಿ ರು. ವೆಚ್ಚದಲ್ಲಿ ಹೂಳು ತೆಗೆಯಲು, ಕೆರೆ ಒತ್ತುವರಿ ತೆರವುಗೊಳಿಸಿ ನಾಲಾ ವ್ಯಾಪ್ತಿಯ ಕಾಲುವೆಗಳ ಅಭಿವೃದ್ಧಿಗೆ 47 ಕೋಟಿ ರು. ವೆಚ್ಚದಲ್ಲಿ ಕಾಮಗಾರಿಗೆ ಶೀಘ್ರದಲ್ಲೇ ಚಾಲನೆ ನೀಡಲಾಗುವುದು.

ಕನ್ನಡಪ್ರಭ ವಾರ್ತೆ ಕೆ.ಎಂ.ದೊಡ್ಡಿ

ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ವಿರೋಧಿಗಳ ಟೀಕೆಗಳಿಗೆ ಹೆದರುವುದಿಲ್ಲ. ಜನರ ಸೇವೆ ನನಗೆ ಮುಖ್ಯ ಎಂದು ಶಾಸಕ ಕೆ.ಎಂ.ಉದಯ್ ತಿಳಿಸಿದರು.

ಪಟ್ಟಣದ ಕಾವೇರಿ ನೀರಾವರಿ ನಿಗಮದ ಆವರಣದಲ್ಲಿ ಸುಮಾರು 4 ಕೋಟಿ ರು. ವೆಚ್ಚದಲ್ಲಿ ಬಹುಮಡಿ ಕಟ್ಟಡದ ಕಾಮಗಾರಿಗೆ ಭೂಮಿ ಪೂಜೆ ನೆರೆವೇರಿಸಿ ಮಾತನಾಡಿ, ಮದ್ದೂರು ತಾಲೂಕನ್ನು ಮಾದರಿ ಕ್ಷೇತ್ರ ಮಾಡುವ ಗುರಿ ಹೊಂದಿದ್ದೇನೆ. ಯಾವುದೇ ಮುಲಾಜಿಗೂ, ಟೀಕೆಗಳಿಗೆ ಸೊಪ್ಪು ಹಾಕುವುದಿಲ್ಲ ಎಂದರು.

ಸೂಳೆಕೆರೆ ಅಭಿವೃದ್ಧಿಗೆ 34 ಕೋಟಿ ರು. ವೆಚ್ಚದಲ್ಲಿ ಹೂಳು ತೆಗೆಯಲು, ಕೆರೆ ಒತ್ತುವರಿ ತೆರವುಗೊಳಿಸಿ ನಾಲಾ ವ್ಯಾಪ್ತಿಯ ಕಾಲುವೆಗಳ ಅಭಿವೃದ್ಧಿಗೆ 47 ಕೋಟಿ ರು. ವೆಚ್ಚದಲ್ಲಿ ಕಾಮಗಾರಿಗೆ ಶೀಘ್ರದಲ್ಲೇ ಚಾಲನೆ ನೀಡಲಾಗುವುದು ಎಂದರು.

ಗ್ಯಾರಂಟಿ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಬಿ.ಬಸವರಾಜು ಮಾತನಾಡಿ, ಮದ್ದೂರು ಕ್ಷೇತ್ರದಲ್ಲಿ ಶಾಸಕ ಉದಯ್ ಕಳೆದೆರಡು ವರ್ಷಗಳಲ್ಲಿ 1300 ಕೋಟಿಗೂ ಹೆಚ್ಚಿನ ಅನುದಾನ ತಂದು ಅಭಿವೃದ್ಧಿ ಮಾಡುತ್ತಿದ್ದಾರೆ. ಶಾಸಕರ ವಿರುದ್ಧ ಅಪಪ್ರಚಾರಗಳಿಗೆ ಕಿವಿಗೊಡಬಾರದು ಎಂದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎ.ಎಸ್.ರಾಜೀವ್ ಮಾತನಾಡಿ, ಕ್ಷೇತ್ರ ಅಭಿವೃದ್ಧಿಯಲ್ಲಿ ಸುಮಾರು 20 ವರ್ಷಗಳ ಹಿಂದೆಯಿದ್ದು, ಈಗ ಶಾಸಕ ಉದಯ್ ಅವರು ಸಾವಿರಾರು ಕೋಟಿ ತಂದು ಅಭಿವೃದ್ಧಿ ಪರ್ವ ಸೃಷ್ಟಿಸಿದ್ದಾರೆ ಎಂದು ಶ್ಲಾಘೀಸಿದರು.

ಇದೇ ವೇಳೆ ಕಾವೇರಿ ನೀರಾವರಿ ನಿಗಮ ಉಪ ವಿಭಾಗದ ಕಟ್ಟಡದ ನಿವೇಶನ ದಾನಿಗಳಾದ ಅಣ್ಣೂರು ಗ್ರಾಮದ ಬಿದರಹಳ್ಳಿ ಪುಟ್ಟೇಗೌಡರ ಪುತ್ರ ಚಂದ್ರು ಅವರನ್ನು ಶಾಸಕ ಉದಯ್ ಹಾಗೂ ಇಲಾಖೆ ಸಿಬ್ಬಂದಿ ಅಭಿನಂದಿಸಿದರು.

ಈ ವೇಳೆ ಗ್ರಾಪಂ ಅಧ್ಯಕ್ಷೆ ಸೌಭಾಗ್ಯ ರಾಮಣ್ಣ, ಕಾವೇರಿ ನೀರಾವರಿ ನಿಗಮದ ಕಾರ್ಯಪಾಲಕ ಅಭಿಯಂತರ ನಂಜುಂಡೇಗೌಡ, ಎಇಇ ಪ್ರಶಾಂತ್, ಎಇ ಅವಿನಾಶ್, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಅಜ್ಜಹಳ್ಳಿ ರಾಮಕೃಷ್ಣ, ಭಾರತಿನಗರ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಮಮತಾ, ಯುವ ಘಟಕದ ಅಧ್ಯಕ್ಷ ಪ್ರಜಾಪ್ರಿಯ ವೆಂಕಟೇಶ್, ಎಸ್ಸಿ ವಿಭಾಗದ ಅಧ್ಯಕ್ಷ ಅಮೀನ್ ಶಿವಲಿಂಗಯ್ಯ, ಗ್ರಾಪಂ ಸದಸ್ಯರಾದ ಪುಟ್ಟರಾಮು, ರವಿಚಂದ್ರ, ಮಂಜುನಾಥ್, ಕೆ.ವಿ. ಶ್ರೀನಿವಾಸ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.ಭಾರತೀನಗರ ಪಟ್ಟಣ ಪಂಚಾಯ್ತಿ ಮಾಡುವುದು ಶತಸಿದ್ಧ: ಕೆ.ಎಂ.ಉದಯ್

ಕೆ.ಎಂ.ದೊಡ್ಡಿ:

ಮದ್ದೂರಿನ ಪುರಸಭೆಯನ್ನು ನಗರಸಭೆಯನ್ನಾಗಿ ಮೇಲ್ದರ್ಜೇಗೇರಿಸಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಭಾರತೀನಗರವನ್ನು ಪಟ್ಟಣ ಪಂಚಾಯ್ತಿಯನ್ನಾಗಿಸಲು ಕ್ರಿಯಾ ಯೋಜನೆ ರೂಪಿಸಲಾಗುವುದು ಎಂದು ಶಾಸಕ ಕೆ.ಎಂ.ಉದಯ್ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾರತೀನಗರ ವ್ಯಾಪಾರ-ವಹಿವಾಟು ಸೇರಿದಂತೆ ಯಾವುದೇ ತಾಲೂಕಿಗೆ ಕಡಿಮೆ ಇಲ್ಲವೆಂಬಂತೆ ನಿರೀಕ್ಷೆಗೂ ಮೀರಿ ಬೆಳೆಯುತ್ತಿದೆ. ಇದು ಪಟ್ಟಣ ಪಂಚಾಯ್ತಿಯಾದರೆ ಇನ್ನಷ್ಟು ಅಭಿವೃದ್ಧಿ ಹೊಂದಿ ಬಡಾವಣೆಗಳು ನಿರ್ಮಾಣವಾಗಲಿವೆ. ಈ ಹಿನ್ನೆಲೆಯಲ್ಲಿ ಪಟ್ಟಣ ಪಂಚಾಯ್ತಿಯನ್ನಾಗಿಸುವುದು ಶತಸಿದ್ಧ ಎಂದರು.

ಭಾರತೀನಗರದಲ್ಲಿ ಸರ್ಕಾರಿ ಜಾಗವಿಲ್ಲ. ಒಂದೇ ಸೂರಿನಡಿ ಸರ್ಕಾರಿ ಕಚೇರಿಗಳು ಕಾರ್ಯ ನಿರ್ವಹಿಸಲು ಬಹುಮಹಡಿಗಳ ಕಟ್ಟಡ ನಿರ್ಮಾಣ ಮಾಡಲಾಗುತ್ತಿದೆ. ಇದರಲ್ಲಿ ಉಪ ತಹಸೀಲ್ದಾರ್. ನೋಂದಣಿ, ಕಂದಾಯ, ಲೋಕಪಯೋಗಿ, ಕಾವೇರಿ ನೀರಾವರಿ ಅಧಿಕಾರಿಗಳ ಕಚೇರಿ ಸೇರಿದಂತೆ ಹಲವು ಸರ್ಕಾರಿ ಕಚೇರಿಗಳು ಇರಲಿವೆ ಎಂದರು.

ಕೆಲವು ವರ್ಷಗಳಿಂದ ಕ್ಷೇತ್ರದಲ್ಲಿ ಆಡಳಿತ ನಡೆಸಿದವರು ಶಾಶ್ವತ ರೂಪು ರೇಷ ನೀಡುವಲ್ಲಿ ವಿಫಲವಾಗಿದ್ದಾರೆ. ಕ್ಷೇತ್ರದಲ್ಲಿನ ಸರ್ಕಾರಿ ಕಟ್ಟಡಗಳನ್ನು ನಿರ್ಮಿಸಿ ಈಗಿರುವ ಕಟ್ಟಡಗಳಿಗೆ ಒಂದು ಹೊಸ ಸ್ಪರ್ಶನೀಡಿ ಸಾರ್ವಜನಿಕ ಸೇವೆಗಳಿಗೆ ಒದಗಿಸಲು ಹಗಲಿರುಳು ಶ್ರಮಿಸುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

PREV

Recommended Stories

ರೇಣುಕಾಂಬೆ ದರ್ಶನಕ್ಕೆ ಬಂದಿದ್ದಾಗ ಮಗುವಿಗೆ ಜನ್ಮ ನೀಡಿದ ಅವಿವಾಹಿತೆ
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ