ರಾಜ್ಯ ಕಾಂಗ್ರೆಸ್ ಸರಕಾರದ ಗೃಹ ಇಲಾಖೆ ಅಲ್ಪಸಂಖ್ಯಾತರ ತುಷ್ಟೀಕರಣ ಇಲಾಖೆಯಾಗಿ ಪರಿವರ್ತನೆಯಾಗಿದ್ದು, ಮತೀಯವಾದಿ ಶಕ್ತಿಗಳ ಕೈಗೊಂಬೆಯಾಗಿ ಮಾಜಿ ಸಚಿವ ಸಿ.ಟಿ. ರವಿ ಅವರಿಗೆ ಪೊಲೀಸ್ ಇಲಾಖೆ ನೀಡುವ ಮೂಲಕ ರಾಜ್ಯದ ಹಿಂದುತ್ವವಾದಿ ನಾಯಕರ ಧ್ವನಿ ಹತ್ತಿಕ್ಕಲು ರಾಜ್ಯ ಸರ್ಕಾರ ಮುಂದಾಗಿದೆ ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಉಡುಪಿ: ರಾಜ್ಯ ಕಾಂಗ್ರೆಸ್ ಸರಕಾರದ ಗೃಹ ಇಲಾಖೆ ಅಲ್ಪಸಂಖ್ಯಾತರ ತುಷ್ಟೀಕರಣ ಇಲಾಖೆಯಾಗಿ ಪರಿವರ್ತನೆಯಾಗಿದ್ದು, ಮತೀಯವಾದಿ ಶಕ್ತಿಗಳ ಕೈಗೊಂಬೆಯಾಗಿ ಮಾಜಿ ಸಚಿವ ಸಿ.ಟಿ. ರವಿ ಅವರಿಗೆ ಪೊಲೀಸ್ ಇಲಾಖೆ ನೀಡುವ ಮೂಲಕ ರಾಜ್ಯದ ಹಿಂದುತ್ವವಾದಿ ನಾಯಕರ ಧ್ವನಿ ಹತ್ತಿಕ್ಕಲು ರಾಜ್ಯ ಸರ್ಕಾರ ಮುಂದಾಗಿದೆ ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಗೃಹ ಸಚಿವ ಪ್ರಿಯಾಂಕ್ ಖರ್ಗೆ ಆರ್‌ಎಸ್‌ಎಸ್ ವಿರುದ್ಧ ಹೇಳಿಕೆ ನೀಡುವುದನ್ನೇ ದಿನಚರಿಯಾಗಿ ಮಾಡಿಕೊಂಡಿದ್ದಾರೆ. ಅವರು ಪೊಲೀಸ್ ಇಲಾಖೆಯನ್ನು ಕೈಗೊಂಬೆಯನ್ನಾಗಿಸಿಕೊಂಡಿದ್ದು, ಪೊಲೀಸರು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಂತೆ ಕಾರ್ಯ ನಿರ್ವಹಿಸುತ್ತಿದ್ದಾರೆ. ರಾಜ್ಯದಲ್ಲಿ ರಾಷ್ಟ್ರವಿರೋಧಿ ಶಕ್ತಿಗಳು ನೀಟ್ ಪರೀಕ್ಷೆಯ ನೆಪದಲ್ಲಿ ವಿದ್ಯಾರ್ಥಿಗಳ ಮುಖವಾಡ ಧರಿಸಿ ಪ್ರತಿಭಟನೆ ನಡೆಸಿ ಉಗ್ರರ ಪರ ಜೈಕಾರ ಹಾಕುತ್ತಾ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುತ್ತಿದ್ದರೂ ಯಾವುದೇ ಕ್ರಮ ಕೈಗೊಳ್ಳದ ಪೊಲೀಸ್ ಇಲಾಖೆ ಸಿ.ಟಿ. ರವಿ ವಿರುದ್ಧ ನೋಟಿಸ್ ನೀಡಲು ತುದಿಗಾಲಲ್ಲಿ ನಿಂತಿದೆ ಎಂದು ಅವರು ಟೀಕಿಸಿದ್ದಾರೆ.
ರಾಜ್ಯ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹಡೆಗೆಟ್ಟಿದ್ದರೂ ಯಾವುದೇ ಕಠಿಣ ಕ್ರಮ ವಹಿಸದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತೀಯ ಶಕ್ತಿಗಳ ಓಲೈಕೆಗಾಗಿ ಮಾಜಿ ಸಚಿವರ ವಿರುದ್ಧ ನೋಟಿಸ್ ನೀಡಲು ಮುಂದಾಗಿದ್ದಾರೆ. ವಿನಾಶ ಕಾಲೇ ವಿಪರೀತ ಬುದ್ಧಿ ಎಂಬಂತೆ ರಾಜ್ಯ ಸರ್ಕಾರ ಹದ್ದು ಮೀರಿ ವರ್ತಿಸುತ್ತಿದ್ದು, ರಾಜ್ಯದ ರಾಷ್ಟ್ರೀಯವಾದಿ ಚಿಂತನೆಯ ಜನತೆಯ ಸಿ.ಟಿ. ರವಿ ಜೊತೆ ನಿಲ್ಲಲಿದ್ದು, ಇಂತಹ ಸಾವಿರ ನೋಟಿಸ್‌ಗಳಿಂದಲೂ ಬಿಜೆಪಿ ನಾಯಕರ ಹೋರಾಟದ ಮನಃಸ್ಥಿತಿಯನ್ನು ಕುಗ್ಗಿಸಲು ಸಾಧ್ಯವಿಲ್ಲ ಎಂದು ಯಶ್ ಪಾಲ್ ಸುವರ್ಣ ಹೇಳಿದ್ದಾರೆ.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.