ಫುಟ್‌ಪಾತ್‌ ಒತ್ತುವರಿ ತೆರವುಗೊಳಿಸಲು ಸೂಚನೆ

KannadaprabhaNewsNetwork |  
Published : Jun 27, 2024, 01:04 AM IST
26ಬಿಜಿಪಿ1 | Kannada Prabha

ಸಾರಾಂಶ

ವಿನಾ ಕಾರಣ ಸಾರ್ವಜನಿಕರನ್ನು ಸರ್ಕಾರಿ ಕಚೇರಿಗಳಿಗೆ ಅಲೆದಾಡಿಸದೆ ತ್ವರಿತವಾಗಿ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ಒದಗಿಸುವ ಉದ್ದೇಶದಿಂದ ತಾಲೂಕು ಮಟ್ಟದಲ್ಲಿ ಸರ್ಕಾರ ಜನತಾ ದರ್ಶನ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.

ಕನ್ನಡಪ್ರಭ ವಾರ್ತೆ ಬಾಗೇಪಲ್ಲಿ

ಪಟ್ಟಣದ ಮುಖ್ಯ ರಸ್ತೆಯಲ್ಲಿನ ಪುಟ್‍ಪಾತ್ ಮೇಲೆ ನಿರ್ಮಿಸಿರುವ ಅನಧಿಕೃತ ಅಂಗಡಿಗಳ ತೆರೆವುಗೊಳಿಸಲು ಕ್ರಮ ಕೈಗೊಳ್ಳುವಂತೆ ಪುರಸಭೆ ಮುಖ್ಯಾಧಿಕಾರಿಗೆ ಜಿಲ್ಲಾಕಾರಿ ಪಿ.ಎನ್.ರವೀಂದ್ರ ಸೂಚಿಸಿದರು.

ಪಟ್ಟಣದ ತಾ.ಪಂ ಸಭಾಂಗಣದಲ್ಲಿ ನಡೆದ ತಾಲೂಕು ಮಟ್ಟದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಸಾರ್ವಜನಿಕರು ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಅಹವಾಲುಗಳನ್ನು ಸ್ವೀಕರಿಸಿದ ಬಳಿಕ ಮಾತನಾಡಿದ ಅ‍ವರು, ಮೂಲಭೂತ ಸೌಲಭ್ಯಗಳಲ್ಲಿ ಒಂದಾದ ಶೌಚಾಲಯಗಳ ನಿರ್ಮಾಣ ಹಾಗೂ ಪಾರ್ಕ್‍ಗಳ ನಿರ್ವಾಹಣೆಗೆ ಕಾಳಚಿವಹಿಸುವಂತೆ ಹೇಳಿದರು.ಜಾತಿ ಪ್ರಮಾಣ ಪತ್ರ ಮಂಜೂರು

ಜಾತಿ ಮತ್ತು ಆದಾಯ ಪ್ರಮಾಣ ಪತ್ರಕ್ಕೆ ಸಂಬಂಧಿಸಿದಂತೆ ಧಾರವಾಡ ಐಐಟಿಗೆ ಪ್ರವೇಶದ ಅರ್ಹತೆ ಪಡೆದಿದ್ದ ಬಾಗೇಪಲ್ಲಿಯ ವಂಶಿಕ.ಜಿ ಎಂಬ ವಿದ್ಯಾರ್ಥಿನಿಯ ಜಾತಿ ಮತ್ತು ಆಧಾಯ ಪ್ರಮಾಣ ಪತ್ರ ಅಸಿಂಧುವಾಗಿದ್ದರಿಂದ ನೂತನವಾಗಿ ಸಲ್ಲಿಸಿದ್ದ ಸದರಿ ಅರ್ಜಿಯ ವಿಲೆವಾರಿಗೆ ತೊಡಕಾಗಿತ್ತು. ಇಂದಿನ ಜನತಾ ದರ್ಶನದಲ್ಲಿ ಜಿಲ್ಲಾಧಿಕಾರಿಗಳು ಈ ಅರ್ಜಿಯನ್ನು ಪರಿಶೀಲನೆ ನಡೆಸಿ ಈ ಹಿಂದಿನ ಅರ್ಜಿಯನ್ನು ರದ್ದುಗೊಳಿಸಿ ಸ್ಥಳದಲ್ಲಿಯೇ ವಿಲೆವಾರಿ ಮಾಡಿ ಜಾತಿ ಮತ್ತು ಆಧಾಯ ಪ್ರಮಾಣ ಪತ್ರವನ್ನು ಮಂಜೂರು ಮಾಡಿದರು.

ಕಚೇರಿಗೆ ಅಲೆದಾಡಿಸಬೇಡಿ

ವಿನಾ ಕಾರಣ ಸಾರ್ವಜನಿಕರನ್ನು ಸರ್ಕಾರಿ ಕಚೇರಿಗಳಿಗೆ ಅಲೆದಾಡಿಸದೆ ತ್ವರಿತವಾಗಿ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ಒದಗಿಸುವ ಉದ್ದೇಶದಿಂದ ತಾಲೂಕು ಮಟ್ಟದಲ್ಲಿ ಸರ್ಕಾರ ಜನತಾ ದರ್ಶನ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಈ ಕಾರ್ಯಕ್ರಮವನ್ನು ಸಾರ್ವಜನಿಕರು ಬಳಸಿಕೊಳ್ಳುವಂತೆ ಜಿಲ್ಲಾಧಿಕಾರಿ ಮನವಿ ಮಾಡಿದರು.

ಡೀಸಿಗೆ 65 ಅರ್ಜಿಗಳು ಸಲ್ಲಿಕೆ

ಈ ಜನತಾ ದರ್ಶನ ಕಾರ್ಯಕ್ರಮದಲ್ಲಿ ಕಂದಾಯ ಇಲಾಖೆ ಸಂಬಂಧಿಸಿದಂತೆ 30, ಪುರಸಭೆಗೆ ವ್ಯಾಪ್ತಿಗೆ ಸೇರಿದ 18, ಗ್ರಾಮೀಣಾಭಿವೃದ್ದಿ, ಪಂಚಾಯತ್ ರಾಜ್ ಇಲಾಖೆಗೆ ಸೇರಿದ 10, ಪೊಲೀಸ್ ಇಲಾಖೆಗೆ ಸೇರಿದಂತೆ 5 ಅರ್ಜಿಗಳು ಒಟ್ಟು 65 ಅರ್ಜಿಗಳು ಬಂದಿದ್ದವು. ಈ ಎಲ್ಲಾ ಅರ್ಜಿಗಳನ್ನು ಸ್ವೀಕರಿಸಿದ ಜಿಲ್ಲಾಧಿಕಾರಿಗಳು ವಿಲೇವಾರಿಗೆ ಸೂಕ್ತ ಕ್ರಮವಹಿಸಿದರು.

ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ, ಜಿ.ಪಂ ಮುಖ್ಯ ಕಾರ್ಯನಿರ್ವಾಣಾಧಿಕಾರಿ ಪ್ರಕಾಶ್,ಜಿ,ಟಿ ನಿಟ್ಟಾಲಿ ರವರು ಜಂಟಿಯಾಗಿ ಸಾರ್ವಜನಿಕರ ದೂರುಗಳನ್ನ ಪರಿಶೀಲನೆ ನಡೆಸಿ ಸ್ಥಳದಲ್ಲಿಯೇ ಹಲವು ಅರ್ಜಿಗಳನ್ನು ಇತ್ಯರ್ಥಪಡಿಸಿದರು. ಉಳಿದ ಅರ್ಜಿಗಳನ್ನು ಕಾಲಮಿತಿಯಲ್ಲಿ ಇತ್ಯಾರ್ಥಗೊಳಿಸುವಂತೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಜಿ.ಪಂ ಉಪವಿಭಾಗಾಧಿಕಾರಿ ಡಿ.ಹೆಚ್.ಅಶ್ವಿನ್, ತಹಸೀಲ್ದಾರ್ ಪ್ರಶಾಂತ್ ಕೆ ಪಾಟಿಲ್, ತಾಪಂ ಇಒ ರಮೇಶ್ ಸೇರಿದಂತೆ ವಿವಿಧ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು.

26ಬಿಜಿಪಿ1: ಬಾಗೇಪಲ್ಲಿಯಲ್ಲಿ ನಡೆದ ತಾಲೂಕು ಮಟ್ಟದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ರವರು ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನೀರಿನಲ್ಲಿ ಕಾಳು ಹಾಕಿ ಕಲಬೆರಿಕೆ ಪತ್ತೆ ಮಾಡಿ
ಭಾಷಣ ಮಾಡಿಕೊಂಡು ಹೋದವನಲ್ಲ, ಪಕ್ಷದ ಎಲ್ಲಾ ಕೆಲ್ಸ ಮಾಡಿದ್ದೇನೆ: ಡಿಕೆಶಿ