ಕನ್ನಡಪ್ರಭ ವಾರ್ತೆ ಬಾಗಲಕೋಟೆ
ಬಾಗಲಕೋಟೆ ಸಮೀಪದ ಮುಚಖಂಡಿ ಗ್ರಾಮದ ಶ್ರೀ ವೀರಭದ್ರೇಶ್ವರ ಸಭಾ ಮಂಟಪದಲ್ಲಿ ಪ್ರಾರಂಭವಾದ ನವನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ 2025-26ನೇ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಎನ್‌ಎಸ್‌ಎಸ್ ಶಿಬಿರಗಳು ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವ ಬೆಳೆಸುವ ಮೂಲಕ ಅವರಲ್ಲಿ ಸಮಯ ಪಾಲನೆ, ಶಿಸ್ತು, ಪ್ರಾಮಾಣಿಕತೆ ಮತ್ತು ಸಾಮಾಜಿಕ ಮೌಲ್ಯಗಳನ್ನು ಬೆಳೆಸುತ್ತವೆ ಎಂದು ಹೇಳಿದರು.ಜಿಲ್ಲಾ ಪಿಡಿಒ ಸಂಘದ ಅಧ್ಯಕ್ಷ ಸಿದ್ಧಾರ್ಥ ಗೋಠೆ ಅವರು ಸಸಿಗೆ ನೀರುಣಿಸಿ ಶಿಬಿರ ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವ, ಗ್ರಾಮೀಣ ಪರಿಸರದ ದೇಶಿಯ ಸಂಸ್ಕೃತಿಯನ್ನು ತಿಳಿದುಕೊಳ್ಳಬೇಕು. ಏಳು ದಿನಗಳ ನಡೆಯುವ ಶಿಬಿರವು ಶಿಬಿರಾರ್ಥಿಗಳಲ್ಲಿರುವ ಪ್ರತಿಭಾ ಸಾಮರ್ಥ್ಯದ ಗುಣಮಟ್ಟ ಹೆಚ್ಚಿಸುತ್ತದೆ. ಶಿಬಿರದಿಂದ ತಮ್ಮ ಬದುಕಿನಲ್ಲಿ ಸೇವಾ ಭಾವನೆಯ ಮೌಲ್ಯಗಳನ್ನು ಬೆಳೆಸಿಕೊಳ್ಳಲು ಸಾಧ್ಯವಿದೆ ಎಂದು ಹೇಳಿದರು.
ಸಮಾರಂಭದಲ್ಲಿ ಶಿಬಿರಾರ್ಥಿಗಳು ಎನ್‌ಎಸ್‌ಎಸ್ ಗೀತೆ ಹಾಡಿದರು, ಡಾ.ಬಸವರಾಜ ಬೀಳಗಿ ಸ್ವಾಗತಿಸಿದರು, ಡಾ.ಚಂದ್ರಶೇಖರ ಕಾಳನ್ನವರ ನಿರೂಪಿಸಿದರು. ಪ್ರೊ.ಪರಸಪ್ಪ ತಳವಾರ ವಂದಿಸಿದರು. ಶಿಬಿರದಲ್ಲಿ ಐವತ್ತು ಶಿಬಿರಾರ್ಥಿಗಳು ಪಾಲ್ಗೊಂಡಿದ್ದರು