ಬೇಸಿಗೆಯಲ್ಲಿ ಗ್ರಾಮೀಣರಿಗೆ ನರೇಗಾ ಆಸರೆ- ಇನಾಮದಾರ

KannadaprabhaNewsNetwork |  
Published : Apr 21, 2025, 12:46 AM IST
(20ಎನ್.ಆರ್.ಡಿ1 ಕೊಣ್ಣೂರ ಗ್ರಾಮದಲ್ಲಿ ಎನ್.ಆರ್.ಜಿ ಕಾಮಗಾರಿಯನ್ನು ತಾಪಂ ಅಧಿಕಾರಿ ಎಸ್.ಕೆ.ಇನಾಮದಾರ ಪರಶೀಲನೆ ಮಾಡಿದರು.)  | Kannada Prabha

ಸಾರಾಂಶ

ಸರ್ಕಾರ ಗ್ರಾಮೀಣ ಭಾಗದ ಜನರು ಬೇಸಗಿಯ ಸಮಯದಲ್ಲಿ ಗೂಳೆ ಹೋಗಬಾರದೆಂದು ಎನ್.ಆರ್.ಜಿ. ಯೋಜನೆ ಜಾರಿಗೆ ತಂದಿದೆ. ಈ ಯೋಜನೆಯನ್ನು ಪ್ರತಿಯೊಬ್ಬರು ಸದುಪಯೋಗ ಪಡಿಸಿಕೊಳ್ಳಬೇಕೆಂದು ತಾಪಂ ಅಧಿಕಾರಿ ಎಸ್.ಕೆ. ಇನಾಮದಾರ ಹೇಳಿದರು.

ನರಗುಂದ: ಸರ್ಕಾರ ಗ್ರಾಮೀಣ ಭಾಗದ ಜನರು ಬೇಸಗಿಯ ಸಮಯದಲ್ಲಿ ಗೂಳೆ ಹೋಗಬಾರದೆಂದು ಎನ್.ಆರ್.ಜಿ. ಯೋಜನೆ ಜಾರಿಗೆ ತಂದಿದೆ. ಈ ಯೋಜನೆಯನ್ನು ಪ್ರತಿಯೊಬ್ಬರು ಸದುಪಯೋಗ ಪಡಿಸಿಕೊಳ್ಳಬೇಕೆಂದು ತಾಪಂ ಅಧಿಕಾರಿ ಎಸ್.ಕೆ. ಇನಾಮದಾರ ಹೇಳಿದರು.

ಅವರು ಭಾನುವಾರ ತಾಲೂಕಿನ ಕೊಣ್ಣೂರ ಗ್ರಾಪಂ ವ್ಯಾಪ್ತಿಯಲ್ಲಿ 2025-26ನೇ ಸಾಲಿನ ಸಾಮೂಹಿಕ ಬದು ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿ ಪರಿಶೀಲನೆ ನಡೆಸಿ ಆನಂತರ ಮಾತನಾಡಿ, ನರೇಗಾ ಯೋಜನೆಯಡಿ ಉದ್ಯೋಗ ಖಾತರಿ ಕೂಲಿ ಮೊತ್ತ 2025 ಏ.1ರಿಂದ 349ರಿಂದ 370 ರು. ಗೆ ಹೆಚ್ಚಳವಾಗಿದೆ. ಕೂಲಿಕಾರರು ಗ್ರಾಪಂಗೆ ಕೆಲಸದ ಬೇಡಿಕೆ ಸಲ್ಲಿಸಿ, ಕೆಲಸ ಪಡೆಯಬೇಕು. ಉದ್ಯೋಗ ಖಾತರಿ ಯೋಜನೆಯಡಿ ವರ್ಷಕ್ಕೆ 100 ಮಾನವ ದಿನಗಳ ಕೆಲಸ ಮಾಡಲು ಅವಕಾಶವಿದ್ದು, ಎಲ್ಲರೂ ಸದುಪಯೋಗ ಪಡೆದುಕೊಳ್ಳಬೇಕು ಎಂದರು.ಕೂಲಿಕಾರರು ಅಳತೆಗೆ ಅನುಸಾರವಾಗಿ ಕೂಲಿ ಪಾವತಿಯಾಗುತ್ತದೆ. ಅಳತೆಗೆ ತಕ್ಕಂತೆ ಕೆಲಸ ಮಾಡಬೇಕು. ಪ್ರತಿ ದಿನ ಎನ್.ಎಂಎಂಎಸ್. ಎರಡು ಬಾರಿ ಹಾಜರಾತಿ ತೆಗೆದುಕೊಳ್ಳಲಾಗುತ್ತದೆ. ಕೂಲಿಕಾರರು ಎರಡು ಹಾಜರಾತಿಯನ್ನು ಕಡ್ಡಾಯವಾಗಿ ಪಾಲ್ಗೊಂಡು ಹಾಜರಾತಿ ಹಾಕಿಸಬೇಕು. ಒಂದು ವೇಳೆ ಬೆಳಗಿನ ಹಾಜರಾತಿ ಹಾಕಿಸಿ ಮಧ್ಯಾಹ್ನದ ಹಾಜರಾತಿ ಹಾಕಿಸಲಿಲ್ಲ ಎಂದರೆ ನಿಮಗೆ ಆ ದಿನದ ಕೂಲಿ ಪಾವತಿಯಾಗುವುದಿಲ್ಲ ಎಂದು ತಿಳಿಸಿದರು.ಕೆಲಸ ಪ್ರಾರಂಭವಾಗಿದೆ ಎಂದು ಎನ್.ಎಂ.ಆರ್. ನಲ್ಲಿ ಹೆಸರು ಇಲ್ಲದೆ ಯಾವ ಕೂಲಿಕಾರರು ಕೆಲಸಕ್ಕೆ ಬರುವಂತಿಲ್ಲ. ಒಂದು ವೇಳೆ ಬಂದು ಅವರಿಗೆ ಕೂಲಿ ಹಣ ಪಾವತಿಯಾಗುವುದಿಲ್ಲ. ಹಾಗಾಗಿ ಕೂಲಿಕಾರರು ಎನ್.ಎಂ.ಆರ್. ಹಾಕಿಸಿ ಕೆಲಸಕ್ಕೆ ಬರುವಂತೆ ಕೂಲಿಕಾರರಿಗೆ ಸೂಚಿಸಿದರು.

ಬೇಸಿಗೆಯಲ್ಲಿ ಅಂದರೆ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಗ್ರಾಮೀಣ ಪ್ರದೇಶದಲ್ಲಿ ಕೆಲಸ ಇಲ್ಲದ ಕಾರಣ ನರೇಗಾ ಯೋಜನೆಯಡಿ ಕೆಲಸ ನೀಡಲಾಗುತ್ತದೆ. ಗ್ರಾಮೀಣ ಪ್ರದೇಶದ ಜನರು ಮತ್ತು ಕೂಲಿಕಾರರು ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ಬೇಸಿಗೆಯಲ್ಲಿ ಕೆಲಸ ಇಲ್ಲದ ಕಾರಣ ಖಾಲಿ ಕುಳಿತಿರುವ ಗ್ರಾಮೀಣ ಪ್ರದೇಶ ಜನರಿಗೆ ನರೇಗಾ ಯೋಜನೆಯಡಿ 13 ಗ್ರಾಪಂ ವ್ಯಾಪ್ತಿಯ ಪ್ರತಿ ಗ್ರಾಮಗಳಲ್ಲಿ ಸಾಮೂಹಿಕ ಕಾಮಗಾರಿ ಪ್ರಾರಂಭಿಸಿ ಸ್ಥಳೀಯವಾಗಿ ಕೆಲಸ ನೀಡುವ ಮೂಲಕ ಜನರ ಆರ್ಥಿಕವಾಗಿ ಸಬಲರನ್ನಾಗಿ ಮಾಡಲಾಗುತ್ತದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ತಾಲೂಕು ತಾಂತ್ರಿಕ ಸಂಯೋಜಕ ಹನಮಂತ ಡಂಬಳ, ತಾಂತ್ರಿಕ ಸಹಾಯಕ ಲಿಂಗರಾಜ ಮುದಿಗೌಡ್ರ, ಗ್ರಾಪಂ ಸಿಬ್ಬಂದಿ, ಗ್ರಾಮ ಕಾಯಕ ಮಿತ್ರರು, ಕಾಯಕಬಂಧುಗಳು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜಿ ರಾಂ ಜಿ ವಿರೋಧಕ್ಕೆ ರೈತರಿಗೆ ಸಿಎಂ ಕರೆ
ನೀವೂ ಸಿಎಂ ಆಗಬೇಕು : ಡಿಕೆಗೆ ಪೂಜಾರಿ ಹಾರೈಕೆ