ನರೇಗಾ ಜಾಬ್ ಕಾರ್ಡ್‌ಗೆ ಇ ಕೆವೈಸಿ ಮಾಡಿಸಲು ಮುಂದಾಗಿ: ಚಂದ್ರಶೇಖರ ಕಂದಕೂರ

KannadaprabhaNewsNetwork |  
Published : Oct 14, 2025, 01:01 AM IST
ಸಭಯೆಲ್ಲಿ ಚಂದ್ರಶೇಖರ್‌ ಕಂದಕೂರ ಮಾತನಾಡಿದರು. | Kannada Prabha

ಸಾರಾಂಶ

ಮನರೇಗಾ ಯೋಜನೆಯ ಸಕ್ರಿಯ ಕೂಲಿಕಾರರ ಜಾಬ್ ಕಾರ್ಡ್‌ಗಳನ್ನು ಇ- ಕೆವೈಸಿ ಮೂಲಕ ಪರಿಶೀಲಿಸುವ ಕಾರ್ಯವು ತುರ್ತಾಗಿ ನಡೆಯುತ್ತಿದೆ. ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ಸಕ್ರಿಯ ಕುಟುಂಬಗಳ ಜಾಬ್ ಕಾರ್ಡ್‌ ವ್ಯಾಲಿಡೇಶನ್‌ ಅನ್ನು ಶೀಘ್ರವಾಗಿ ಪೂರ್ಣಗೊಳಿಸಬೇಕು.

ರೋಣ: ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ(ಮನರೇಗಾ) ಅಡಿಯಲ್ಲಿ ನೋಂದಾಯಿತ ಕುಟುಂಬಗಳ ಜಾಬ್ ಕಾರ್ಡ್‌ಗಳ ಇ- ಕೆವೈಸಿ ವ್ಯಾಲಿಡೇಶನನ್ನು ತುರ್ತಾಗಿ ಪೂರ್ಣಗೊಳಿಸಲು ರೋಣ ಮತ್ತು ಗಜೇಂದ್ರಗಡ ತಾಪಂ ಸಿಬ್ಬಂದಿ ಶ್ರಮ ವಹಿಸಬೇಕೆಂದು ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ್ ಬಿ. ಕಂದಕೂರ ಸೂಚಿಸಿದರು.

ಪಟ್ಟಣದ ತಾಪಂ ಸಭಾಂಗಣದಲ್ಲಿ ರೋಣ ಮತ್ತು ಗಜೇಂದ್ರಗಡ ತಾಲೂಕುಗಳ ಮನರೇಗಾ ಸಿಬ್ಬಂದಿಯ ಸಭೆಯನ್ನುದ್ದೇಶಿಸಿ ಮಾತನಾಡಿ, ಈ ಕಾರ್ಯಕ್ಕೆ ಎಲ್ಲ ನರೇಗಾ ಕೂಲಿಕಾರರು ಸಕ್ರಿಯವಾಗಿ ಭಾಗವಹಿಸಿ, ಅಭಿಯಾನವನ್ನು ಯಶಸ್ವಿಗೊಳಿಸಬೇಕೆಂದರು.

ಮನರೇಗಾ ಯೋಜನೆಯ ಸಕ್ರಿಯ ಕೂಲಿಕಾರರ ಜಾಬ್ ಕಾರ್ಡ್‌ಗಳನ್ನು ಇ- ಕೆವೈಸಿ ಮೂಲಕ ಪರಿಶೀಲಿಸುವ ಕಾರ್ಯವು ತುರ್ತಾಗಿ ನಡೆಯುತ್ತಿದೆ. ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ಸಕ್ರಿಯ ಕುಟುಂಬಗಳ ಜಾಬ್ ಕಾರ್ಡ್‌ ವ್ಯಾಲಿಡೇಶನ್‌ ಅನ್ನು ಶೀಘ್ರವಾಗಿ ಪೂರ್ಣಗೊಳಿಸಬೇಕು ಎಂದರು.ಮನರೇಗಾ ಯೋಜನೆಯಡಿ ನೋಂದಾಯಿತ ಕೂಲಿಕಾರರ ಮಾಹಿತಿಯನ್ನು ಎನ್‌ಎಂಎಂಎಸ್(ನರೇಗಾ ಮೊಬೈಲ್ ಮಾನಿಟರಿಂಗ್ ಸಿಸ್ಟಮ್) ತಂತ್ರಾಂಶದಲ್ಲಿ ಇ- ಕೆವೈಸಿ ಮೂಲಕ ಅಪ್‌ಡೇಟ್ ಮಾಡಲಾಗುತ್ತಿದೆ. ಈಗಾಗಲೇ ಗ್ರಾಮ ಮಟ್ಟದಲ್ಲಿ ಜನರಿಗೆ ಈ ಕುರಿತು ಜಾಗೃತಿ ಮೂಡಿಸಲಾಗಿದ್ದು, ರೋಣ ಮತ್ತು ಗಜೇಂದ್ರಗಡ ತಾಲೂಕುಗಳ ನರೇಗಾ ಶಾಖೆಯ ಐಇಸಿ ವಿಭಾಗವು ತಯಾರಿಸಿದ ಧ್ವನಿ ಮುದ್ರಿಕೆಯನ್ನು ಕಸ ಸಂಗ್ರಹ ವಾಹನಗಳ ಮೂಲಕ ಪ್ರಸಾರ ಮಾಡಲು ಸೂಚಿಸಲಾಗಿದೆ ಎಂದರು.

ಗ್ರಾಮ ಪಂಚಾಯಿತಿ ಮಟ್ಟದ ಸಿಬ್ಬಂದಿಗೆ ಇ- ಕೆವೈಸಿ ಅಪ್‌ಡೇಟ್ ಕಾರ್ಯಕ್ಕೆ ತರಬೇತಿ ನೀಡಲಾಗಿದ್ದು, ಈ ಮೂಲಕ ಪ್ರಗತಿ ಸಾಧಿಸಲು ಸೂಚನೆ ನೀಡಲಾಗಿದೆ. ಆದರೆ, ಕೆಲವು ಗ್ರಾಮಗಳಲ್ಲಿ ಕೂಲಿಕಾರರು ವೈಯಕ್ತಿಕ ಕೆಲಸಕ್ಕಾಗಿ ಮನೆಯಿಂದ ಹೊರಗಡೆ ಇರುವುದರಿಂದ, ಮನೆ- ಮನೆ ಭೇಟಿಯ ಸಂದರ್ಭದಲ್ಲಿ ಮೇಟ್‌ಗಳು ಅಥವಾ ನರೇಗಾ ಸಿಬ್ಬಂದಿಗೆ ಅವರು ಲಭ್ಯವಾಗದಿರುವುದು ಇ- ಕೆವೈಸಿ ಪ್ರಕ್ರಿಯೆಯನ್ನು ನಿಧಾನಗೊಳಿಸಿದೆ. ಇದರಿಂದ ಭವಿಷ್ಯದಲ್ಲಿ ಕೂಲಿಕಾರರಿಗೆ ಕೆಲಸ ನೀಡುವಾಗ ಸಮಸ್ಯೆ ಉಂಟಾಗುವ ಸಾಧ್ಯತೆ ಇದೆ ಎಂದರು.

ಗ್ರಾಮ ಪಂಚಾಯಿತಿಗಳಲ್ಲಿ ಇ- ಕೆವೈಸಿ ಪ್ರಕ್ರಿಯೆಯನ್ನು ಉಚಿತವಾಗಿ ನಡೆಸಲಾಗುತ್ತಿದ್ದು, ಮೇಟ್‌ಗಳ ಮೂಲಕವೂ ಈ ಸೌಲಭ್ಯವನ್ನು ಪಡೆಯಬಹುದು. ಇ- ಕೆವೈಸಿ ಯೋಜನೆಯು ಮನರೇಗಾ ಕಾರ್ಯಕ್ರಮದ ಪಾರದರ್ಶಕ ಅನುಷ್ಠಾನಕ್ಕೆ ಮಹತ್ವದ ಹೆಜ್ಜೆಯಾಗಿದೆ. ಆದ್ದರಿಂದ ಎಲ್ಲ ಕೂಲಿಕಾರರು ಮತ್ತು ಕಾಯಕ ಬಂಧುಗಳು ಕಡ್ಡಾಯವಾಗಿ ಇ- ಕೆವೈಸಿ ಅಪ್‌ಡೇಟ್ ಮಾಡಿಸಿಕೊಳ್ಳಬೇಕು ಎಂದರು.

ಹೆಚ್ಚಿನ ಮಾಹಿತಿಗಾಗಿ ಪಿಡಿಒ, ಕಾರ್ಯದರ್ಶಿ, ಡಿಇಒ, ಬಿಎಫ್‌ಟಿ, ಜಿಕೆಎಂ ಅವರನ್ನು ಸಂಪರ್ಕಿಸಲು ಸಿಬ್ಬಂದಿಗೆ ಸೂಚಿಸಲಾಗಿದೆ. ಈ ಅಭಿಯಾನವನ್ನು ಯಶಸ್ವಿಗೊಳಿಸಲು ಎಲ್ಲರೂ ಸಹಕರಿಸಬೇಕೆಂದರು. ಈ ವೇಳೆ ಮನರೇಗಾ ಸಿಬ್ಬಂದಿ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!