ಹಾಸನದಲ್ಲಿ ನರೇಗಾ ಸಿಬ್ಬಂದಿಗೆ 6 ತಿಂಗಳಿಂದ ವೇತನವಿಲ್ಲ

KannadaprabhaNewsNetwork |  
Published : Jul 11, 2025, 12:32 AM IST
10ಎಚ್ಎಸ್ಎನ್17 :  | Kannada Prabha

ಸಾರಾಂಶ

ರಾಜ್ಯಾದ್ಯಂತ ನರೇಗಾ ಯೋಜನೆಯಡಿ ಹೊರಸಂಪನ್ಮೂಲದ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗೆ ಕಳೆದ 6 ತಿಂಗಳುಗಳಿಂದ ವೇತನ ಪಾವತಿಯಾಗಿಲ್ಲ. ಕೂಡಲೇ ನೌಕರರ ಬಾಕಿ ವೇತನವನ್ನು ಪಾವತಿ ಮಾಡಲು ಅಗತ್ಯ ಕ್ರಮ ವಹಿಸುವಂತೆ ಆಗ್ರಹಿಸಿ ಜಿಲ್ಲಾ ಪಂಚಾಯಿತಿ ಮುಂದೆ ರಾಜ್ಯ ಮಹಾತ್ಮ ಗಾಂಧಿ ನರೇಗಾ ನೌಕರರ ಕ್ಷೇಮಾಭಿವೃದ್ಧಿ ಸಂಘದಿಂದ ಪ್ರತತಿಭಟನೆ ನಡೆಸಿ ಜಿಪಂ ಉಪ ಕಾರ್ಯದರ್ಶಿಯವರಿಗೆ ಮನವಿ ಸಲ್ಲಿಸಿದರು.

ಕನ್ನಡಪ್ರಭ ವಾರ್ತೆ ಹಾಸನ

ರಾಜ್ಯಾದ್ಯಂತ ನರೇಗಾ ಯೋಜನೆಯಡಿ ಹೊರಸಂಪನ್ಮೂಲದ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗೆ ಕಳೆದ 6 ತಿಂಗಳುಗಳಿಂದ ವೇತನ ಪಾವತಿಯಾಗಿಲ್ಲ. ಕೂಡಲೇ ನೌಕರರ ಬಾಕಿ ವೇತನವನ್ನು ಪಾವತಿ ಮಾಡಲು ಅಗತ್ಯ ಕ್ರಮ ವಹಿಸುವಂತೆ ಆಗ್ರಹಿಸಿ ಜಿಲ್ಲಾ ಪಂಚಾಯಿತಿ ಮುಂದೆ ರಾಜ್ಯ ಮಹಾತ್ಮ ಗಾಂಧಿ ನರೇಗಾ ನೌಕರರ ಕ್ಷೇಮಾಭಿವೃದ್ಧಿ ಸಂಘದಿಂದ ಪ್ರತತಿಭಟನೆ ನಡೆಸಿ ಜಿಪಂ ಉಪ ಕಾರ್ಯದರ್ಶಿಯವರಿಗೆ ಮನವಿ ಸಲ್ಲಿಸಿದರು.

ಸಂಘದ ಜಿಲ್ಲಾಧ್ಯಕ್ಷ ಮಂಜುನಾಥ್ ಮಾತನಾಡಿ, ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ನಾವು ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಮಟ್ಟದಲ್ಲಿ ವಿವಿಧ ಸ್ವಳಗಳಲ್ಲಿ ಕಳೆದ ಹಲವಾರು ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತ, ಯೋಜನೆಯ ಸಮರ್ಪಕ ಅನುಷ್ಠಾನದಲ್ಲಿ ಭಾಗಿಯಾಗಿದ್ದೇವೆ. ಕರ್ನಾಟಕ ರಾಜ್ಯದಾದ್ಯಂತ ೩೬೩೨ ನೌಕರರು ನರೇಗಾ ಯೋಜನೆಯಡಿ ವಿವಿಧ ಕಾರ್ಯನಿರ್ವಹಿಸುತ್ತಿದ್ದೇವೆ. ಗ್ರಾಮ ಕಾಯಕಮಿತ್ರರಾಗಿ ಕರ್ತವ್ಯ ನಿರ್ವಹಿಸುತ್ತಿರುವ ನಮಗೆ ಕಳೆದ ಜನವರಿ-೨೦೨೫ರ ಮಾಹೆಯಿಂದ ಇಲ್ಲಿಯವರೆಗೆ ವೇತನ ಪಾವತಿಯಾಗಿಲ್ಲ. ಇದರಿಂದ ಎಲ್ಲಾ ನೌಕರರು ತೀವು ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುತ್ತಾರೆ ಎಂದರು.

ಕಳೆದ ೬ ತಿಂಗಳುಗಳಿಂದ ವೇತನ ಪಾವತಿ ಆಗದೇ ಇರುವುದರಿಂದ ಕುಟುಂಬ ನಿರ್ವಹಣೆ, ದಿನಸಿ ಖರೀದಿ. ಮಕ್ಕಳ ಶಾಲಾ ಪ್ರವೇಶಾತಿ ಕುಟುಂಬ ಸದಸ್ಯರ ವೈದ್ಯಕೀಯ ವೆಚ್ಚಗಳು. ಪ್ರಯಾಣ ವೆಚ್ಚಗಳು, ಸಾಲಗಳ ಮರುವಾವತಿ ಸೇರಿದಂತೆ ಅನೇಕ ರೀತಿಯ ಖರ್ಚುಗಳನ್ನು ನಿಭಾಯಿಸಲು ತೀವು ತೊಂದರೆಯಾಗಿದೆ ಎಂದು ಹೇಳಿದರು.

ಪ್ರತಿಯೊಬ್ಬ ನರೇಗಾ ನೌಕರರು ಒಂದಲ್ಲಾ ಒಂದು ರೀತಿಯಲ್ಲಿ ಸಂಕಷ್ಟಕ್ಕೆ ಸಿಲುಕಿ ಬಳಲುತ್ತಿದ್ದಾರೆ. ಬರುವ ತಿಂಗಳಲ್ಲಿ ವೇತನ ಪಾವತಿಯಾಗದೇ ಇದ್ದಲ್ಲಿ, ನೌಕರರ ಆರ್ಥಿಕ ಪರಿಸ್ಥಿತಿ, ಮನೋಬಲ, ಆತ್ಮಸ್ಥೆರ್ಯ ಮತ್ತಷ್ಟು ಕುಸಿಯಲಿದೆ ಎಂದು ಅಳಲು ತೋಡಿಕೊಂಡರು.

ಬಾಕಿ ವೇತನ ಪಾವತಿ ವಿಚಾರವಾಗಿ ಮೇಲಧಿಕಾರಿಗಳು ಕೇಂದ್ರ ಸರ್ಕಾರದಿಂದ ಅನುದಾನ ಬಂದಿಲ್ಲ ಎಂದು ಇಲ್ಲಿಯವರೆಗೂ ಮಾಹಿತಿ ನೀಡುತ್ತಿದ್ದರು. ಪ್ರಸ್ತುತ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಅನುದಾನ ಬಿಡುಗಡೆಗೊಂಡಿದ್ದು, ರಾಜ್ಯದಿಂದ ಜಿಲ್ಲಾ ಕೇಂದ್ರಕ್ಕೆ ಅನುದಾನ ಬಿಡುಗಡೆಯಾಗಿದೆ ಎಂಬ ಮಾಹಿತಿ ನೀಡಿದ್ದಾರೆ. ಆದರೆ ಹೊಸ ತಂತ್ರಾಂಶದಲ್ಲಿ ವೇತನ ಪಾವತಿ ಮಾಡಲು ತಾಂತ್ರಿಕ ಸಮಸ್ಯೆ ಬಗೆಹರೆಯದೇ ಇರುವುದರಿಂದ ವೇತನ ಪಾವತಿಯು ವಿಳಂಬವಾಗುತ್ತಿದೆ ಎಂದು ದೂರಿದರು.

ಈ ಹಿಂದೆ ಸಂಬಳ ಪಾವತಿಗೆ ಸಂಬಂಧಿಸಿದಂತೆ ತಮ್ಮಲ್ಲಿ ಮನವಿ ಮಾಡಿಕೊಂಡ ಸಂದರ್ಭದಲ್ಲಿ ಬಾಕಿ ಇರುವ ಸಂಬಳದಲ್ಲಿ ಒಂದು ತಿಂಗಳ ವೇತನವನ್ನು ಸಂಬಂಧಪಪಟ್ಟ ಏಜೆನ್ಸಿಯಿಂದ ಪಾವತಿಸುವುದಾಗಿ ಭರವಸೆ ನೀಡಲಾಗಿದೆ. ಆದರೆ ಒಂದು ತಿಂಗಳ ಸಂಬಳ ಕೂಡ ಪಾವತಿಯಾಗದೇ ನರೇಗಾ ಸಿಬ್ಬಂದಿ ಜೀವನ ನಿವರ್ಹಣೆ ತೀರಾ ಕಷ್ಟಕರವಾಗಿದೆ. ಕರ್ನಾಟಕದ ಎಲ್ಲಾ ಜಿಲ್ಲೆಗಳಲ್ಲಿ ತೀವ್ರವಾದ ಮುಷ್ಕರ ಹಮ್ಮಿಕೊಂಡಿದ್ದು, ವೇತನ ಪಾವತಿಯಾಗುವವರೆಗೂ ರಾಜ್ಯ ಸಂಘಟನೆಯಿಂದ ಮುಂದಿನ ನಿರ್ದೇಶನದವರೆಗೆ ಚಳವಳಿಯನ್ನು ಮುಂದುವರೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ನಮ್ಮ ಬೇಡಿಕೆಯನ್ನು ಪರಿಗಣಿಸಿ ಕೂಡಲೇ ನರೇಗಾ ನೌಕರರ ಬಾಕಿ ವೇತನವನ್ನು ಪಾವತಿ ಮಾಡಲು ಅಗತ್ಯ ಕ್ರಮವಹಿಸಲು ಕಳಕಳಿಯಿಂದ ವಿನಂತಿಸಿಕೊಳ್ಳುತ್ತೇವೆ ಎಂದರು.

ರಾಜ್ಯ ಮಹಾತ್ಮ ಗಾಂಧಿ ನರೇಗಾ ನೌಕರರ ಕ್ಷೇಮಾಭಿವೃದ್ಧಿ ಸಂಘದ ಎಡಿಪಿಸಿ ಯೋಗೀಶ್, ಯಶವಂತ್, ಸುನೀಲ್, ವಿರುಪಾಕ್ಷ, ಭುವನೇಶ್, ವಸಂತ್, ಕುಮಾರಸ್ವಾಮಿ, ಮಧು, ಮಾನಸ, ವಸಂತಕುಮಾರಿ ಇತರರು ಹಾಜರಿದ್ದರು.

PREV