ಕನ್ನಡಪ್ರಭ ವಾರ್ತೆ ಬಾಗಲಕೋಟೆ
ಜಿಲ್ಲಾ ಪಂಚಾಯತಿ ಸಭಾಭವನದಲ್ಲಿ ಗುರುವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಾಂತ್ವನ ಕೇಂದ್ರದಲ್ಲಿ ದಾಖಲಾದ ಪ್ರಕರಣ, ವರ್ಗಾವಣೆಗೊಂಡ ಪ್ರಕರಣಗಳ ಮಾಹಿತಿಗಳ ಬಗ್ಗೆ ಸರಿಯಾದ ಮಾಹಿತಿ ನೀಡದಿರುವುದು, ಸಂಬಂಧಿಸಿದವರನ್ನು ಸಭೆಗೆ ಕಳುಹಿಸದೆ ಪ್ರತಿನಿಧಿಗಳನ್ನು ಕಳುಹಿಸಿರುವುದನ್ನು ಕಂಡು ನೋಟಿಸ್ ನೀಡುವಂತೆ ಸೂಚಿಸಿದರು.
ವರದಕ್ಷಿಣೆ, ಲೈಂಗಿಕ ಕಿರಕುಳ, ಕೌಟುಂಬಿಕ ಕಲಹ ಸೇರಿದಂತೆ ಜನವರಿ ಅಂತ್ಯಕ್ಕೆ ಒಟ್ಟು 791 ಪ್ರಕರಣಗಳು ದಾಖಲಾಗಿದ್ದು, ಈ ಪೈಕಿ 725 ಇತ್ಯರ್ಥವಾಗಿವೆ. ಬಾಕಿ ಉಳಿಸಿಕೊಂಡವರಲ್ಲಿ ಇಳಕಲ್ಲ ಸಾಂತ್ವನ ಕೇಂದ್ರದ್ದು 25 ಇವೆ. ಪೊಲೀಸ್ ಇಲಾಖೆಗೆ ವರ್ಗಾವಣೆ ಮಾಡಿದ ಪ್ರಕರಣಗಳಲ್ಲಿ ಬಾಕಿ 8 ಪ್ರಕರಣಗಳು ಕಂಡುಬಂದಿದ್ದು, ಇತ್ಯರ್ಥವಾಗದ್ದಕ್ಕೆ ಕಾಣರವೇನು ಎಂದು ಪ್ರಶ್ನಿಸಿದರು. ಈ ಬಗ್ಗೆ ಸಮರ್ಪಕ ಮಾಹಿತಿ ನೀಡದ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.ಆಯಾ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪ್ರತಿ 15 ದಿನಗಳಿಗೊಮ್ಮೆ ಸಾಂತ್ವನ ಕೇಂದ್ರಗಳಿಗೆ ಭೇಟಿ ನೀಡಿ ಮೂಲ ಸೌಲಭ್ಯ, ಆಹಾರ ವಿತರಣೆ, ಶಿಕ್ಷಣದ ಬಗ್ಗೆ ಪರಿಶೀಲನೆ ನಡೆಸಬೇಕು. ಸಮಾಲೋಚನೆ ಸಹ ನಡೆಸಬೇಕು. ಜಮಖಂಡಿ ಹಾಗೂ ರಬಕವಿ-ಬನಹಟ್ಟಿ ತಾಲೂಕುಗಳಲ್ಲಿ ಹೊಸ ಸಾಂತ್ವನ ಕೇಂದ್ರಗಳನ್ನು ಸ್ಥಾಪಿಸಲು ಪ್ರಸ್ತಾವನೆಗಳು ಬಂದಿದ್ದು, ಸೂಕ್ತ ದಾಖಲೆಗಳನ್ನು ಪರಿಶೀಲಿಸಿ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಸಿಇಒ ಅಧಿಕಾರಿಗಳಿಗೆ ಸೂಚಿಸಿದರು. ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಸ್ತ್ರೀಶಕ್ತಿ ಗುಂಪು ಹಾಗೂ ತಾಲೂಕು ಒಕ್ಕೂಟದ ರಾಜ್ಯ ಮಟ್ಟದ ಪ್ರಶಸ್ತಿಗೆ ಪ್ರಸ್ತಾವನೆಗಳನ್ನು ಕಳುಹಿಸಲು ತಿಳಿಸಿದರು.
ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ನಂದಾ ಹಣಮರಟ್ಟಿ, ಜಂಟಿ ಕೃಷಿ ನಿರ್ದೇಶಕ ಲಕ್ಷ್ಮಣ ಕಳ್ಳೇನವರ, ಆಯಾ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಸಾಂತ್ವನ ಕೇಂದ್ರದ ಪ್ರತಿನಿಧಿಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು.