ಕನ್ನಡಪ್ರಭ ವಾರ್ತೆ ಮಂಡ್ಯ
ತಾಲೂಕಿನ ಸುಂಡಹಳ್ಳಿಯ (ಸಿದ್ದಯ್ಯನಕೊಪ್ಪಲು ಗೇಟ್) ಕಾವೇರಿ ತಾಂತ್ರಿಕ ಮಹಾವಿದ್ಯಾಲಯದಿಂದ ಕಾಲೇಜು ಆವರಣದಲ್ಲಿ ನಡೆದ ಪದವಿ ಪ್ರದಾನ ಸಮಾರಂಭದಲ್ಲಿ ಮಾತನಾಡಿ, ಮಹಿಳೆಯರು ಎಲ್ಲ ಕ್ಷೇತ್ರದಲ್ಲೂ ಕೆಲಸ ಮಾಡಬೇಕು. ಅದರಲ್ಲೂ ಗ್ರಾಮೀಣ ಭಾಗದ ಹೆಣ್ಣು ಮಕ್ಕಳು ತಾಂತ್ರಿಕ, ವೈದ್ಯಕೀಯ ಸೇರಿದಂತೆ ಉನ್ನತ ಪದವಿಗಳನ್ನು ಪಡೆದು ಕೆಲಸ ಮಾಡುವುದು ಅಗತ್ಯ ಎಂದರು.
ನಾರಿಯೊಬ್ಬಳು ಕಲಿತರೆ ಮನೆಯೇ ವಿದ್ಯಾವಂತಹ ಕುಟುಂಬ ಎಂಬಂತೆ ಮಹಿಳೆಯರು ಹೆಚ್ಚು ಬುದ್ಧಿವಂತರು. ಅವರು ಎಲ್ಲ ಕ್ಷೇತ್ರಗಳ್ಲೂ ತೊಡಗಿಸಿಕೊಂಡಲ್ಲಿ ದೇಶದ ಅಭಿವೃದ್ಧಿ ಸಾಧ್ಯವಾಗುತ್ತದೆ. ಇತ್ತೀಚೆಗೆ ಹೆಣ್ಣು ಮಕ್ಕಳು ತಾಂತ್ರಿಕ ಪದವಿ ಪಡೆಯುತ್ತಿರುವುದು ಒಳ್ಳೆಯ ಬೆಳವಣಿಗೆಯಾಗಿದೆ ಎಂದರು.ಕೇವಲ ಇಂಡಿಯಾದಲ್ಲಿ ಮಾತ್ರವಲ್ಲದೆ ಅಮೆರಿಕಾದಲ್ಲೂ ಸಹ ಗ್ರಾಮೀಣ ಭಾಗದ ಮಹಿಳೆಯರಿಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ಅಲ್ಲೂ ಸಹ ಸಾಕಷ್ಟು ಹಳ್ಳಿಗಳು ಇವೆ. ಅದನ್ನು ನಾನು ನೋಡಿದ್ದೇನೆ. ವಿದ್ಯಾರ್ಥಿಗಳು ಕೇವಲ ಪದವಿ ಪಡೆದರಷ್ಟೇ ಸಾಲದು, ಅದಕ್ಕೆ ಪೂರಕವಾಗಿ ತಮ್ಮನ್ನು ತಾವು ಕೆಲಸದಲ್ಲಿ ತೊಡಗಿಸಿಕೊಂಡು ಉದ್ಯಮಿಗಳಾಗಬೇಕು. ಆ ಮೂಲಕ ಸಾಕಷ್ಟು ಮಂದಿಗೆ ಉದ್ಯೋಗ ಕೊಡುವಂತಹ ಕೆಲಸ ಮಾಡಬೇಕು ಎಂದರು.
ಸಮಾರಂಭದಲ್ಲಿ ಕಾವೇರಿ ತಾಂತ್ರಿಕ ಶಿಕ್ಷಣ ಸಂಸ್ಥೆ ಅಧ್ಯಕ್ಷ ಡಾ.ಬಿ.ಜಿ.ಸಂಗಮೇಶ್ವರ್ ಅಧ್ಯಕ್ಷತೆ ವಹಿಸಿದ್ದರು. ಕಾಲೇಜು ಕಾರ್ಯದರ್ಶಿ ಡಾ.ಸಿ.ಜೆ.ಗಂಗಾಧರಗೌಡ, ಪ್ರಾಂಶುಪಾಲ ಡಾ.ಎ.ಎಸ್.ಶ್ರೀಕಂಠಪ್ಪ ಸೇರಿದಂತೆ ಹಲವರು ಭಾಗವಹಿಸಿದ್ದರು.