ಕನ್ನಡಪ್ರಭ ವಾರ್ತೆ ಮಣಿಪಾಲ
ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕ ಸಂತೋಷ್ ನೆಲ್ಲಿಕಾರು ದಿಕ್ಸೂಚಿ ಭಾಷಣ ಮಾಡುತ್ತಾ, ಎನ್.ಎಸ್.ಎಸ್. ಚಳವಳಿಯ ಇತಿಹಾಸವನ್ನು ವಿವರಿಸಿ, ಸಾಮಾಜಿಕ ಜವಾಬ್ದಾರಿ ಮತ್ತು ಸೇವಾಭಾವನೆ ವಿದ್ಯಾರ್ಥಿಗಳಲ್ಲಿ ಬೆಳೆಸುವಲ್ಲಿ ಇದರ ಪಾತ್ರವನ್ನು ವಿಶದಪಡಿಸಿದರು.
ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯ ದಿಲೀಪ್ ಹೆಗ್ಡೆ, ಶತಮಾನಗಳ ಇತಿಹಾಸ ಹೊಂದಿರುವ ಈ ಶಾಲೆಯಲ್ಲಿ ಶಿಬಿರ ಯಶಸ್ವಿಯಾಗಿ ನಡೆಯಲಿ ಎಂದು ಹಾರೈಸಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಗಣೇಶ್ ಶೆಟ್ಟಿ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಅಕಾಡೆಮಿಕ್ ಡೀನ್ ಡಾ. ಮಿಥುನ್ ಯು, ಸಾರ್ವಜನಿಕ ಸಂಪರ್ಕಾಧಿಕಾರಿ ಜ್ಯೋತಿ ಪದ್ಮನಾಭ ಭಂಡಿ, ಪಿ.ಎಂ. ಶ್ರೀ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಸ್.ಡಿ.ಎಂ.ಸಿ. ಅಧ್ಯಕ್ಷ ಸುಕೇಶ್, ಮುಖ್ಯೋಪಾಧ್ಯಾಯಿನಿ ಸರಸ್ವತಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪ್ರಸಾದ್ ಹೆಗ್ಡೆ, ಹಾಗೂ ಉದ್ಯಮಿಗಳಾದ ಹರೀಶ್ ಪೂಜಾರಿ ಒಳಮಡಿ, ತ್ರಿವಿಕ್ರಮ ಕಿಣಿ, ದೇವೇಂದ್ರ ನಾಯಕ್ ಉಪಸ್ಥಿತರಿದ್ದರು.ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿ ಹಾಗೂ ಉಪಪ್ರಾಂಶುಪಾಲ ರವಿ ಜಿ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು.
ಆಂಗ್ಲ ಉಪನ್ಯಾಸಕಿ ಶಮಿತಾ ಕಾರ್ಯಕ್ರಮವನ್ನು ನಿರೂಪಿಸಿ ವಂದನೆ ಸಲ್ಲಿಸಿದರು.