ಬಳ್ಳಾರಿ: ಪ್ರತಿಯೊಬ್ಬರ ಜೀವನದಲ್ಲಿ ಆರೈಕೆದಾರರ ಪಾತ್ರ ಮಹತ್ವದಾಗಿದ್ದು, ವಿಶೇಷಚೇತನರ ಹಾಗೂ ಹಿರಿಯರನ್ನು ಆರೈಕೆ ಮಾಡುವುದು ವಿಶೇಷ ಸೇವೆಯಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನೆ ಹೇಳಿದರು.ಜಿಲ್ಲಾಡಳಿತ, ಜಿಪಂ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ- ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ಅಂಗವಿಕಲರ ಪುನರ್ವಸತಿ ಕೇಂದ್ರ ಹಾಗೂ ಅನುಗ್ರಹ ವಿಶೇಷ ಮಕ್ಕಳ ವಸತಿ ರಹಿತ ಶಾಲೆ ಇವರ ಸಂಯುಕ್ತಾಶ್ರಯದಲ್ಲಿ ನಗರದ ಅನುಗ್ರಹ ವಿಶೇಷ ಮಕ್ಕಳ ವಸತಿ ರಹಿತ ಶಾಲೆಯಲ್ಲಿ ಆಯೋಜಿಸಿದ್ದ ವಿಶ್ವ ಆರೈಕೆದಾರರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಗೋವಿಂದಪ್ಪ ಹೆಚ್.ಎಂ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.
ಈ ಸಂದರ್ಭದಲ್ಲಿ ಬಳ್ಳಾರಿ ಧರ್ಮ ಕ್ಷೇತ್ರದ ಕೋಶಾಧಿಕಾರಿಗಳಾದ ಫದಾರ್ ಐವನ್ ಫಿಂಟೂ, ಚೆಂಗಾರೆಡ್ಡಿ, ಬುದ್ದಿಮಾಂದ್ಯ ಮಕ್ಕಳ ವಸತಿಯುತ ಶಾಲೆಯ ಗುರುಮೂರ್ತಿ, ಅನುಗ್ರಹ ಬುದ್ದಿಮಾಂದ್ಯ ಮಕ್ಕಳ ವಸತಿ ರಹಿತ ಶಾಲೆಯ ಮುಖ್ಯ ಗುರುಗಳಾದ ಸಿಸ್ಟರ್ ಪ್ರಜ್ಞಾ, ಅನುಗ್ರಹ ಶಾಲೆಯ ಹಿರಿಯ ಶಿಕ್ಷಕಿ ಸಿಸ್ಟರ್ ಮರ್ಲಿನ್, ಶಿಕ್ಷಕರಾದ ವಸಂತ್ ಕುಮಾರ್, ಆರೈಕೆದಾರರ ಪರವಾಗಿ ಪೋಷಕರಾದ ಶಿವರಾಮ್ ಹಾಗೂ ಇತರರು ಉಪಸ್ಥಿತರಿದ್ದರು.ಬಳ್ಳಾರಿಯ ಅನುಗ್ರಹ ವಿಶೇಷ ಮಕ್ಕಳ ವಸತಿ ರಹಿತ ಶಾಲೆಯಲ್ಲಿ ಆಯೋಜಿಸಿದ್ದ ವಿಶ್ವ ಆರೈಕೆದಾರರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಹಿರಿಯ ಸಿವಿಲ್ ನ್ಯಾಯಾಧೀಶ ರಾಜೇಶ್ ಎನ್.ಹೊಸಮನೆ ಮಾತನಾಡಿದರು.