ಹರಪನಹಳ್ಳಿ: ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ನೋಂದಾಯಿತ ಕುಟುಂಬಗಳ ಜಾಬ್ ಕಾರ್ಡ್ ವ್ಯಾಲಿಡೇಶನ್‌ನ್ನು ಇ-ಕೆವೈಸಿ ಮುಖಾಂತರ ಪೂರ್ಣಗೊಳಿಸಲಾಗುತ್ತಿದೆ. ಎಲ್ಲ ನರೇಗಾ ಕೂಲಿಕಾರರು ಈ ಅಭಿಯಾನದಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಬೇಕು ಎಂದು ಹರಪನಹಳ್ಳಿ ತಾಪಂ ಇಒ ಚಂದ್ರಶೇಖರ್ ವೈ.ಎಚ್. ತಿಳಿಸಿದ್ದಾರೆ.ಅವರು ಈ ಕುರಿತು ಹೇಳಿಕೆ ನೀಡಿದ್ದು, ಕೇಂದ್ರ ಗ್ರಾಮೀಣಾಭಿವೃದ್ಧಿ ಮಂತ್ರಾಲಯದ ಆದೇಶದಂತೆ ಬೆಂಗಳೂರಿನ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ
ನರೇಗಾ ಯೋಜನೆಯಡಿ ನೋಂದಾಯಿತ ಕೂಲಿಕಾರರಲ್ಲಿ ಸಕ್ರಿಯ ಕೂಲಿಕಾರರ ಮಾಹಿತಿಯನ್ನು ಎನ್‌ಎಂಎಂಎಸ್ ಮೊಬೈಲ್ ತಂತ್ರಾಂಶದಲ್ಲಿ ಇ-ಕೆವೈಸಿ ಮಾಡುವ ಬಗ್ಗೆ ಈಗಾಗಲೇ ಎಲ್ಲ ಗ್ರಾಮ ಪಂಚಾಯಿತಿ, ಗ್ರಾಮ ಮಟ್ಟದಲ್ಲಿ ಜನರಿಗೆ ಅರಿವು ಮೂಡಿಸಲಾಗುತ್ತಿದೆ. ಹರಪನಹಳ್ಳಿ ತಾಪಂನ ನರೇಗಾ ಶಾಖೆಯ ಐಇಸಿ ವಿಭಾಗದಿಂದ ನಿರ್ಮಿಸಿದ ಧ್ವನಿ ಮುದ್ರಿಕೆಯನ್ನು ಗ್ರಾಪಂನ ಕಸ ಸಂಗ್ರಹಿಸುವ ವಾಹನಗಳ ಮೂಲಕ ಪ್ರಸಾರ ಮಾಡಲಾಗುತ್ತಿದೆ. ಎನ್‌ಎಂಎಂಎಸ್ ಇ-ಕೆವೈಸಿ ಅಪ್ಡೇಟ್ ಮಾಡಿಸಲು ಗ್ರಾಪಂ ಮಟ್ಟದ ಸಿಬ್ಬಂದಿಗೆ ತರಬೇತಿ ನೀಡಲಾಗಿದೆ. ಆದರೆ, ಕೆಲ ಗ್ರಾಮದಲ್ಲಿ ಮನರೇಗಾ ಕೂಲಿಕಾರರು ವೈಯಕ್ತಿಕ ಕೆಲಸಕ್ಕಾಗಿ ಮನೆಯಲ್ಲಿ ಇರದೇ ಬೇರೆಡೆ ಹೋದಾಗ ಮನೆಮನೆ ಭೇಟಿ ನೀಡಿದ ಸಂದರ್ಭದಲ್ಲಿ ಮೇಟಿ ಅಥವಾ ನರೇಗಾ ಸಿಬ್ಬಂದಿಗೆ ಅಲಭ್ಯವಾದಾಗ ಇ-ಕೆವೈಸಿ ಪ್ರಕ್ರಿಯೆ ನಿಧಾನಗತಿಯಲ್ಲಿ ಸಾಗುತ್ತಿದೆ. ಇದರಿಂದ ಮುಂದಿನ ದಿನಗಳಲ್ಲಿ ನರೇಗಾ ಕೂಲಿಕಾರರಿಗೆ ಕೆಲಸ ನೀಡುವ ಸಂದರ್ಭದಲ್ಲಿ ಸಮಸ್ಯೆಯಾಗುವ ಸಾಧ್ಯತೆ ಇದೆ. ಎಲ್ಲ ಮನರೇಗಾ ಕೂಲಿಕಾರರ ಆದಷ್ಟು ಶೀಘ್ರ ಕಡ್ಡಾಯವಾಗಿ ಇ-ಕೆವೈಸಿ ಮಾಡಿಸಬೇಕಿದೆ ಎಂದರು.
ಗ್ರಾಪಂನಲ್ಲಿ ಉಚಿತವಾಗಿ ಇ-ಕೆವೈಸಿ ಮಾಡಿಕೊಡಲಾಗುತ್ತಿದೆ. ಜತೆಗೆ ಮೇಟಿಗಳ ಮೂಲಕವಾದರೂ ಇಕೆವೈಸಿ ಮಾಡಿಸಿಕೊಳ್ಳಬಹುದು. ನರೇಗಾ ಯೋಜನೆಯ ಪಾರದರ್ಶಕ ಅನುಷ್ಟಾನಕ್ಕೆ ಮತ್ತೊಂದು ಹೆಜ್ಜೆ ಇ-ಕೆವೈಸಿ ಆಗಿದ್ದು, ನರೇಗಾ ಕೂಲಿಕಾರರು, ಕಾಯಕ ಬಂಧುಗಳು ಇ-ಕೆವೈಸಿ ಅಪ್ಡೇಟ್ ಮಾಡಿಸಿಕೊಳ್ಳುವುದು ಕಡ್ಡಾಯವಾಗಿದೆ. ಹೆಚ್ಚಿನ ಮಾಹಿತಿಗಾಗಿ ಆಯಾ ಗ್ರಾಮ ಪಂಚಾಯತಿ ಪಿಡಿಓ, ಕಾರ್ಯದರ್ಶಿ, ಡಿಇಒ, ಬಿಎಫ್‌ಟಿ, ಜಿಕೆಎಂ ಅವರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.