ಏ. 1ರಿಂದ ಕೃಷಿ ಕಾರ್ಮಿಕರಿಗೆ ನರೇಗಾ ಉದ್ಯೋಗ ಪ್ರಾರಂಭ

KannadaprabhaNewsNetwork | Published : Mar 22, 2025 2:00 AM

ಸಾರಾಂಶ

ಬೇಸಿಗೆ ಬಂತು ಎಂದು ಗ್ರಾಮೀಣ ಕೂಲಿಕಾರರಿಗೆ ಕೆಲಸ ಸಿಗಲ್ಲ ಎಂಬ ಭಯಬೇಡ. ಏಪ್ರೀಲ್-೧ರಿಂದ ಉದ್ಯೋಗ ಖಾತ್ರಿ ಕೆಲಸ ಆರಂಭವಾಗುತ್ತಿದ್ದು, ಈ ಯೋಜನೆಯಡಿ ಅನೇಕ ಅಭಿವೃದ್ಧಿ ಕಾಮಗಾರಿ ಕೈಗೊಳ್ಳುವ ಅವಕಾಶವಿದೆ. ಗ್ರಾಮೀಣ ಪ್ರದೇಶಗಳ ಕಡುಬಡವರಿಗೂ ಯೋಜನೆಯ ಸದುಪಯೋಗ ದೊರಕುವಂತಾಗಿ ಕೆಲಸದ ಹಸವು ಇರುವವರಿಗೆ ಕೆಲಸ ಕೊಡುವಂತೆ ಕಾಯಕಬಂಧುಗಳು ಕಾರ್ಯನಿರ್ವಹಿಸಬೇಕು ಎಂದು ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಕೆ.ಇನಾಮದಾರ ಹೇಳಿದರು.

ನರಗುಂದ: ಬೇಸಿಗೆ ಬಂತು ಎಂದು ಗ್ರಾಮೀಣ ಕೂಲಿಕಾರರಿಗೆ ಕೆಲಸ ಸಿಗಲ್ಲ ಎಂಬ ಭಯಬೇಡ. ಏಪ್ರೀಲ್-೧ರಿಂದ ಉದ್ಯೋಗ ಖಾತ್ರಿ ಕೆಲಸ ಆರಂಭವಾಗುತ್ತಿದ್ದು, ಈ ಯೋಜನೆಯಡಿ ಅನೇಕ ಅಭಿವೃದ್ಧಿ ಕಾಮಗಾರಿ ಕೈಗೊಳ್ಳುವ ಅವಕಾಶವಿದೆ. ಗ್ರಾಮೀಣ ಪ್ರದೇಶಗಳ ಕಡುಬಡವರಿಗೂ ಯೋಜನೆಯ ಸದುಪಯೋಗ ದೊರಕುವಂತಾಗಿ ಕೆಲಸದ ಹಸವು ಇರುವವರಿಗೆ ಕೆಲಸ ಕೊಡುವಂತೆ ಕಾಯಕಬಂಧುಗಳು ಕಾರ್ಯನಿರ್ವಹಿಸಬೇಕು ಎಂದು ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಕೆ.ಇನಾಮದಾರ ಹೇಳಿದರು.

ಅವರು ಗುರುವಾರ ಪಟ್ಟಣದ ತಾಪಂ ಸಭಾಭವನದಲ್ಲಿ ನಡೆದ ಪಿಡಿಓ, ಕಾಯಕಬಂಧು ಹಾಗೂ ನರೇಗಾ ಸಿಬ್ಬಂದಿಯ ಒಂದು ದಿನದ ತರಬೇತಿ ಕಾರ್ಯಾಗಾರದಲ್ಲಿ ಮಾತನಾಡಿದರು.

ಪ್ರತಿಯೊಬ್ಬರಿಗೆ ನರೇಗಾ ಕೆಲಸ ಕೊಡುತ್ತಿರುವುದು ಗ್ರಾಮೀಣ ಜನರ ಗುಳೆ ತಪ್ಪಿಸುವ ಕೆಲಸವಾಗಿದೆ. ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ನರೇಗಾ ಯೋಜನೆ ಮಹತ್ವದ ಪಾತ್ರವಹಿಸಿದೆ. ಯೋಜನೆಯಡಿ ವಾರ್ಷಿಕವಾಗಿ 100 ದಿನಗಳವರೆಗೆ ಗ್ರಾಮೀಣ ಪ್ರದೇಶದ ಕೂಲಿಕಾರರಿಗೆ ಕೆಲಸ ಸಿಗುವಂತ್ತಾಗಬೇಕು. ಈ ಮೂಲಕ ಗ್ರಾಮೀಣ ಪ್ರದೇಶದ ಮೂಲಭೂತ ಸಮಸ್ಯೆಗಳನ್ನು ನಿವಾರಿಸಲು ನರೇಗಾ ವರದಾನವಾಗಲಿದೆ. ತಾಲೂಕಿನ ಎಲ್ಲ ಗ್ರಾಪಂ ಗಳ ಕಾಯಕಬಂಧುಗಳು ನರೇಗಾ ಕೆಲಸಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕೂಲಿಕಾರರನ್ನು ಸೇರಿಸುವ ಕೆಲಸ ಮಾಡಬೇಕು ಅಂತ ಕರೆ ನೀಡಿದರು.

ಬೇಸಿಗೆ ಅವಧಿಯ 60 ದಿನಗಳ ಕಾಲ ನರೇಗಾ ಯೋಜನೆಯಡಿ ಕೆಲಸ ಮಾಡಿದ್ರೆ ಕೂಲಿಕಾರರಿಗೆ 20940 ರುಪಾಯಿ ಹಣ ಸಿಗುತ್ತದೆ. ಕೂಲಿಕಾರರು ನರೇಗಾ ಯೋಜನೆಯಿಂದ ಬರುವ ಈ ಹಣವನ್ನು ಮುಂಗಾರಿನ ಕೃಷಿ ಬಿತ್ತನೆಯ ಕಾರ್ಯಕ್ಕೆ ಸದುಪಯೋಗಪಡಿಸಿಕೊಳ್ಳಲು ನೆರವಾಗಲಿದೆ ಎಂದರು. ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ಮಾರುತಿ ಅಸುಂಡಿ ಮಾತನಾಡಿ, ನರೇಗಾ ಯೋಜನೆಯ ಕಾಮಗಾರಿಗಳಿಂದ ಶಾಲೆಯ ಮೂಲಸೌಕರ್ಯಗಳ ನಿರ್ಮಾಣಕ್ಕೆ ನೆರವಾಗಿದೆ ಎಂದು ಯೋಜನೆಯ ಕಾಮಗಾರಿಗಳ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದರು.

ನರೇಗಾ ಯೋಜನೆಯ ಸಹಾಯಕ ನಿರ್ದೇಶಕ ಸಂತೋಷಕುಮಾರ ಪಾಟೀಲ ಮಾತನಾಡಿ, ಕಾಯಕಬಂಧುಗಳು ಪ್ರತಿವರ್ಷ ಬದಲಾವಣೆಯಾಗುವ ನಿಯಮಾವಳಿಗೆ ಅನುಗುಣವಾಗಿ ನರೇಗಾ ಕೆಲಸ ನಿರ್ವಹಿಸಲು ತರಬೇತಿ ಅತ್ಯವಶ್ಯಕವಾಗಿದೆ. ನರೇಗಾ ಕೆಲಸದಲ್ಲಿ ಮಹಿಳೆಯರು ಸ್ವಯಂ ಪ್ರೇರಣೆಯಿಂದ ಭಾಗವಹಿಸುವಂತಾಗಬೇಕು. ಕಾಯಕಬಂಧುಗಳು ಮಹಿಳಾ ಸ್ವ-ಸಹಾಯ ಸಂಘದ ಸದಸ್ಯರನ್ನು ಸಂಪರ್ಕಿಸಿ ನರೇಗಾ ಯೋಜನೆಯಲ್ಲಿ ಮಹಿಳೆಯರು ಭಾಗವಹಿಸುವಿಕೆ ಪ್ರಮಾಣ ಹೆಚ್ಚಿಸಲು ಶ್ರಮವಹಿಸಬೇಕೆಂದು ತಿಳಿಸಿದರು.

ಶಿಕ್ಷಣ ಸಂಯೋಜಕ ಸುರೇಶ ಬಾಳಿಕಾಯಿ ಮಾತನಾಡಿ, ಕಾಯಕಬಂಧುಗಳು ಎಂದರೆ ಯಾರು?, ಕಾಯಕಬಂಧುಗಳ ಪಾತ್ರ ಮತ್ತು ಜವಾಬ್ದಾರಿ ಕುರಿತು ತರಬೇತಿ ನೀಡಿದರು.

ಆರೋಗ್ಯ ಶಿಕ್ಷಣಾಧಿಕಾರಿ ಜಿ.ವಿ. ಕೊಣ್ಣೂರ ಮಾತನಾಡಿ, ಬೇಸಿಗೆ ದಿನದಲ್ಲಿ ಕೆಲಸದ ಸಂದರ್ಭದಲ್ಲಿ ನರೇಗಾ ಕೂಲಿಕಾರರಿಗೆ ಯಾವುದೇ ಆರೋಗ್ಯ ಸಮಸ್ಯೆ ಉಂಟಾಗಬಾರದೆಂದ ಆರೋಗ್ಯ ಇಲಾಖೆಯಿಂದ ಮುಂಜಾಗೃತ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ತರಬೇತಿಯಲ್ಲಿ ನರೇಗಾ ಕೂಲಿಕಾರರು ತೆಳುವಾದ ಬಿಳಿಬಣ್ಣದ ನೂಲಿನ ಬಟ್ಟೆಯನ್ನು ತೊಟ್ಟು ಕೆಲಸ ಮಾಡುವಂತೆ ತಿಳಿಸಿದರು. ಅಲ್ಲದೆ ಮಾರುಕಟ್ಟೆಯಲ್ಲಿ ಸಿಗುವ ತಂಪು ಪಾನೀಯಗಳನ್ನು ಕುಡಿಯದೇ ಮನೆಯಲ್ಲಿ ಸಿದ್ಧಪಡಿಸಿದ ಮಜ್ಜಿಗೆ, ಪಾನಕದಂತಹ ಪಾನೀಯಗಳನ್ನು ಅತೀಯಾಗಿ ಸೇವಿಸಬೇಕೆಂದು ತಿಳಿಸಿದರು. ಮಧ್ಯಾಹ್ನ 12 ಗಂಟೆಯೊಳಗಾಗಿ ಕಾರ್ಮಿಕರು ನಿಮ್ಮ ಕೆಲಸ ಮುಕ್ತಾಯಗೊಳಿಸಬೇಕೆಂದು ಎಂದರು.

ಕಾರ್ಯಕ್ರಮದಲ್ಲಿ ಹನಮಂತ ಡಂಬಳ, ಮಹೇಶ ಚಿತ್ತವಾಡಗಿ, ತಾಲೂಕಿನ 13ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು, ನರೇಗಾ ಸಿಬ್ಬಂದಿ ವರ್ಗದವರು ಇದ್ದರು.

Share this article