ವಿದ್ಯಾರ್ಥಿನಿಲಯ ಉತ್ತಮ ಕಟ್ಟಡಕ್ಕೆ ಸ್ಧಳಾಂತರಕ್ಕೆ ಸೂಚನೆ

KannadaprabhaNewsNetwork |  
Published : May 26, 2026, 01:30 AM IST
25ಕೆಎಂಎನ್‌ಡಿ-4ಮಂಡ್ಯದ ಬಂದೀಗೌಡ ಬಡಾವಣೆಯಲ್ಲಿರುವ ಬಾಲಕಿಯರ ವಿದ್ಯಾರ್ಥಿ ನಿಲಯವನ್ನು ವಿಶಾಲ ಕಟ್ಟಡಕ್ಕೆ ಸ್ಥಳಾಂತರಿಸುವಂತೆ ಜಿಲ್ಲಾಧಿಕಾರಿ ಡಾ.ಕುಮಾರ ಅವರು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗೆ ಸೂಚಿಸಿದರು. | Kannada Prabha

ಸಾರಾಂಶ

ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ಅವರು ವಿದ್ಯಾರ್ಥಿನಿಲಯಕ್ಕೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ ವೇಳೆ ವಿದ್ಯಾರ್ಥಿನಿಯರು ಕಿಷ್ಕಿಂಧ ಜಾಗದಲ್ಲಿರುವುದು ಗಮನಕ್ಕೆ ಬಂದು ಅಧಿಕಾರಿಗಳನ್ನು ತರಾಟೆ ತೆಗೆದುಕೊಂಡಿದ್ದರು.

ಕನ್ನಡಪ್ರಭ ವಾರ್ತೆ ಮಂಡ್ಯ

ನಗರದ ಬಂದೀಗೌಡ ಬಡಾವಣೆಯಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಹಾಸ್ಟೆಲ್‌ನ ವಿದ್ಯಾರ್ಥಿನಿಯರು ತೀರಾ ಇಕ್ಕಟ್ಟಾದ ಜಾಗದಲ್ಲಿರುವ ಕಾರಣ ತಕ್ಷಣವೇ ಈ ಹಾಸ್ಟೆಲ್‌ನ್ನು ಸುಸಜ್ಜಿತ ಹಾಗೂ ವಿಶಾಲವಾದ ಬೇರೆ ಕಟ್ಟಡಕ್ಕೆ ಸ್ಥಳಾಂತರಿಸುವಂತೆ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ ಕುಮಾರ ಅವರು ಸೂಚಿಸಿದರು.

ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ಅವರು ವಿದ್ಯಾರ್ಥಿನಿಲಯಕ್ಕೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ ವೇಳೆ ವಿದ್ಯಾರ್ಥಿನಿಯರು ಕಿಷ್ಕಿಂಧ ಜಾಗದಲ್ಲಿರುವುದು ಗಮನಕ್ಕೆ ಬಂದು ಅಧಿಕಾರಿಗಳನ್ನು ತರಾಟೆ ತೆಗೆದುಕೊಂಡಿದ್ದರು. ಅಲ್ಲಿನ ಸಮಸ್ಯೆಗಳಿಗೆ ತ್ವರಿತ ಕ್ರಮ ವಹಿಸುವಂತೆ ಸೂಚಿಸಿದ ಹಿನ್ನೆಲೆಯಲ್ಲಿ ಸೋಮವಾರ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.

ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರು ತಮ್ಮ ವ್ಯಾಪ್ತಿಯಲ್ಲಿ ಬರುವ ವಿದ್ಯಾರ್ಥಿ ನಿಲಯಕ್ಕೆ ಕಾಲ ಕಾಲಕ್ಕೆ ಭೇಟಿ ನೀಡಿ ಅಲ್ಲಿ ಬೇಕಾಗಿರುವ ಮೂಲ ಸೌಕರ್ಯಗಳನ್ನು ಪರಿಶೀಲಿಸಬೇಕು. ಮಂಡ್ಯದ ಬಂದೀಗೌಡ ಬಡಾವಣೆಯಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿಲಯವನ್ನು ಒಂದು ವಾರದಲ್ಲಿ ಉತ್ತಮ ಕಟ್ಟಡಕ್ಕೆ ಸ್ಥಳಾಂತರಿಸಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಹಾಸ್ಟೆಲ್‌ನ ಪ್ರಥಮ ಚಿಕಿತ್ಸಾ ಪೆಟ್ಟಿಗೆ ಇರಬೇಕು. ಅಡುಗೆ ಕೋಣೆಯಲ್ಲಿ ಬೇಕಾಗುವ ಪರಿಕರಗಳಿಗೆ ಯಾವುದೇ ಕೊರತೆ ಆಗಬಾರದು. ವಿದ್ಯಾರ್ಥಿನಿಯರಿಗೆ ಗುಣಮಟ್ಟದ ಆಹಾರ ನೀಡಲು ಅಗತ್ಯ ಕ್ರಮ ವಹಿಸಬೇಕು ಎಂದರು.

ವಿದ್ಯಾರ್ಥಿಗಳಿಗೆ ಹಾಸ್ಟೆಲ್‌ನಲ್ಲಿ ಸಮಸ್ಯೆಗಳಾದರೆ ಹಾಸ್ಟೆಲ್ ವಾರ್ಡನ್ ಹಾಗೂ ಸಮಾಜ ಕಲ್ಯಾಣ ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು. ಅವರ ಶಿಸ್ತು ಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಶ್ರೀನಿವಾಸ್ ಹಾಗೂ ವಿದ್ಯಾರ್ಥಿ ನಿಲಯದ ವಾರ್ಡನ್ ಗಳು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪ್ರಯಾಣಿಕರ ತಂಗುದಾಣಕ್ಕೆ ಶಾಸಕ ಬಾಲಕೃಷ್ಣ ಭೂಮಿಪೂಜೆ
ಕೇವಲ ಓದುಗರ ಪ್ರೀತಿ ಬೆಂಬಲವೇ ಟೀಚರ್ ಪತ್ರಿಕೆಯ ಬಂಡವಾಳ