ಅಧಿಕಾರದ ಹಪಾಹಪಿಗೆ ಕೆಲಸ ಮಾಡುತ್ತಿಲ್ಲ: ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ

KannadaprabhaNewsNetwork |  
Published : Oct 20, 2024, 02:05 AM ISTUpdated : Oct 20, 2024, 12:43 PM IST
nikhil kumaraswamy

ಸಾರಾಂಶ

ಲೋಕಸಭಾ ಚುನಾವಣೆ ಹಿನ್ನೆಲೆ ರಾಜ್ಯದ ಹಿತದೃಷ್ಟಿಯಿಂದ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರು ಮೈತ್ರಿ ನಿರ್ಧಾರ ತೆಗೆದುಕೊಂಡಿದ್ದರು. ಇದೀಗ ಇದು ಉಪಚುನಾವಣೆಯಲ್ಲೂ ಮುಂದುವರಿಯಲಿದೆ.

ಹುಬ್ಬಳ್ಳಿ: ನಾನು ಅಧಿಕಾರದ ಹಪಾಹಪಿಗಾಗಿ ಕೆಲಸ ಮಾಡುತ್ತಿಲ್ಲ. ಪಕ್ಷ ಕೊಡುವ ಜವಾಬ್ದಾರಿ ನಿರ್ವಹಿಸುತ್ತಿದ್ದೇನೆ ಎಂದು ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಹೇಳಿದರು.

ನಗರದಲ್ಲಿ ಚನ್ನಪಟ್ಟಣ ಟಿಕೆಟ್‌ ಕುರಿತು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಪಕ್ಷ ಸಂಘಟನೆ ದೃಷ್ಟಿಯಿಂದ ರಾಜ್ಯದಲ್ಲಿ ಪ್ರವಾಸ ಮಾಡುತ್ತಿರುವುದಾಗಿ ಹೇಳಿದರು.

ಶಿಗ್ಗಾಂವಿ‌ ಹಾಗೂ ಸಂಡೂರು ಕ್ಷೇತ್ರದಲ್ಲಿ ಪ್ರವಾಸ ಕೈಗೊಂಡಿದ್ದೇವೆ. ಉಪಚುನಾವಣೆ ಹಿನ್ನೆಲೆ ಎರಡೂ ಪಕ್ಷಗಳ ಕಾರ್ಯಕರ್ತರು ಹೊಂದಾಣಿಕೆ ಮೂಲಕ‌ ಕೈಜೋಡಿಸಬೇಕು‌ ಎನ್ನುವುದು ಉದ್ದೇಶ. ಈಗಾಗಲೇ ಏಳು ಜಿಲ್ಲೆಗಳ ಪ್ರವಾಸ ಮಾಡಿದ್ದೇವೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಒಳ್ಳೆಯ ವಾತಾವರಣ ಸೃಷ್ಟಿಯಾಗಿತ್ತು . ಈ ಬಾರಿಯೂ ಕೂಡ ಉಪಚುನಾವಣೆಯಲ್ಲಿ ಹೊಂದಾಣಿಕೆ ಮಾಡಿಕೊಳ್ಳುವ ಉದ್ದೇಶವಿದೆ ಎಂದರು.

ಸಿ.ಪಿ. ಯೋಗೀಶ್ವರಗೆ ಚನ್ನಪಟ್ಟಣ ಟಿಕೆಟ್ ನೀಡುವ ಕುರಿತಂತೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ಲೋಕಸಭಾ ಚುನಾವಣೆ ಹಿನ್ನೆಲೆ ರಾಜ್ಯದ ಹಿತದೃಷ್ಟಿಯಿಂದ ದೇವೇಗೌಡರು ನಿರ್ಧಾರ ತೆಗೆದುಕೊಂಡಿದ್ದರು. ಫಲಿತಾಂಶದ ಮೂಲಕ‌ ರಾಜ್ಯದ ಜನ ನಮಗೆ ಸಹಿ ಹಾಕಿದ್ದಾರೆ. ಕೇಂದ್ರ ಬಿಜೆಪಿ ವರಿಷ್ಠರು ಈಗಾಗಲೇ ವರದಿ ಪಡೆದಿದ್ದಾರೆ. ಎರಡೂ ಪಕ್ಷದ ಮುಖಂಡರು ಸೂಕ್ತ ತೀರ್ಮಾನ ಕೈಗೊಳ್ಳುತ್ತಾರೆ. ನಾನು ಪಕ್ಷದ ಒಬ್ಬ‌ ಸಾಮಾನ್ಯ ಕಾರ್ಯಕರ್ತ. ಪಕ್ಷ ಕೊಟ್ಟ ಜವಾಬ್ದಾರಿಯನ್ನು ನಿರ್ವಹಿಸುತ್ತಿದ್ದೇನೆ ಎಂದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸ್ವಾರ್ಥಕ್ಕಾಗಿ ಬ್ಲ್ಯಾಕ್‌ಮೇಲ್‌ ಮಾಡಲು ಇಷ್ಟವಿಲ್ಲ: ಡಿಸಿಎಂ
ಒಪಿಎಸ್‌ ಜಾರಿಗೆ ಸರ್ಕಾರಕ್ಕೆ ಒತ್ತಾಯಿಸುವೆ-ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಒತ್ತಾಯ