ಆಗುಂಬೆ ಘಾಟ್‌ ಸುರಂಗಮಾರ್ಗ ವರದಿಗೆ ಸೂಚನೆ: ಸಂಸದ ಬಿ.ವೈ.ರಾಘವೇಂದ್ರ ಮಾಹಿತಿ

KannadaprabhaNewsNetwork |  
Published : Sep 29, 2024, 01:33 AM IST
ಪೋಟೊ: 28ಎಸ್‌ಎಂಜಿಕೆಪಿ05ಶಿವಮೊಗ್ಗದ ಪ್ರವಾಸಿ ಮಂದಿರದಲ್ಲಿ ಕೇಂದ್ರ ಭೂ ಸಾರಿಗೆ ಸಚಿವಾಲಯದ ಡೈರೆಕ್ಟರ್ ಜನರಲ್ ಧರ್ಮೇಂದ್ರ ಸಾರಂಗಿ ಅವರನ್ನು ಸಂಸದ ಬಿ.ವೈ.ರಾಘವೇಂದ್ರ ಭೇಟಿ ಮಾಡಿ ಚರ್ಚೆ ನಡೆಸಿದರು. | Kannada Prabha

ಸಾರಾಂಶ

ಶಿವಮೊಗ್ಗದ ಪ್ರವಾಸಿ ಮಂದಿರದಲ್ಲಿ ಕೇಂದ್ರ ಭೂ ಸಾರಿಗೆ ಸಚಿವಾಲಯದ ಡೈರೆಕ್ಟರ್ ಜನರಲ್ ಧರ್ಮೇಂದ್ರ ಸಾರಂಗಿ ಅವರನ್ನು ಸಂಸದ ಬಿ.ವೈ.ರಾಘವೇಂದ್ರ ಭೇಟಿ ಮಾಡಿ, ಚರ್ಚೆ ನಡೆಸಿದರು.

ಕನ್ನಡಪ್ರಭ ವಾರ್ತೆ ಶಿವಮೊಗ್ಗ

ಮಲ್ಪೆ-ತೀರ್ಥಹಳ್ಳಿ ರಾಷ್ಟ್ರೀಯ ಹೆದ್ದಾರಿ-169 ಎ ಚತುಷ್ಪಥ ಯೋಜನೆಯಲ್ಲಿ, ಆಗುಂಬೆ ಘಾಟ್‌ನಲ್ಲಿ ಸುರಂಗ ಮಾರ್ಗ ನಿರ್ಮಾಣದ ಕಾರ್ಯ ಸಾಧ್ಯತೆಯ ಕುರಿತಂತೆ ವರದಿ ಸಲ್ಲಿಸಲು, ಕೇಂದ್ರ ಭೂ ಸಾರಿಗೆ ಸಚಿವಾಲಯದ ಡೈರೆಕ್ಟರ್ ಜನರಲ್ ಧರ್ಮೇಂದ್ರ ಸಾರಂಗಿ ಅವರು, ರಾಷ್ಟ್ರೀಯ ಹೆದ್ದಾರಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು.

ನಗರದ ಪ್ರವಾಸಿ ಮಂದಿರದಲ್ಲಿ ಕೇಂದ್ರ ಭೂ ಸಾರಿಗೆ ಸಚಿವಾಲಯದ ಡೈರೆಕ್ಟರ್ ಜನರಲ್ ಧರ್ಮೇಂದ್ರ ಸಾರಂಗಿ ಅವರನ್ನು ಭೇಟಿ ಮಾಡಿ ಚರ್ಚಿಸಿದ ಅವರು, ಆಗುಂಬೆ ಘಾಟ್ ರಸ್ತೆಗೆ ಪರ್ಯಾಯವಾಗಿ, ಮೇಗರವಳ್ಳಿಯಿಂದ ಸೋಮೇಶ್ವರದವರೆಗೆ 4 ಪಥದ ಸುರಂಗ ಮಾರ್ಗದ ರಸ್ತೆ ನಿರ್ಮಾಣ ಮಾಡಲು ಡಿಪಿಆರ್ ಸಿದ್ಧಪಡಿಸಲು ಅನುಮತಿ ನೀಡಲಾಗಿದೆ. ಈ ಸಂಬಂಧ ಯೋಜನೆ ಅನುಷ್ಠಾನದ ಸಾಧ್ಯಾಸಾಧ್ಯತೆಗಳ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ ಎಂದು ಹೇಳಿದರು.ಸಿಗಂದೂರು ಸೇತುವೆ , ಶಿವಮೊಗ್ಗ - ಚಿತ್ರದುರ್ಗ ರಾಷ್ಟ್ರೀಯ ಹೆದ್ದಾರಿ, ಸಾಗರ ನಗರದಲ್ಲಿ ಚತುಷ್ಪಥ ರಸ್ತೆ ಕಾಮಗಾರಿ ಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸುವ ಕುರಿತಂತೆ ಚರ್ಚೆ ನಡೆಸಲಾಯಿತು. ಹಾಗೆಯೇ ಈಗಾಗಲೇ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿರುವ, ಶಿವಮೊಗ್ಗ - ಆನಂದಪುರ ನಡುವೆ ನಾಲ್ಕು ಪಥದ ರಸ್ತೆ ನಿರ್ಮಾಣ, ನೆಲ್ಲಿಸರದಿಂದ ತೀರ್ಥಹಳ್ಳಿವರೆಗಿನ ಚತುಷ್ಪಥ ಮಾರ್ಗ, ಬೈಂದೂರು - ನಾಗೋಡಿವರೆಗಿನ ದ್ವಿಪಥ ಮಾರ್ಗ, ಹೊಸೂರು ಹಾಗೂ ತಾಳಗುಪ್ಪ ರೈಲ್ವೆ ಮೇಲ್ಸೇತುವೆ ಕಾಮಗಾರಿಗಳ ಬಗ್ಗೆ ಭೂ ಸಾರಿಗೆ ಇಲಾಖೆ ಅಧಿಕಾರಿಗಳ ಜೊತೆ ಚರ್ಚಿಸಲಾಯಿತು ಎಂದು ಸಂಸದರು ತಿಳಿಸಿದ್ದಾರೆ.

ಹಾಗೆಯೇ ೨೦೨೪ - ೨೫ನೇ ಸಾಲಿಗೆ ಮಂಜೂರಾದ ಆಗುಂಬೆ ರಸ್ತೆ, ಆನಂದಪುರದಿಂದ ತಾಳಗುಪ್ಪದವರೆಗಿನ ರಸ್ತೆ, ಸಾಗರದಿಂದ ಮರಕುಟುಕದವರೆಗಿನ ರಸ್ತೆ ಹಾಗೂ ಬೈಂದೂರಿನಿಂದ ರಾಣೆಬೆನ್ನೂರು ನಡುವೆ ಬಾಕಿ ಉಳಿದಿರುವ ರಸ್ತೆ ಕಾಮಗಾರಿಗೆ ಕಾಲಮಿತಿಯೊಳಗೆ ಡಿಪಿಆರ್ ಗಳಿಗೆ ಮಂಜೂರಾತಿ ಪಡೆಯುವಂತೆ ಭೂ ಸಾರಿಗೆ ಅಧಿಕಾರಿಯು ಹೆದ್ದಾರಿ ಇಲಾಖೆ ಆಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದು ಮಾಹಿತಿ ನೀಡಿದರು.ಈ ಸಂದರ್ಭ ವಿಧಾನ ಪರಿಷತ್ ಸದಸ್ಯ ಧನಂಜಯ ಸರ್ಜಿ, ಕೇಂದ್ರ ಭೂ ಸಾರಿಗೆ ಸಚಿವಾಲಯದ ಪ್ರಾದೇಶಿಕ ಅಧಿಕಾರಿ ನರೇಂದ್ರ ಶರ್ಮಾ, ರಾಷ್ಟ್ರೀಯ ಹೆದ್ದಾರಿ ಅಧೀಕ್ಷಕ ಎಂಜಿನಿಯರ್ ರಾಜೇಶ್, ಕಾರ್ಯಪಾಲಕ ಎಂಜಿನಿಯರ್ ದಿವಾಕರ್ ಮತ್ತಿತರರು ಇದ್ದರು.

PREV

Recommended Stories

3ನೇ ಮಹಡಿಯಿಂದ ಆಯತಪ್ಪಿಬಿದ್ದು ಪಿಯು ವಿದ್ಯಾರ್ಥಿನಿ ಸಾವು
ಜೈಲೊಳಗೆ ಡ್ರಗ್ಸ್ ಸಾಗಿಸಲುಯತ್ನ: ವಾರ್ಡನ್ ಬಂಧನ