ಸುಳ್ಳು ಸುದ್ದಿ ಹರಡಿದವರಿಗೆ ನೋಟಿಸ್ ಜಾರಿ: ಶಿವರಾಜ ತಂಗಡಗಿ

KannadaprabhaNewsNetwork |  
Published : Sep 29, 2026, 02:00 AM IST
ಅಭಿನವ ಗವಿಸಿದ್ಧೇಶ್ವರ ಸ್ವಾಮೀಜಿ | Kannada Prabha

ಸಾರಾಂಶ

ಅಭಿನವ ಗವಿಸಿದ್ಧೇಶ್ವರ ಶ್ರೀಗಳು ದಸರಾ ಉದ್ಘಾಟನೆಗೆ ಒಪ್ಪಿಲ್ಲ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ ಮಾಡಲಾಗಿದೆ. ಅಧಿಕೃತ ಸಾಕ್ಷ್ಯವಿಲ್ಲದೆ ಇಂತಹ ಸುದ್ದಿ ಪ್ರಸಾರ ಮಾಡುವವರಿಗೆ ನೋಟಿಸ್ ನೀಡಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಹೇಳಿದರು.

ಕೊಪ್ಪಳ: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಕೊಪ್ಪಳದ ಶ್ರೀ ಗವಿಮಠದ ಅಭಿನವ ಗವಿಸಿದ್ಧೇಶ್ವರ ಮಹಾಸ್ವಾಮಿಗಳೇ ಚಾಲನೆ ನೀಡಲಿದ್ದಾರೆ. ಶ್ರೀಗಳು ಮುಖ್ಯಮಂತ್ರಿಗಳೊಂದಿಗೆ ಮಾತನಾಡಿ, ಸಂತೋಷದಿಂದ ಒಪ್ಪಿಗೆ ನೀಡಿದ ಬಳಿಕವೇ ಸರ್ಕಾರ ಈ ನಿರ್ಧಾರ ಪ್ರಕಟಿಸಿದೆ. ಆದರೆ, ಶ್ರೀಗಳು ದಸರಾ ಉದ್ಘಾಟನೆಗೆ ಒಪ್ಪಿಲ್ಲ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ ಮಾಡಲಾಗಿದೆ. ಅಧಿಕೃತ ಸಾಕ್ಷ್ಯವಿಲ್ಲದೆ ಇಂತಹ ಸುದ್ದಿ ಪ್ರಸಾರ ಮಾಡುವವರಿಗೆ ನೋಟಿಸ್ ನೀಡಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಹೇಳಿದರು.

ನಗರದಲ್ಲಿ ಸೋಮವಾರ ಗವಿಶ್ರೀಗಳನ್ನು ಭೇಟಿಯಾಗಿ ದಸರಾ ಉದ್ಘಾಟನೆಗೆ ಸರ್ಕಾರದ ಅಧಿಕೃತ ಆಹ್ವಾನ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶ್ರೀಗಳು ಸೂಕ್ಷ್ಮ ಮನಸ್ಸಿನವರು. ಅವರಿಗೆ ಯಾವುದೇ ರೀತಿಯ ನೋವಾಗಬಾರದು. ದಸರಾ ಉದ್ಘಾಟನೆಗೆ ಶ್ರೀಗಳನ್ನು ಆಯ್ಕೆ ಮಾಡಿರುವುದು ಸರ್ಕಾರಕ್ಕೂ ಗೌರವದ ಸಂಗತಿ ಎಂದರು.

ವಿಶ್ವವಿಖ್ಯಾತ ದಸರಾಕ್ಕೆ ದೇಶ-ವಿದೇಶಗಳಿಂದ ಜನರು ಆಗಮಿಸುತ್ತಾರೆ. ಪ್ರತಿವರ್ಷ ವಿವಿಧ ಕ್ಷೇತ್ರಗಳ ಸಾಧಕರಿಂದ ದಸರಾಕ್ಕೆ ಚಾಲನೆ ನೀಡಲಾಗುತ್ತಿದೆ. ಕನ್ನಡ ಮತ್ತು ಸಂಸ್ಕೃತಿ ಸಚಿವನಾಗಿ ನಾಲ್ಕನೇ ಬಾರಿ ದಸರಾ ಮಹೋತ್ಸವದಲ್ಲಿ ಭಾಗವಹಿಸುತ್ತಿದ್ದೇನೆ. ಈ ಬಾರಿ ಗವಿಶ್ರೀಗಳಿಗೆ ಈ ಅವಕಾಶ ಸಿಕ್ಕಿರುವುದು ಉತ್ತರ ಕರ್ನಾಟಕದ ಜನರಿಗೆ ಸಂತಸದ ಸಂಗತಿ ಎಂದು ಹೇಳಿದರು.

ಅ. 10ರಂದು ಮೈಸೂರಿಗೆ; 11ರಂದು ದಸರಾ ಚಾಲನೆ: ಗವಿಶ್ರೀಗಳು ಅ. 10ರಂದು ಮೈಸೂರಿಗೆ ಆಗಮಿಸಲಿದ್ದು, ಅ. 11ರಂದು ದಸರಾ ಮಹೋತ್ಸವಕ್ಕೆ ಚಾಲನೆ ನೀಡಲಿದ್ದಾರೆ. ಶ್ರೀಗಳು ಅದ್ಧೂರಿತನ ಹಾಗೂ ಅಡಂಬರದಿಂದ ದೂರವಿರುವವರು. ಅಂತಹ ಮಹನೀಯರಿಂದ ನಾಡಹಬ್ಬಕ್ಕೆ ಚಾಲನೆ ದೊರೆಯುತ್ತಿರುವುದು ಹೆಮ್ಮೆಯ ಸಂಗತಿ ಎಂದರು.

ಅಪಪ್ರಚಾರಕ್ಕೆ ಕಡಿವಾಣ: ದಸರಾ ಉದ್ಘಾಟನೆ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ಸುಳ್ಳು ಸುದ್ದಿಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಯಾವುದೇ ಅಧಿಕೃತ ಸಾಕ್ಷ್ಯವಿಲ್ಲದೆ ಸುದ್ದಿ ಪ್ರಕಟಿಸುವುದು ಸರಿಯಲ್ಲ. ಇಂತಹ ಪ್ರಕರಣಗಳಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು. ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ ಮಾಡುವವರ ವಿರುದ್ಧವೂ ಕ್ರಮ ಜರುಗಲಿದೆ ಎಂದು ತಂಗಡಗಿ ಹೇಳಿದರು.

ಉತ್ತರ ಕರ್ನಾಟಕಕ್ಕೆ ಹೆಮ್ಮೆಯ ಕ್ಷಣ: ಉತ್ತರ ಕರ್ನಾಟಕದ ಗವಿಶ್ರೀಗಳಿಂದ ಮೈಸೂರು ದಸರಾ ಉದ್ಘಾಟನೆ ಮಾಡಿಸುತ್ತಿರುವುದು ನಮ್ಮ ಪುಣ್ಯ. ನಾಡಿನ ಮಠ-ಮಾನ್ಯಗಳು ಹಾಗೂ ಪಂಚಪೀಠಗಳ ಬಗ್ಗೆ ಸರ್ಕಾರಕ್ಕೆ ಗೌರವವಿದೆ. ಹಿಂದೂ ಧರ್ಮದ ಹೆಸರಿನಲ್ಲಿ ಮತ್ತೊಂದು ಧರ್ಮವನ್ನು ಅವಹೇಳನ ಮಾಡುವುದು ನಮ್ಮ ಸಂಸ್ಕಾರವಲ್ಲ ಎಂದು ಬಿಜೆಪಿ ವಿರುದ್ಧವೂ ಸಚಿವರು ವಾಗ್ದಾಳಿ ನಡೆಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಾರ್ಖಾನೆ ವಿಸ್ತರಣೆ, ಮಾಲಿನ್ಯ ವಿರೋಧಿಸಿ 48 ಗಂಟೆ ಕೊಪ್ಪಳ ಬಂದ್ ಕರೆ
ಸುರಕ್ಷಿತ ಗರ್ಭಪಾತ, ಶ್ರವಣದೋಷ ತಡೆಗೆ ಅರಿವು ಅಗತ್ಯ: ಡಾ. ರಾಜೇಶ್