ಕನ್ನಡಪ್ರಭ ವಾರ್ತೆ ಬೆಳಗಾವಿ
ಇಲ್ಲಿನ ಸುವರ್ಣ ವಿಧಾನಸೌಧದಲ್ಲಿ ಬುಧವಾರ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ರೈತರಿಗೆ ಬರ ಪರಿಹಾರವನ್ನು ಶೀಘ್ರ ಮತ್ತು ಪಾರದರ್ಶಕವಾಗಿ ನೀಡಲು ಫ್ರೂಟ್ಸ್ ನವೀಕರಣಕ್ಕೆ ಸೂಚಿಸಲಾಗಿತ್ತು. ಶೇ.80 ರಷ್ಟು ಗುರಿ ನೀಡಲಾಗಿತ್ತು. ಬೆಳಗಾವಿ ಜಿಲ್ಲೆ ಈ ಗುರಿಯನ್ನು ಪೂರೈಸಿರುವುದು ಸಂತಸದ ವಿಚಾರ ಎಂದರು.
ಜಿಲ್ಲೆಯ ಎಲ್ಲಾ ಅಧಿಕಾರಿಗಳು ಕಳೆದ ಎರಡು ತಿಂಗಳಿನಿಂದ ಆಂದೋಲನ ಮಾದರಿಯಲ್ಲಿ ಫ್ರೂಟ್ಸ್ ದತ್ತಾಂಶ ನವೀಕರಣಕ್ಕೆ ಕೆಲಸ ಮಾಡಿದ್ದೀರಿ. ಆದರೆ, ಆಧಾರ್ ಮತ್ತು ಪಹಣಿ ಲಿಂಕ್ ಗೂ ಎಲ್ಲಾ ಅಧಿಕಾರಿಗಳೂ ಇದೇ ಮಾದರಿಯಲ್ಲಿ ಕೆಲಸ ನಿರ್ವಹಿಸಬೇಕು ಎಂದರು.ಹಲವು ಜಿಲ್ಲೆಗಳಲ್ಲಿ ಯಾರದ್ದೋ ಭೂಮಿಗೆ ಅದೇ ಹೆಸರಿನ ಮತ್ತೊಬ್ಬ ವ್ಯಕ್ತಿಗೆ ಪರಿಹಾರ ನೀಡಿರುವ, ಯಾವುದೋ ಜಿಲ್ಲೆಯ ರೈತರ ಪರಿಹಾರ ಹಣ ಮತ್ತ್ಯಾವುದೋ ಜಿಲ್ಲೆಯ ರೈತರಿಗೆ ನೀಡಿರುವ, ಹಣ ದುರುಪಯೋಗವಾಗಿರುವ ಹಲವು ಪ್ರಕರಣಗಳು ನಮ್ಮ ಗಮನಕ್ಕೆ ಬಂದಿವೆ. ಆಧಾರ್ ಮತ್ತು ಪಹಣಿ ಲಿಂಕ್ ಮಾಡುವ ಮೂಲಕ ಮಾತ್ರ ಇಂತಹ ಅಕ್ರಮಗಳನ್ನು ಸಂಪೂರ್ಣವಾಗಿ ನಿಯಂತ್ರಿಸಲು ಸಾಧ್ಯ ಎಂದರು.
ಬೆಳಗಾವಿ ರಾಜ್ಯದಲ್ಲೇ ಅತಿದೊಡ್ಡ ಜಿಲ್ಲೆಯಾಗಿದ್ದು, ಇಷ್ಟು ದೊಡ್ಡ ಜಿಲ್ಲೆಗೆ 164 ತುಂಬಾ ಸಣ್ಣ ಸಂಖ್ಯೆ. ಜಿಲ್ಲೆಯಲ್ಲಿ ಯಾವ ಜನವಸತಿ ಪ್ರದೇಶ ಕಂದಾಯ ಗ್ರಾಮಗಳಾಗಲು ಅರ್ಹ ಎಂಬ ಮಾಹಿತಿ ಗ್ರಾಮ ಲೆಕ್ಕಾಧಿಕಾರಿಗೆ ಇರುತ್ತದೆ. ಹೀಗಾಗಿ ಗ್ರಾಮ ಲೆಕ್ಕಾಧಿಕಾರಿಗಳು ತಹಶೀಲ್ದಾರ್ ಜೊತೆಗೆ ಚರ್ಚಿಸಿ ಮತ್ತಷ್ಟು ತಾಂಡಾ, ಹಟ್ಟಿ, ಗೊಲ್ಲರಹಟ್ಟಿಗಳನ್ನು ಗುರುತಿಸಿ ಪ್ರಸ್ತಾವನೆ ಕಳುಹಿಸಿ ಎಂದು ತಾಕೀತು ಮಾಡಿದರು.
ಬೆಳಗಾವಿ ಜಿಲ್ಲೆ ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ಹೈಕೋರ್ಟ್ ನಲ್ಲಿರುವ ಹಲವು ಪ್ರಕರಣಗಳಲ್ಲಿ ತೆಗೆದುಕೊಂಡಿರು ಕ್ರಮ ಶೂನ್ಯ. ತಹಸೀಲ್ದಾರರು ನ್ಯಾಯಾಲಯದಲ್ಲಿ ಕನಿಷ್ಟ ವಕಾಲತ್ತನ್ನೂ ಸಹ ಸಲ್ಲಿಸಿಲ್ಲ. ವಕಾಲತ್ತು ಸಲ್ಲಿಸಲು ಏನ್ರೀ ಸಮಸ್ಯೆ ಎಂದು ಅಧಿಕಾರಿಗಳ ವಿರುದ್ಧ ಸಚಿವರು ಕಿಡಿಕಾರಿದರು.
ತಹಶೀಲ್ದಾರ್-ಎಸಿ ಕೋರ್ಟ್ ಕೇಸ್: ಸಚಿವರು ಗರಂ
ಕಡ್ಡಾಯ ಇ-ಆಫೀಸ್ ಬಳಕೆಗೆ ಸೂಚಿಸಿ ಆರು ತಿಂಗಳಾಗಿದೆ. ಬೆಳಗಾವಿಯ ಎಲ್ಲಾ ತಾಲೂಕುಗಳಲ್ಲೂ ಇ-ಆಫೀಸ್ ಅನುಷ್ಠಾನವಾಗಿದೆ ಎಂದು ವರದಿ ನೀಡಿದ್ದೀರಿ. ಇ-ಆಫೀಸನ್ನು ನಾವು ಶೋಕಿಗೆ ಜಾರಿ ಮಾಡಿಲ್ಲ. ಸರ್ಕಾರಿ ಸೇವೆ ಜನರಿಗೆ ಶೀಘ್ರವಾಗಿ ನೀಡುವ ಉದ್ದೇಶದಿಂದ ಇ-ಆಫೀಸ್ ಜಾರಿ ಮಾಡಲಾಗಿದೆ. ಎಲ್ಲಾ ತಹಸೀಲ್ದಾರ್‌ಗಳೂ ಇನ್ಮುಂದೆ ಇ-ಆಫೀಸ್ ಮೂಲಕವೇ ಕಡತಗಳ ವಿಲೇವಾರಿ ನಡೆಸಬೇಕು. ಭೌತಿಕ ಕಡತಗಳನ್ನು ಸ್ವೀಕರಿಸಬಾರದು. ಟಪಾಲು ವಿಭಾಗದಲ್ಲೇ ಇ-ಆಫೀಸ್ ಬಳಕೆಯಾಗಬೇಕು. ಶೇ. 80ಕ್ಕೂ ಹೆಚ್ಚು ಕಡತಗಳನ್ನು ಇ-ಆಫೀಸ್ ಮೂಲಕ ವಿಲೇವಾರಿ ನಡೆಸದ ಅಧಿಕಾರಿಗಳಿಗೆ ನೋಟೀಸ್ ನೀಡಲಾಗುವುದು ಎಂದು ಎಚ್ಚರಿಕೆ ನೀಡಿದರು.