ಕನ್ನಡಪ್ರಭ ವಾರ್ತೆ ಮಂಡ್ಯ
ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ 2024 ಜನವರಿ 01 ಅನ್ನು ಅರ್ಹತಾ ದಿನಾಂಕವನ್ನಾಗಿಟ್ಟುಕೊಂಡು ನಡೆಸಿದ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಮಾಡಿದ್ದು, 30183 ಯುವ ಮತದಾರರು ಸೇರ್ಪಡೆ ಮಾಡಲಾಗಿದೆ. ಅವರನ್ನೊಳಗೊಂಡಂತೆ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ತಿಳಿಸಿದರು.
ವಿವಿಧ ರಾಜಕೀಯ ಪಕ್ಷಗಳ ಮುಖಂಡರ ಸಭೆ ನಡೆಸಿ ಮಾತನಾಡಿ, 18 ವರ್ಷ ಮೇಲ್ಪಟ್ಟ ಅರ್ಹ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳಬಹುದಾಗಿದ್ದು, 2024 ಜನವರಿ 22 ರ ಅಂತ್ಯಕ್ಕೆ ಸೇರ್ಪಡೆಯಾಗಿರುವ ಅಂತಿಮ ಮತದಾರರ ಪಟ್ಟಿ ಪ್ರಕಟಿಸಲಾಗಿದೆ. ಸಾರ್ವಜನಿಕರು ತಪ್ಪದೇ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಇರುವ ಬಗ್ಗೆ ಪರಿಶೀಲಿಸಿ ಕೊಳ್ಳಬೇಕು ಎಂದರು.ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಸಂದರ್ಭದಲ್ಲಿ ಯುವ ಮತದಾರರ ಸೇರ್ಪಡೆಗೆ ಹೆಚ್ಚಿನ ನಿಗಾ ವಹಿಸಿದ್ದು 16216 ಯುವಕರು, 13958 ಯುವತಿಯರು, ಇತರೆ- 9 ಸೇರಿದಂತೆ ಒಟ್ಟು-30183 ಯುವ ಮತದಾರರನ್ನು ಸೇರ್ಪಡೆ ಮಾಡಲಾಗಿದೆ. ಒಟ್ಟಾರೆ ಜಿಲ್ಲೆಯಲ್ಲಿ 1822 ಮತಗಟ್ಟೆಗಳಿದ್ದು, ಒಟ್ಟು 1,54,1856 ಮತದಾರರಿದ್ದಾರೆ.
ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್.ನಾಗರಾಜ್ ಮಾತನಾಡಿ, ಅಂತಿಮ ಮತದಾರರ ಪಟ್ಟಿಯನ್ನು ವೋಟರ್ ಹೆಲ್ಪ್ ಲೈನ್ ಆ್ಯಪ್ ಹಾಗೂ ಮುಖ್ಯ ಚುನಾವಣಾಧಿಕಾರಿಗಳ ವೆಬ್ ಸೈಟ್ https://CEO.karnataka.gov.in ನಲ್ಲಿ ಲಭ್ಯವಿದ್ದು ಮತದಾರರು ತಮ್ಮ ಹೆಸರನ್ನು ಪರಿಶೀಲಿಸಿ ಕೊಳ್ಳಬೇಕು ಎಂದರು.
ಜಿಲ್ಲೆಯಲ್ಲಿ ಒಟ್ಟು ಮತಗಟ್ಟೆ, ಮತದಾರರ ಸಂಖ್ಯೆ
ಮಳವಳ್ಳಿ27212492212593925250886
ಮೇಲುಕೋಟೆ264994021016627201071
ಶ್ರೀರಂಗಪಟ್ಟಣ24910513611003445215215
ಕೆ.ಆರ್.ಪೇಟೆ26111059411079911221404