ಪಳ್ಳಿ ಸರ್ಕಾರಿ ಶಾಲೆಯಲ್ಲಿ ಮಕ್ಕಳಿಗೆ ನೋಟ್ ಬುಕ್ ವಿತರಣೆ

KannadaprabhaNewsNetwork |  
Published : Jun 12, 2026, 03:45 AM IST
ಪಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕಗಳ ವಿತರಣೆ | Kannada Prabha

ಸಾರಾಂಶ

ವಿದ್ಯಾರ್ಥಿಗಳು ಕಲಿಕೆಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವುದರೊಂದಿಗೆ ಬರುವ ಸವಾಲುಗಳನ್ನು ಎದುರಿಸಿ ಸಾಧನೆಯ ಹಾದಿಯಲ್ಲಿ ಮುನ್ನಡೆಯಬೇಕು. ಏನೇ ಕಷ್ಟಗಳು ಎದುರಾದರೂ ನಿರ್ದಿಷ್ಟ ಗುರಿಯನ್ನು ಮುಟ್ಟುವವರೆಗೆ ವಿರಮಿಸಬಾರದು ಎಂದು ಉದ್ಯಮಿ ಭರತ್ ಹೆಗ್ಡೆ ಪಳ್ಳಿ ಹೇಳಿದರು.

ಕಾರ್ಕಳ: ವಿದ್ಯಾರ್ಥಿಗಳು ಕಲಿಕೆಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವುದರೊಂದಿಗೆ ಬರುವ ಸವಾಲುಗಳನ್ನು ಎದುರಿಸಿ ಸಾಧನೆಯ ಹಾದಿಯಲ್ಲಿ ಮುನ್ನಡೆಯಬೇಕು. ಏನೇ ಕಷ್ಟಗಳು ಎದುರಾದರೂ ನಿರ್ದಿಷ್ಟ ಗುರಿಯನ್ನು ಮುಟ್ಟುವವರೆಗೆ ವಿರಮಿಸಬಾರದು ಎಂದು ಉದ್ಯಮಿ ಭರತ್ ಹೆಗ್ಡೆ ಪಳ್ಳಿ ಹೇಳಿದರು.

ಗುರುವಾರ ಕಾರ್ಕಳ ತಾಲೂಕಿನ ಪಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕಗಳ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ನಿರ್ದಿಷ್ಟವಾದ ಗುರಿಯನ್ನು ಇಟ್ಟು ಕೊಂಡು ಮುನ್ನಡೆಯಬೇಕು. ಸಾಧನೆಗೆ ಯಾವುದೂ ಅಡ್ಡಿಯಾಗಬಾರದು. ತಮ್ಮ ಹೆತ್ತವರು, ಪೋಷಕರಿಗೆ ಕೀರ್ತಿ ತರುವ ಕೆಲಸವನ್ನು ವಿದ್ಯಾರ್ಥಿಗಳು ಮಾಡಬೇಕು ಎಂದವರು ಹೇಳಿದರು.

ವಿದ್ಯಾರ್ಥಿಗಳಿಗೆ ಶಾಲಾ ನೋಟ್ ಬುಕ್ ಕೊಡುಗೆ ನೀಡಿದ ಭರತ್ ಹೆಗ್ಡೆಯವರನ್ನು ಈ ಸಂದರ್ಭ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಪ್ರಭಾಕರ ಬಂಗೇರ, ಸದಸ್ಯೆ ಅಶ್ವಿನಿ ನಾಯಕ್ ಹಾಗೂ ಶಿಕ್ಷಕರು ಉಪಸ್ಥಿತರಿದ್ದರು.ಮುಖ್ಯ ಶಿಕ್ಷಕಿ ನಾಗರತ್ನ ಸ್ವಾಗತಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ಲ್ಯಾನ್ಸ್ ಲೆಟ್ ಕಿರಣ್ ಬರ್ಬೋಜ ವಂದಿಸಿದರು. ಇಂಗ್ಲೀಷ್ ಶಿಕ್ಷಕಿ ಚಿತ್ರಾಕ್ಷಿ ಕಾರ್ಯಕ್ರಮ ನಿರೂಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮೋದಿ ದಾಖಲೆ ಆಡಳಿತ: ಕೊಡವೂರು ದೇವಸ್ಥಾನದಲ್ಲಿ ವಿಶೇಷ ಪೂಜೆ
ನೀರಿನ ಪರೀಕ್ಷೆ ನಡೆಸುವುದು ನಿರಂತರವಾಗಿರಲಿ: ಜಿ.ಪಂ. ಸಿಇಒ ಸೂಚನೆ