2025-26ನೇ ಸಾಲಿನ ಕ್ರಿಯಾ ಯೋಜನೆ ತಯಾರಿಕೆಯ ಗ್ರಾಮ ಸಭೆ
ನರೇಗಾ ಯೋಜನೆ ಗ್ರಾಮೀಣಾಭಿವೃದ್ಧಿಗೆ ಸಹಕಾರಿಯಾಗಿದೆ ಎಂದು ತಾಪಂ ಸಹಾಯಕ ನಿರ್ದೇಶಕ ಶರಣಪ್ಪ ಕೆಳಗಿನಮನಿ ಹೇಳಿದರು.
ತಾಲೂಕಿನ ಇಟಗಿ ಗ್ರಾಮ ಪಂಚಾಯಿತಿಯಲ್ಲಿ ಗ್ರಾಪಂ ಅಧ್ಯಕ್ಷೆ ನಿರ್ಮಲಾ ಮಹೇಶ ಹಿರೇಮನಿ ಅಧ್ಯಕ್ಷತೆಯಲ್ಲಿ ಜರುಗಿದ 2025 -26ನೇ ಸಾಲಿನ ಕ್ರಿಯಾ ಯೋಜನೆ ತಯಾರಿಕೆಯ ಗ್ರಾಮ ಸಭೆಯಲ್ಲಿ ಮಾತನಾಡಿದರು.ನರೇಗಾದಡಿ ಗ್ರಾಮೀಣ ಪ್ರದೇಶದಲ್ಲಿ ನೂರಾರು ಕಾಮಗಾರಿಗಳನ್ನು ಅನುಷ್ಠಾನ ಮಾಡುವ ಮೂಲಕ ಗ್ರಾಮೀಣಾಭಿವೃದ್ಧಿ ಕನಸನ್ನು ನನಸಾಗಿಸಬಹುದು. ಮುಖ್ಯವಾಗಿ ಸಕಲ ಜೀವವರಾಶಿಗಳು ಆಹಾರ ನೀಡುವ ಮಣ್ಣನ್ನು ಸಂರಕ್ಷಣೆ ಮಾಡಲು ಬದು ನಿರ್ಮಾಣ, ಕೃಷಿ ಹೊಂಡ, ನಾಲಾ ಸುಧಾರಣೆ, ಚೆಕ್ ಡ್ಯಾಮ್ ಹೂಳೆತ್ತುವುದು, ಅರಣ್ಯೀಕರಣ, ತೋಟಗಾರಿಕೆ, ಅರಣ್ಯ, ರೇಷ್ಮೆ ಸೇರಿದಂತೆ ವಿವಿಧ ಇಲಾಖೆಗಳು ಸಹ ನರೇಗಾ ಯೋಜನೆಯ ಮೂಲಕ ಕಾಮಗಾರಿ ಅನುಷ್ಠಾನ ಮಾಡುತ್ತಿವೆ. ಕಳೆದ ವರ್ಷದಲ್ಲಿ ಸಾಮೂಹಿಕ ಬದು ನಿರ್ಮಾಣದಂತಹ ಕಾಮಗಾರಿಗಳನ್ನು ಜಲಾಮೃತ ಮಾದರಿಯಲ್ಲಿ ಅನುಷ್ಠಾನ ಮಾಡಿದ್ದು, ಇದು ತಾಲೂಕಿನಲ್ಲಿಯೇ ಮಾದರಿ ಗ್ರಾಮ ಪಂಚಾಯಿತಿಯಾಗಿದೆ ಎಂದರು.ಈ ವರ್ಷವೂ ಸಹ ರೈತರು ನರೇಗಾ ಯೋಜನೆಯಡಿ ಅನುಮೋದಿಸಿರುವ 266 ಕಾಮಗಾರಿಗಳಲ್ಲಿ ಯಾವುದಾದರೂ ಕಾಮಗಾರಿಯನ್ನು ಅನುಷ್ಠಾನ ಮಾಡಿಕೊಳ್ಳಬಹುದು ಎಂದರು.