ಮುಖ್ಯ ಇಂಜಿನಿಯರ್ ಕಚೇರಿಯಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಚಿವ ಡಿ.ಸುಧಾಕರ್ ತಾಕೀತುಕನ್ನಡಪ್ರಭ ವಾರ್ತೆ ಚಿತ್ರದುರ್ಗ
ಭದ್ರ ಮೇಲ್ದಂಡೆ ಮುಖ್ಯ ಇಂಜಿನಿಯರ್ ಕಚೇರಿಯಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ಚಿತ್ರದುರ್ಗ ಕಾಲುವೆ ಕಾಮಗಾರಿ ಬಗ್ಗೆ ಪ್ರಗತಿ ಪರಿಶೀಲನೆ ನಡೆಸಿದ ಅವರು, ಕಂದಾಯ ಮತ್ತು ಸರ್ವೇ ಇಲಾಖೆಯವರು ತಮ್ಮಜವಾಬ್ದಾರಿಗಳ ಸಮರ್ಥವಾಗಿ ನಿಭಾಯಿಸಬೇಕು. ಭೂ ಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಿ ಜಲಸಂಪನ್ಮೂಲ ಇಲಾಖೆಗೆ ಹಸ್ತಾಂತರಿಸಿದರೆ ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಕಾಮಗಾರಿ ಚುರುಕುಗೊಳಿಸಲು ಸಹಾಯವಾಗುತ್ತದೆ. ಭೂ ಸ್ವಾಧೀನ ನೆನೆಗುದಿಗೆ ಬಿದ್ದರೆ ಯೋಜನೆ ವಿಳಂಬವಾಗುತ್ತದೆ ಎಂದರು.
ಭದ್ರಾ ಮೇಲ್ದಂಡೆ ಈ ಭಾಗದ ಜನರ ಹಲವು ದಿನಗಳ ಕನಸು. ಚಿತ್ರದುರ್ಗ ಶಾಖಾ ಕಾಲುವೆ ನಿರ್ಮಾಣ ಸಂಬಂಧ ಎಲ್ಲೆಲ್ಲಿ ಅಡಚಣೆ ಇವೆ ತ್ವರಿತವಾಗಿ ನಿವಾರಿಸಬೇಕು. ಈ ವಿಚಾರದಲ್ಲಿಕಂದಾಯ ಇಲಾಖೆ ಹಾಗೂ ಸರ್ವೆ ಇಲಾಖೆ ಸಮನ್ವಯದಿಂದ ಕಾರ್ಯನಿರ್ವಹಿ ಸಬೇಕು.ಬಗೆ ಹರಿಯದ ಏನಾದರೂ ಸಮಸ್ಯೆ ಇದ್ದಲ್ಲಿ ಜಿಲ್ಲಾಡಳಿತ ಇಲ್ಲವೇ ತಮ್ಮ ಗಮನಕ್ಕೆ ತರುವಂತೆ ಜಲಸಂಪನ್ಮೂಲ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.ಚಿತ್ರದುರ್ಗ ಶಾಖಾ ಕಾಲುವೆಯ ಪ್ಯಾಕೇಜ್ 10ರ 90 ಕಿಮೀನಿಂದ 104ಕಿಮೀ ವರೆಗಿನ ಕಾಮಗಾರಿಗೆ ಅಲ್ಲಿಲ್ಲಿ ಅಡ್ಡಿಯಾಗಿದೆ. ಆದಷ್ಟು ಸಮಸ್ಯೆ ಬಗೆಹರಿಸಲು ಪ್ರಯತ್ನಿಸಲಾಗುತ್ತಿದೆ. ಭೂ ಸ್ವಾಧೀನ ಪಡೆಸಿಕೊಂಡ ಅವಾರ್ಡ ಮೊತ್ತವನ್ನು ಕೆಲ ರೈತರು ಪಡೆದುಕೊಳ್ಳದ ಕಾರಣ ನ್ಯಾಯಾಲಯದಲ್ಲಿ ಠೇವಣಿ ಇಡಲಾಗಿದೆ. ಕೆಲವು ಕಡೆ ಹಣ ಪಡೆದವರೂ ಕೂಡಾ ತಕರಾರು ಮಾಡುತ್ತಿದ್ದಾರೆ. ಬಗರ್ ಹುಕುಂ ಸಾಗುವಳಿದಾರರಿಂದಲೂ ಆಕ್ಷೇಪಣೆ ಕೇಳಿ ಬಂದಿವೆ ಎಂದು ಯೋಜನೆಯ ಕಾರ್ಯನಿರ್ವಾಹಕ ಇಂಜಿನಿಯರ್ ಕೆ.ಟಿ.ಹರೀಶ್ ಸಭೆ ಗಮನಕ್ಕೆ ತಂದರು.
ಡಿಡಿಎಲ್‌ಆರ್ ರಾಮಾಂಜನೇಯ, ಇಂಜಿನಿಯರ್‌ಗಳಾದ ಎಸ್.ಎಲ್.ವಿವೇಕಾನಂದ, ಚಂದ್ರಪ್ಪ ಬಾರಿಕರ್, ತಹಸೀಲ್ದಾರ್ ಡಾ.ನಾಗವೇಣಿ, ರಾಜೇಶ್, ಬೆಸ್ಕಾಂ ಇಂಜಿನಿಯರ್ ಜಯಣ್ಣ ಸೇರಿದಂತೆ ಜಲಸಂಪನ್ಮೂಲ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.