ಗಣರಾಜ್ಯೋತ್ಸವ ಅರ್ಥಪೂರ್ಣ ಆಚರಣೆಗೆ ಸೂಚನೆ

KannadaprabhaNewsNetwork |  
Published : Jan 12, 2024, 01:45 AM IST
೧೧ಕೆಎಲ್‌ಆರ್-೧೪ಕೋಲಾರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ೭೫ನೇ ಗಣರಾಜ್ಯೋತ್ಸವ ಆಚರಣೆಯ ಪೂರ್ವಭಾವಿ ಸಭೆಯಲ್ಲಿ ಜಿಲ್ಲಾಧಿಕಾರಿ ಅಕ್ರಂಪಾಷ ಮಾತನಾಡಿದರು. | Kannada Prabha

ಸಾರಾಂಶ

ಜಿಲ್ಲೆಯ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಕಡ್ಡಾಯವಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದು ತಿಳಿಸಿದ ಜಿಲ್ಲಾಧಿಕಾರಿ, ಇದು ರಾಷ್ಟ್ರೀಯ ಹಬ್ಬ ಎಲ್ಲರ ಪಾಲ್ಗೊಳುವಿಕೆ ಬಹು ಮುಖ್ಯ ಈ ನಿಟ್ಟಿನಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು.

ಕನ್ನಡಪ್ರಭ ವಾರ್ತೆ ಕೋಲಾರ

ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದ ಮೈದಾನದಲ್ಲಿ ಜ.೨೬ರಂದು ಗಣರಾಜ್ಯೋತ್ಸವ ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಸಿದ್ದತೆಗೆ ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಅಕ್ರಂ ಪಾಷ ಅವರು ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ೭೫ನೇ ಗಣರಾಜ್ಯೋತ್ಸವ ಆಚರಣೆಯ ಕುರಿತು ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಕಾರ್ಯಕ್ರಮಕ್ಕೂ ಮುನ್ನ ಒಂದು ವಾರ ಮುಂಚಿತವಾಗಿ ನಗರದ ಸ್ವಚ್ಚತೆಗೆ ಕ್ರಮವಹಿಸಲು ನಗರಸಭೆ ಆಯುಕ್ತರಿಗೆ ಸೂಚಿಸಿದರು.

ಶಿಷ್ಠಾಚಾರ ಪಾಲನೆ ಕಡ್ಡಾಯ

ಶಿಷ್ಟಾಚಾರದಂತೆ ಆಹ್ವಾನ ಪತ್ರಿಕೆ ಮುದ್ರಣ ಮಾಡಿಸಿ ಜನಪ್ರತಿನಿಧಿಗಳನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲು ಕ್ರಮವಹಿಸಿ ಎಂದು ಜಿಲ್ಲಾಧಿಕಾರಿ ಅಧಿಕಾರಿಗಳಿಗೆ ಸೂಚಿಸಿದರು. ಕಾರ್ಯಕ್ರಮದಲ್ಲಿ ರಾಷ್ಟ್ರಗೀತೆ, ರೈತಗೀತೆ ಮತ್ತು ನಾಡಗೀತೆ ಹಾಡಲು ಆಯೋಜಿಸಲು ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರಲ್ಲದೆ, ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜನೆಗೆ ನಿರ್ದೇಶನ ನೀಡಿದರು.

ವೇದಿಕೆ ಸಿದ್ಧತೆ, ರಾಷ್ಟ್ರಧ್ವಜಾರೋಣ ವ್ಯವಸ್ಥೆ, ಆಕರ್ಷಕ ಪಥಸಂಚಲನ, ಸನ್ಮಾನ, ಉಪಹಾರ ವ್ಯವಸ್ಥೆಗೆ ಈಗಾಗಲೇ ರಚಿಸಿರುವ ಉಪ ಸಮಿತಿಗಳು ನಿಗಾವಹಿಸಿ ಕ್ರಮಕೈಗೊಳ್ಳಲು ಸೂಚಿಸಿದರು. ಶಾಲಾ ಕಾಲೇಜು ಮಕ್ಕಳಿಗೆ ಚರ್ಚಾ ಸ್ಪರ್ಧೆ ಮತ್ತು ರಸಪ್ರಶ್ನೆ ಸ್ಪರ್ಧೆ ಏರ್ಪಡಿಸುವಂತೆ ತಿಳಿಸಿದರು.

ಅಧಿಕಾರಿಗಳು ಹಾಜರಾಗಬೇಕು

ಗಣರಾಜ್ಯೋತ್ಸವದ ಸಂದೇಶ ಸಿದ್ದತೆಗೆ ಎಲ್ಲಾ ಇಲಾಖೆ ಅಧಿಕಾರಿಗಳು ತಮ್ಮ ಇಲಾಖೆಯ ಅಭಿವೃದ್ಧಿ ಕಾರ್ಯಕ್ರಮಗಳ ಮಾಹಿತಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಗೆ ನೀಡುವಂತೆ ಸೂಚಿಸಿದರು. ಜಿಲ್ಲೆಯ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಕಡ್ಡಾಯವಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದು ತಿಳಿಸಿದ ಜಿಲ್ಲಾಧಿಕಾರಿ, ಇದು ರಾಷ್ಟ್ರೀಯ ಹಬ್ಬ ಎಲ್ಲರ ಪಾಲ್ಗೊಳುವಿಕೆ ಬಹು ಮುಖ್ಯ ಈ ನಿಟ್ಟಿನಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ತಿಳಿಸಿದರು. ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವವರನ್ನು ಜಿಲ್ಲಾಡಳಿತದಿಂದ ಸನ್ಮಾನಿಸಲಾಗುವುದು. ಎಲ್ಲಾ ಸರ್ಕಾರಿ ಕಚೇರಿ ಕಟ್ಟಡಗಳಿಗೆ ದೀಪಾಲಂಕಾರಕ್ಕೆ ಅಧಿಕಾರಿಗಳು ಕ್ರಮವಹಿಸಿ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಜಿಪಂ ಸಿಇಓ ಪದ್ಮ ಬಸವಂತಪ್ಪ, ಎಡಿಸಿ ಡಾ.ಶಂಕರ ವಾಣಿಕ್ಯಳ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಜಗದೀಶ್ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪಿಯು - 2 ಪರೀಕ್ಷೆ : ಕೆಎಸ್ಸಾರ್ಟಿಸಿ ಬಸ್ಸಲ್ಲಿ ಫ್ರೀ ಪ್ರಯಾಣಕ್ಕೆ ಅವಕಾಶ-ಕೋರಿಕೆಯ ನಿಲುಗಡೆ ನೀಡಬೇಕು
ಬಿಪಿಎಲ್ ಕಾರ್ಡ್‌ದಾರರಿಗೆ ಸರ್ಕಾರದ ಸಿಹಿ ಸುದ್ದಿ : ಏನೆಲ್ಲಾ ಸಿಗುತ್ತೆ ?