ಕನ್ನಡಪ್ರಭ ವಾರ್ತ ಹಾಸನ
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಓರಿಯೆಂಟಲ್ ವಿಮಾ ಕಂಪನಿಯ ಜಿಲ್ಲಾ ಸಂಯೋಜಕರು ರೈತರಿಂದ ಲಂಚ ಕೇಳುತ್ತಿರುವ ಬಗ್ಗೆ ದೂರುಗಳು ಬಂದಿವೆ. ಜೊತೆಗೆ ರೈತರಿಗೆ ಬೆದರಿಕೆ ಹಾಕಿ ಇಳುವರಿಯನ್ನು ನಾವು ಹೇಳಿದಂತೆ ಬರೆದುಕೊಡಿ ಎಂದು ಕೇಳುತ್ತಿರುವುದು ಕಂಡುಬಂದಿದೆ. ಎಚ್ಚರಿಕೆಯಿಂದ ಕರ್ತವ್ಯ ನಿರ್ವಹಿಸಲು ವಿಮಾ ಏಜೆನ್ಸಿಯ ಜಿಲ್ಲಾ ಸಮನ್ವಯ ಅಧಿಕಾರಿಗೆ ಸೂಚಿಸಿದರು.
ವಿಮಾ ಏಜೆನ್ಸಿ ಅವರು ಯಾವ ಗ್ರಾಮಗಳಿಗೆ ಯಾವ ದಿನದಂದು ಯಾರು ಕರ್ತವ್ಯ ನಿರ್ವಹಿಸಲು ಹೋಗುತ್ತಿದ್ದಾರೆ ಎಂಬ ಮಾಹಿತಿಯನ್ನು ತಹಸೀಲ್ದಾರ್‌ಗಳಿಗೆ ನೀಡುವಂತೆ ನಿರ್ದೇಶನ ನೀಡಿದರು.ಅಧಿಕಾರಿಗಳು ರೈತರ ಹೊಲಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡಿ ಸ್ಥಳೀಯ ಸಮಸ್ಯೆಗಳನ್ನು ರೈತರು ಹೇಳುತ್ತಾರೆ ಎಂದರು. ಮುಂಗಾರು ಬೆಳೆಯ ಬಾಕಿ ಇರುವ ಬೆಳೆ ಕಟಾವು ಪ್ರಯೋಗಗಳನ್ನು ಪೂರ್ಣಗೊಳಿಸಲು ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಕೃಷ್ಣ ಮೂರ್ತಿ, ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಶಾಜಿಯಾ, ಜಂಟಿ ಕೃಷಿ ನಿರ್ದೇಶಕರಾದ ರಮೇಶ್, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕರಾದ ಮಂಗಳ ಮತ್ತಿತರ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.
=====ಫೊಟೋ:
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆ ನಡೆಯಿತು.