ಪ್ರಗತಿ ಸಾಧಿಸದ ಅಧಿಕಾರಿಗಳಿಗೆ ನೋಟಿಸ್: ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್

KannadaprabhaNewsNetwork |  
Published : Dec 19, 2025, 02:30 AM IST
ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್  | Kannada Prabha

ಸಾರಾಂಶ

ಯೋಜನೆಗಳ ಉದ್ದೇಶ ಕೇವಲ ಅನುದಾನ ವೆಚ್ಚವಲ್ಲ, ಬದಲಾಗಿ ಅರ್ಹ ಫಲಾನುಭವಿಗಳಿಗೆ ನೇರ ಲಾಭ ತಲುಪಿಸುವುದೇ ಮುಖ್ಯ ಗುರಿಯಾಗಿದೆ.

ಗದಗ: ಎಸ್‌ಸಿಪಿ, ಟಿಎಸ್‌ಪಿ ಯೋಜನೆಗಳಡಿ ನಿಗದಿತ ಗುರಿಗಳನ್ನು ಸಾಧಿಸುವಲ್ಲಿ ಕೆಲವು ಇಲಾಖೆಗಳು ಹಿಂದುಳಿದಿರುವುದು ಗಮನಕ್ಕೆ ಬಂದಿದ್ದು, ಈ ಹಿನ್ನೆಲೆ ಪ್ರಗತಿ ಸಾಧಿಸದ ಸಂಬಂಧಿತ ಅಧಿಕಾರಿಗಳಿಗೆ ನೋಟಿಸ್ ಜಾರಿಗೊಳಿಸುವಂತೆ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಸೂಚಿಸಿದರು.

ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪರಿಶಿಷ್ಟ ಜಾತಿ ಉಪ ಯೋಜನೆ(ಎಸ್‌ಸಿಪಿ) ಹಾಗೂ ಪರಿಶಿಷ್ಟ ಪಂಗಡ ಉಪಯೋಜನೆ(ಟಿಎಸ್‌ಪಿ)ಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಯೋಜನೆಗಳ ಉದ್ದೇಶ ಕೇವಲ ಅನುದಾನ ವೆಚ್ಚವಲ್ಲ, ಬದಲಾಗಿ ಅರ್ಹ ಫಲಾನುಭವಿಗಳಿಗೆ ನೇರ ಲಾಭ ತಲುಪಿಸುವುದೇ ಮುಖ್ಯ ಗುರಿಯಾಗಿದೆ.

ಅನುಷ್ಠಾನದಲ್ಲಿ ವಿಳಂಬ, ಗುರಿ ಸಾಧನೆ ಕೊರತೆ ಹಾಗೂ ವರದಿ ಸಲ್ಲಿಕೆಯಲ್ಲಿ ನಿರ್ಲಕ್ಷ್ಯ ವಹಿಸುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು. ಮುಂದಿನ ಸಭೆಯೊಳಗೆ ಬಾಕಿ ಉಳಿದ ಕಾಮಗಾರಿಗಳು ಹಾಗೂ ಫಲಾನುಭವಿ ಆಧರಿತ ಯೋಜನೆಗಳನ್ನು ಪೂರ್ಣಗೊಳಿಸಿ ಸಮಗ್ರ ವರದಿ ಸಲ್ಲಿಸುವಂತೆ ಸೂಚಿಸಿದರು.ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಯೋಜನೆಯಡಿ ವಿವಿಧ ಇಲಾಖೆಗಳ ಅನುಷ್ಠಾನಿತ ಕಾಮಗಾರಿಗಳ ಆರ್ಥಿಕ ಹಾಗೂ ಭೌತಿಕ ಗುರಿ ಸಾಧನೆಗೆ ಕ್ರಮ ವಹಿಸಬೇಕು. ಎಸ್‌ಸಿ, ಎಸ್‌ಟಿ ಕಾಲನಿಯಲ್ಲಿ ಬೀದಿದೀಪ ಅಳವಡಿಕೆ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ವಿಳಂಬ ಮಾಡದೇ ಕೈಗೊಳ್ಳಬೇಕು. ಕಾಮಗಾರಿ ಕೈಗೊಳ್ಳುವಾಗ ಗುಣಮಟ್ಟದ ಕಾಯ್ದುಕೊಳ್ಳುವುದು ಹಾಗೂ ಫಲಾನುಭವಿಗಳ ಆಯ್ಕೆಯಲ್ಲಿ ಪಾರದರ್ಶಕತೆ ಮುಖ್ಯವಾಗಿದೆ.

ಇಲಾಖೆಯ ಅಧಿಕಾರಿಗಳು ಕಡ್ಡಾಯವಾಗಿ ಸಭೆಗೆ ಹಾಜರಾಗಬೇಕು. ಆಯಾ ಆರ್ಥಿಕ ಸಾಲಿನಲ್ಲಿ ಅನುಷ್ಠಾನಿತ ಕಾಮಗಾರಿಗಳನ್ನು ನಿಗದಿತ ಕಾಲಮಿತಿಯೊಳಗೆ ಪೂರ್ಣಗೊಳಿಸುವತ್ತ ಇಲಾಖೆಯ ಅಧಿಕಾರಿಗಳು ಕ್ರಮ ವಹಿಸಬೇಕು. ಯಾವುದೇ ಕಾರಣಕ್ಕೂ ಬಿಡುಗಡೆಯಾದ ಅನುದಾನ ಲ್ಯಾಪ್ಸ್ ಆಗದಂತೆ ನೋಡಿಕೊಳ್ಳಬೇಕು ಎಂದರು.

ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ನಂದಾ ಹಣಬರಟ್ಟಿ ಮಾತನಾಡಿ, ಎಸ್‌ಸಿಪಿ, ಟಿಎಸ್‌ಪಿ ಯೋಜನೆಯಡಿ ವಿವಿಧ ಇಲಾಖೆಗಳು ಸಾಧಿಸಿದ ಪ್ರಗತಿ ವರದಿಯನ್ನು ವಿವರಿಸಿದರು. ಸಭೆಯಲ್ಲಿ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ಯೋಜನಾ ಅನುಷ್ಠಾನ ಘಟಕದ ಪ್ರತಿನಿಧಿಗಳು ಉಪಸ್ಥಿತರಿದ್ದು, ಪ್ರಗತಿ ವೇಗ ಹೆಚ್ಚಿಸಲು ಅಗತ್ಯ ಕ್ರಮಗಳ ಕುರಿತು ಚರ್ಚಿಸಲಾಯಿತು.

ಸಭೆಯಲ್ಲಿ ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ಚೇತನಾ ಪಾಟೀಲ, ಜಿಪಂ ಅಧಿಕಾರಿ ಎಂ.ವಿ. ಚಳಗೇರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಎಂ.ಎಂ. ತುಂಬರಮಟ್ಟಿ, ಅಂಗವಿಕಲ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಅಧಿಕಾರಿ ಮಹಾಂತೇಶ್ ಕೆ., ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಬಸವರಾಜ ಬಳ್ಳಾರಿ, ಆಹಾರ ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕ ರಮೇಶ, ನಗರಸಭೆ ಪೌರಾಯುಕ್ತ ರಾಜಾರಾಮ ಪವಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿ ರಾಧಾ ಮಣ್ಣೂರ, ಕಾರ್ಮಿಕ ಇಲಾಖೆ ಅಧಿಕಾರಿ ಶ್ರೀಶೈಲ ಸೋಮನಕಟ್ಟಿ, ಪಶು ಸಂಗೋಪನಾ ಇಲಾಖೆಯ ಉಪನಿರ್ದೇಶಕ ಡಾ. ಎಚ್.ಬಿ. ಹುಲಗಣ್ಣವರ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಿಪಿಎಲ್‌ ಮಾನದಂಡ ಬದಲಿಗೆ ಮುಂದಾದ ರಾಜ್ಯ
ಸರ್ಕಾರಿ ಶಾಲೆಗೆ ಶೀಘ್ರ 11000 ಶಿಕ್ಷಕರ ನೇಮಕ : ಮಧು