ಸೇವಾ ಮತದಾರರ ಮಾಹಿತಿ ನೀಡಲು ಸೂಚನೆ

KannadaprabhaNewsNetwork | Published : Oct 23, 2024 1:55 AM

ಸಾರಾಂಶ

ಶಿಗ್ಗಾಂವಿ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆಯಲ್ಲಿ ಪೊಲೀಸ್, ಆರೋಗ್ಯ, ಅಗ್ನಿಶಾಮಕ ಸೇರಿದಂತೆ ವಿವಿಧ ೧೩ ಇಲಾಖೆಗಳಲ್ಲಿ ಅಗತ್ಯ ಸೇವೆಗಳಡಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿ ಹಾಗೂ ಸಿಬ್ಬಂದಿಗಳ ಮಾಹಿತಿ ನೀಡಲು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ತಿಳಿಸಿದರು.

ಹಾವೇರಿ: ಶಿಗ್ಗಾಂವಿ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆಯಲ್ಲಿ ಪೊಲೀಸ್, ಆರೋಗ್ಯ, ಅಗ್ನಿಶಾಮಕ ಸೇರಿದಂತೆ ವಿವಿಧ ೧೩ ಇಲಾಖೆಗಳಲ್ಲಿ ಅಗತ್ಯ ಸೇವೆಗಳಡಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿ ಹಾಗೂ ಸಿಬ್ಬಂದಿಗಳ ಮಾಹಿತಿ ನೀಡಲು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ತಿಳಿಸಿದರು.ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಅಗತ್ಯ ಸೇವೆಗಳಡಿ ಕಾರ್ಯನಿರ್ವಸುತ್ತಿರುವ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆ ನಡೆಸಿದ ಅವರು, ಶಿಗ್ಗಾಂವಿ ವಿಧಾನಸಭೆ ಕ್ಷೇತ್ರದ ಮತದಾರರು ಮತದಾನದಿಂದ ಹೊರಗುಳಿಯದಂತೆ ನೋಡಿಕೊಳ್ಳಬೇಕು ಎಂದರು.ಶಿಗ್ಗಾಂವಿ, ಸಂಡೂರ ಹಾಗೂ ಚನ್ನಪಟ್ಟಣ ಕ್ಷೇತ್ರದ ಮತದಾರರನ್ನು ಹೊರತುಪಡಿಸಿ ಬೇರೆ ಸ್ಥಳಗಳ ಅಧಿಕಾರಿ ಹಾಗೂ ಸಿಬ್ಬಂದಿಗಳನ್ನು ಚುನಾವಣಾ ಕಾರ್ಯಕ್ಕೆ ನಿಯೋಜನೆಗೆ ಮೊದಲ ಆದ್ಯತೆ ನೀಡಬೇಕು. ಅನಿವಾರ್ಯ ಸಂದರ್ಭದಲ್ಲಿ ಶಿಗ್ಗಾಂವಿ ಕ್ಷೇತ್ರದ ಮತದಾರರನ್ನು ಹೊರತುಪಡಿಸಿ ಬೇರೆಯವರನ್ನು ಚುನಾವಣಾ ಕಾರ್ಯಕ್ಕೆ ನಿಯೋಜನೆ ಮಾಡಬೇಕು. ಒಂದು ವೇಳೆ ಅದೇ ಕ್ಷೇತ್ರದ ಮತದಾರರನ್ನು ಚುನಾವಣಾ ಕಾರ್ಯಕ್ಕೆ ನಿಯೋಜನೆ ಮಾಡಿದಲ್ಲಿ ೧೨ಡಿ ನಮೂನೆಯನ್ನು ಭರ್ತಿ ಮಾಡಿ ಚುನಾವಣಾ ಶಾಖೆಗೆ ನೀಡಬೇಕು ಎಂದರು.ಅಗತ್ಯ ಸೇವಾ ಮತದಾರರಿಗೆ ಶಿಗ್ಗಾಂವನಲ್ಲಿ ಬೂತ್ ಸ್ಥಾಪಿಸಿ ಮತದಾನಕ್ಕೆ ಅನುಕೂಲ ಮಾಡಿಕೊಡಲಾಗುವುದು. ನಮೂನೆ ೧೨ಡಿಯಲ್ಲಿ ಮತದಾನ ಗುರುತಿನ ಚೀಟಿ ಸಂಖ್ಯೆ, ಮತಗಟ್ಟೆ ಸಂಖ್ಯೆ ಸೇರಿದಂತೆ ಅಗತ್ಯ ಮಾಹಿತಿಯನ್ನು ಸರಿಯಾಗಿ ನಮೂದಿಸಿ ಸಲ್ಲಿಸಬೇಕು ಎಂದು ಸಲಹೆ ನೀಡಿದರು.ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ.ನಾಗರಾಜ, ಆಹಾರ ಹಾಗೂ ನಾಗರಿಕ ಸರಬರಾಜು ಇಲಾಖೆ ಉಪ ನಿರ್ದೇಶಕ ಹಾಗೂ ಪೋಸ್ಟಲ್ ಪೇಪರ ಹಾಗೂ ಪೋಸ್ಟ್ ಬ್ಯಾಲೆಟ್ ನೋಡಲ್ ಅಧಿಕಾರಿ ರಮೇಶ ಎಂ.ವಿ., ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸುರೇಶ ಸುರಗಿಹಳ್ಳಿ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಹಾವನೂರ, ಪೊಲೀಸ್, ಹೆಸ್ಕಾಂ, ಅಗ್ನಿಶಾಮಕ, ಗಂಗೀಬಾವಿ ಸಶಸ್ತ್ರ ಮೀಸಲು ಪಡೆ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

Share this article