ಪ್ರತಿಭೆ ಅನಾವರಣಕ್ಕೆ ಎನ್ಎಸ್ಎಸ್ ಶಿಬಿರ ಸಹಕಾರಿ: ಕಲಾಲ್‌

KannadaprabhaNewsNetwork |  
Published : Jul 13, 2024, 01:30 AM IST
 ಯಾದಗಿರಿ ನಗರದ ಬಾಲಾಜಿ ಪದವಿ ಮಹಾವಿದ್ಯಾಲಯದಲ್ಲಿ ನಡೆದ ರಾಷ್ಟ್ರೀಯ ಸೇವಾ ಯೋಜನೆ ವಿಶೇಷ ಶಿಬಿರದಲ್ಲಿ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಮಹೇಶ ಕಲಾಲ ಮಾತನಾಡಿದರು. | Kannada Prabha

ಸಾರಾಂಶ

ವಿದ್ಯಾರ್ಥಿಗಳಾಗಿರುವಾಗಲೇ ನಾಯಕತ್ವ ಗುಣ ಬೆಳೆಸಿಕೊಳ್ಳಲು ರಾಷ್ಟ್ರೀಯ ಸೇವಾ ಯೋಜನೆ ತುಂಬಾ ಸಹಕಾರಿ ಎಂದು ಯಾದಗಿರಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಮಹೇಶ ಕಲಾಲ ಹೇಳಿದರು.

ಕನ್ನಡಪ್ರಭ ವಾರ್ತೆ ಯಾದಗಿರಿ

ವಿದ್ಯಾರ್ಥಿಗಳಾಗಿರುವಾಗಲೇ ನಾಯಕತ್ವ ಗುಣ ಬೆಳೆಸಿಕೊಳ್ಳಲು ರಾಷ್ಟ್ರೀಯ ಸೇವಾ ಯೋಜನೆ ತುಂಬಾ ಸಹಕಾರಿ ಎಂದು ಯಾದಗಿರಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಮಹೇಶ ಕಲಾಲ ಹೇಳಿದರು.

ನಗರದ ಬಾಲಾಜಿ ಪದವಿ ಮಹಾವಿದ್ಯಾಲಯದಲ್ಲಿ ನಡೆದ ರಾಷ್ಟ್ರೀಯ ಸೇವಾ ಯೋಜನೆ ವಿಶೇಷ ಶಿಬಿರದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳಲ್ಲಿ ಒಂದಲ್ಲಾ ಒಂದು ಪ್ರತಿಭೆ ಇದ್ದೇ ಇರುತ್ತದೆ. ಅಂತಹ ಪ್ರತಿಭೆ ಅನಾವರಣಗೊಳ್ಳಲು ಇಂತಹ ಶಿಬಿರಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವುದು ಅವಶ್ಯ ಎಂದರು. ವ್ಯಕ್ತಿಯ ವಿಕಸನಕ್ಕೆ ಜ್ಞಾನ ಪೂರಕ. ಆದ್ದರಿಂದ ವಿದ್ಯಾರ್ಥಿಗಳು ಜೀವನದಲ್ಲಿ ಶಿಸ್ತು ಮತ್ತು ಸಂಯಮವನ್ನು ರೂಢಿಸಿಕೊಳ್ಳಬೇಕು ಎಂದರು.ರಾಯಚೂರು ವಿಶ್ವವಿದ್ಯಾಲಯದ ವಿದ್ಯಾವಿಷಯಕ ಪರಿಷತ್ ಸದಸ್ಯರಾದ ಕಿಶನ್ ರಾಠೋಡ ಮಾತನಾಡಿ, ಪ್ರತಿಯೊಬ್ಬರು ಜೀವನದಲ್ಲಿ ಗುರಿ ತಲುಪಬೇಕಾದರೆ ವಿದ್ಯಾವಂತರಾಗಬೇಕು. ವಿದ್ಯಾವಂತರಾಗಲು ಪುಸ್ತಕಗಳನ್ನು ಹೆಚ್ಚಾಗಿ ಓದಬೇಕು ಎಂದು ಸಲಹೆ ನೀಡಿದರು.

ಬಾಲಾಜಿ ಪದವಿ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ಶ್ರೀನಿವಾಸ ಬಂಡಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಬಾಲಾಜಿ ಎಜುಕೇಶನಲ್ ಟ್ರಸ್ಟ್ ನ ಕಾರ್ಯದರ್ಶಿ ರಘುನಾಥರಡ್ಡಿ ಪಾಟೀಲ್ ಅವರು ಕಾರ್ಯಕ್ರಮ ಉದ್ಘಾಟಿಸಿದರು. ಕಾಲೇಜಿನ ಉಪನ್ಯಾಸಕರಾದ ಭೀಮರಾಯ ಮಾನೆಗಾರ. ಭೀಮರಾಯ ನೈಕೋಡಿ, ಸಾಬಣ್ಣ ಹೊನಿಗೇರ, ಮಾಳಪ್ಪ ಪೂಜಾರಿ, ರಾಮಕೃಷ್ಣ ಗುಡಾಲ್, ಸುಜಾತ ಕುಲಕರ್ಣಿ ಸೇರಿದಂತೆ ಇತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹರಿಹರ ಪ್ರಮುಖ ರಸ್ತೆಗಳಲ್ಲಿ ಬೀದಿದೀಪ, ಸಿಸಿ ಕ್ಯಾಮೆರಾ ಅಳವಡಿಸಿ
ಪ್ರೀತಿಸುವಂತೆ ಪೊಲೀಸ್‌ ಇನ್‌ಸ್ಪೆಕ್ಟರ್‌ಬೆನ್ನತ್ತಿದ್ದ ಮಹಿಳೆ ಈಗ ಜೈಲು ಪಾಲು