ಗ್ರಾಮೀಣ ಭಾಗದ ಅಭಿವೃದ್ದಿಗೆ ನರೇಗಾ ಸಹಕಾರಿ: ಗಣೇಶ್

KannadaprabhaNewsNetwork |  
Published : Feb 03, 2024, 01:49 AM IST
ಗ್ರಾಮೀಣ ಭಾಗದ ಅಭಿವೃದ್ದಿಗೆ ನರೇಗಾ ಸಹಕಾರಿಃ ಗಣೇಶ್ | Kannada Prabha

ಸಾರಾಂಶ

ಹಾದಿಕೆರೆ ಗ್ರಾಮದಲ್ಲಿ ಏರ್ಪಡಿಸಿದ್ದ ನರೇಗಾ ದಿವಸ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಮಾತನಾಡಿದ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಟಿ.ಎಸ್.ಗಣೇಶ್ ಗ್ರಾಮೀಣ ಭಾಗದಲ್ಲಿ ಸ್ವಯಂ ಅಭಿವೃದ್ಧಿ ಜೊತೆಗೆ ಸಮುದಾಯ ಅಬಿವೃದ್ಧಿ ಕಾಮಗಾರಿಗಳನ್ನು ಮಾಡಲು ನರೇಗಾ ಯೋಜನೆ ಸಹಕಾರಿಯಾಗಿದೆ ಎಂದರು.

ಕನ್ನಡಪ್ರಭ ವಾರ್ತೆ, ತರೀಕೆರೆ

ಗ್ರಾಮೀಣ ಭಾಗದಲ್ಲಿ ಸ್ವಯಂ ಅಭಿವೃದ್ಧಿ ಜೊತೆಗೆ ಸಮುದಾಯ ಅಬಿವೃದ್ಧಿ ಕಾಮಗಾರಿಗಳನ್ನು ಮಾಡಲು ನರೇಗಾ ಯೋಜನೆ ಸಹಕಾರಿಯಾಗಿದೆ ಎಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಟಿ.ಎಸ್.ಗಣೇಶ್ ಹೇಳಿದ್ದಾರೆ.ತಾಲೂಕಿನ ಹಾದಿಕೆರೆ ಗ್ರಾಮದಲ್ಲಿ ಏರ್ಪಡಿಸಿದ್ದ ನರೇಗಾ ದಿವಸ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಮಾತನಾಡು ತ್ತಿದ್ದರು. ನರೇಗಾ ಯೋಜನೆ ಮಹತ್ವಾಕಾಂಕ್ಷೆ ಯೋಜನೆಯಾಗಿದ್ದು ದೇಶದ ಅಭಿವೃದ್ಧಿಗೆ ಸಹಕಾರಿಯಾಗಿದೆ. ಇದರಿಂದ ಗ್ರಾಮೀಣ ಭಾಗದ ಕಾರ್ಮಿಕರಿಗೆ 100 ದಿವಸ ಕೂಲಿ ಕೆಲಸ ಲಭಿಸುತ್ತದೆ, ಜೊತೆಗೆ ಕೃಷಿ ತೋಟಗಾರಿಕೆ ಚಟುವಟಿಕೆ ಗಳನ್ನು ಹಮ್ಮಿಕೊಳ್ಳಲು ಸಹಕಾರಿ ಎಂದು ಹೇಳಿದರು.

ನರೇಗಾ ಯೋಜನೆ ಸಹಾಯಕ ನಿರ್ದೇಶಕ ಯೋಗೀಶ್ ಮಾತನಾಡಿ ಗ್ರಾಮೀಣ ಭಾಗದಲ್ಲಿ ದುಡಿಯುವ ಕೈಗಳಿಗೆ ನರೇಗಾ ಬಲ ನೀಡಿದೆ, ಈ ಯೋಜನೆಯಿಂದ ರಸ್ತೆ ಚರಂಡಿ ಅಂಗನವಾಡಿ ಕಟ್ಟಡಗಳು, ಕೆರೆಹೂಳು ತೆಗೆಯುವ ಕಾಮಗಾರಿ ಸೇರಿದಂತೆ 266 ಕಾಮಗಾರಿ ಮಾಡಿಕೊಳ್ಳಲು ಅವಕಾಶವಿದೆ. ರೈತರು ಸದುಪಯೋಗ ಪಡೆಯುವಂತೆ ಹೇಳಿದರು.

ಗ್ರಾಮ ಪಂಚಾಯಿತಿ ಅಧ್ಯಕ್ಷೆ ರೇಖಾ ರವೀಶಯ್ಯ ಮಾತನಾಡಿ ನರೇಗಾ ಯೋಜನೆಯಿಂದ ಬಡ ಕೂಲಿ ಕಾರ್ಮಿಕರಿಗೆ ಉದ್ಯೋಗ ಒದಗಿಸಲು ಸಹಕಾರಿಯಾಗಿದೆ. ಸಮುದಾಯ ಕಾಮಗಾರಿಗಳ ಜೊತೆಗೆ ರೈತರ ಕೃಷಿ ಚಟುವಟಿಕೆಗಳನ್ನು ಮಾಡಲು ಅನುಕೂಲಕರವಾಗಿದೆ ಎಂದು ಹೇಳಿದರು.

ಗ್ರಾಮ ಪಂಚಾಯಿತಿ ಸದಸ್ಯರಾದ ವಸಂತಕುಮಾರ, ಚಂದ್ರಮೌಳಿ, ಪಿಡಿಒ ಭೈರೇಶ್ ಮಾತನಾಡಿದರು. ಗ್ರಾಮ ಪಂಚಾಯಿತಿ ಸದಸ್ಯರಾದ ಅಂಬಿಕ, ತಾಲೂಕು ಪಂಚಾಯಿತಿ ಸುಂದರೇಶ್, ವಿಜಯಕುಮಾರ, ಆರೋಗ್ಯ ಇಲಾಖೆ ದುರ್ಗಮ್ಮ, ಸ್ವಸಹಾಯ ಸಂಘದ ಸದಸ್ಯರು ಭಾಗವಹಿಸಿದ್ದರು.2ಕೆಟಿಆರ್.ಕೆ.8ಃ

ತರೀಕೆರೆ ತಾಲೂಕಿನ ಹಾದಿಕೆರೆ ಗ್ರಾಮದಲ್ಲಿ ಏರ್ಪಡಿಸಿದ್ದ ನರೇಗಾ ದಿವಸ ಆಚರಣೆ ಕಾರ್ಯಕ್ರಮದ ಉದ್ಘಾಟನೆ ತಾ.ಪಂ.ಕಾರ್ಯನಿರ್ವಹಣಾಧಿಕಾರಿ ಟಿ.ಎಸ್.ಗಣೇಶ್ ನೆರವೇರಿಸಿದರು. ಗ್ರಾಮ ಪಂಚಾಯಿತಿ ಅಧ್ಯಕ್ಷೆ ರೇಖಾ ರವೀಶಯ್ಯ, ನರೇಗಾ ಯೋಜನೆ ಸಹಾಯಕ ನಿರ್ದೇಶಕ ಯೋಗೀಶ್ ಮತ್ತಿತರರು ಇದ್ದರು.

-----------------------

PREV

Recommended Stories

ಸಾರಿಗೆ ನೌಕರರ ಜತೆ ಸರ್ಕಾರ ಸಂಧಾನ ವಿಫಲ
ಸುಹಾಸ್ ಶೆಟ್ಟಿ ಹ* ಕೇಸಲ್ಲಿ ಎನ್‌ಐಎನಿಂದ 18 ಕಡೆ ದಾಳಿ