ಖೂಬಾ ವೈಫಲ್ಯ ಜನರಿಗೆ ತಿಳಿಸಿ; ಪುತ್ರನ ಪರ ಸಚಿವ ಖಂಡ್ರೆ ಪ್ರಚಾರ

KannadaprabhaNewsNetwork |  
Published : May 04, 2024, 12:38 AM IST
ಚಿತ್ರ 3ಬಿಡಿಆರ್61 | Kannada Prabha

ಸಾರಾಂಶ

ಭಾಲ್ಕಿ ತಾಲೂಕಿನ ಭಾತಂಬ್ರಾ ಗ್ರಾಮದಲ್ಲಿ ಕಾಂಗ್ರೆಸ್ ಪಕ್ಷದ ಪ್ರಚಾರಕ್ಕೆ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರನ್ನು ಮುಖಂಡರು, ಕಾರ್ಯಕರ್ತರು ಸನ್ಮಾನಿಸಿದರು.

ಭಾಲ್ಕಿ: ತಾಲೂಕಿನಲ್ಲಿ ಪುತ್ರ ಸಾಗರ ಖಂಡ್ರೆ ಪರ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅಬ್ಬರದ ಪ್ರಚಾರ ನಡೆಸಿದರು.

ಭಾತಂಬ್ರಾ ಗ್ರಾಮದಲ್ಲಿ ಶುಕ್ರವಾರ ಬಿರು ಬಿಸಿಲು ಲೆಕ್ಕಿಸದೇ ಪಾದಯಾತ್ರೆ ನಡೆಸಿ ಕಾಂಗ್ರೆಸ್ ಅಭ್ಯರ್ಥಿ, ಪುತ್ರ ಸಾಗರ ಖಂಡ್ರೆ ಪರ ಮತಯಾಚಿಸಿದರು.

ಗ್ರಾಮದ ಭವಾನಿ ಮಂದಿರದಿಂದ ಸಾವಿರಾರೂ ಕಾರ್ಯಕರ್ತರೊಂದಿಗೆ ಪ್ರಚಾರ ಆರಂಭಿಸಿದ ಸಚಿವರು ಮತದಾರರನ್ನು ಭೇಟಿಯಾಗಿ, ಕಾಂಗ್ರೆಸ್ ಅಭ್ಯರ್ಥಿ, ಉತ್ಸಾಹಿ ಯುವಕ ಸಾಗರ ಖಂಡ್ರೆ ಅವರಿಗೆ ಮತ ನೀಡುವಂತೆ ಕೋರಿದರು.ನಂತರ ಮಾತನಾಡಿದ ಸಚಿವರು, ನನ್ನ ಪುತ್ರ ಎನ್ನುವ ಕಾರಣಕ್ಕೆ ಕಾಂಗ್ರೆಸ್ ಹೈಕಮಾಂಡ ಸಾಗರ ಖಂಡ್ರೆ ಅವರಿಗೆ ಟಿಕೆಟ್ ನೀಡಿಲ್ಲ. ರಾಜ್ಯದಲ್ಲಿ ಯುವಶಕ್ತಿಗೆ ಪ್ರಾತಿನಿಧ್ಯ ನೀಡುವ ಉದ್ದೇಶ ಮತ್ತು ಸಾಗರ ಖಂಡ್ರೆ ಅವರ ಪಕ್ಷ ಸಂಘಟನಾ ಶಕ್ತಿ ಗುರುತಿಸಿ ಟಿಕೆಟ್ ನೀಡಿದೆ. ಖೂಬಾ ಅವರ 10 ವರ್ಷದ ವೈಫಲ್ಯಯನ್ನು ಜನರಿಗೆ ತಿಳಿಸುವುದರ ಜತೆಗೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಡ ಜನರ ಕಲ್ಯಾಣಕ್ಕಾಗಿ ಜಾರಿಗೊಳಿಸಿರುವ ಐದು ಗ್ಯಾರಂಟಿ ಯೋಜನೆ ಜನರಿಗೆ ಪರಿಚಯಿಸಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಲು ಮುಖಂಡರು, ಕಾರ್ಯಕರ್ತರು ಶ್ರಮಿಸಬೇಕು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಗ್ರಾಮದ ಪ್ರಮುಖರು, ಕಾರ್ಯಕರ್ತರು ಹಾಜರಿದ್ದರು.

---------

ಭಾಲ್ಕಿ ತಾಲೂಕಿನ ಭಾತಂಬ್ರಾ ಗ್ರಾಮದಲ್ಲಿ ಕಾಂಗ್ರೆಸ್ ಪಕ್ಷದ ಪ್ರಚಾರಕ್ಕೆ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರನ್ನು ಮುಖಂಡರು, ಕಾರ್ಯಕರ್ತರು ಸನ್ಮಾನಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸ್ವಾರ್ಥಕ್ಕಾಗಿ ಬ್ಲ್ಯಾಕ್‌ಮೇಲ್‌ ಮಾಡಲು ಇಷ್ಟವಿಲ್ಲ: ಡಿಸಿಎಂ
ಒಪಿಎಸ್‌ ಜಾರಿಗೆ ಸರ್ಕಾರಕ್ಕೆ ಒತ್ತಾಯಿಸುವೆ-ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಒತ್ತಾಯ