ಮುಂಡರಗಿ: ರಾಷ್ಟ್ರೀಯತೆ, ನಾಗರಿಕ ಪ್ರಜ್ಞೆ ಮೂಡಿಸುವುದರೊಂದಿಗೆ ವ್ಯಸನಮುಕ್ತ ಸಮಾಜ ನಿರ್ಮಾಣ ಮಾಡಲು ಎನ್‌ಎಸ್‌ಎಸ್ ಶಿಬಿರಗಳು ಸಹಕಾರಿಯಾಗಿವೆ ಎಂದು ಡಾ. ಅನ್ನದಾನೀಶ್ವರ ಸ್ವಾಮೀಜಿ ತಿಳಿಸಿದರು.ಜಗದ್ಗುರು ಅನ್ನದಾನೀಶ್ವರ ಶಿಕ್ಷಣ ಮಹಾವಿದ್ಯಾಲಯ ದತ್ತು ಗ್ರಾಮ ಬೆಣ್ಣಿಹಳ್ಳಿಯಲ್ಲಿ ಇತ್ತೀಚೆಗೆ ಕವಿವಿ ರಾಷ್ಟ್ರೀಯ ಸೇವಾ ಯೋಜನೆಯ ಘಟಕ, ಜಿಪಂ, ತಾಪಂ, ಕೊರ್ಲಹಳ್ಳಿ ಗ್ರಾಪಂ ಹಾಗೂ ಬೆಣ್ಣಿಹಳ್ಳಿ ಗ್ರಾಮಸ್ಥರ ಸಹಕಾದಿಂದ ಹಮ್ಮಿಕೊಂಡಿದ್ದ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರ ಉದ್ಘಾಟಿಸಿ, ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಮಾತನಾಡಿದರು.
ಸಮಿತಿ ಆಡಳಿತಾಧಿಕಾರಿ ಡಾ. ಬಿ.ಜಿ. ಜವಳಿ ಮಾತನಾಡಿ, ಎನ್ಎಸ್ಎಸ್ ಶಿಸ್ತು ಮತ್ತು ಸಂಯಮವನ್ನು ಕಲಿಸಿಕೊಡುತ್ತದೆ. ಯುವಕರು ದುಶ್ಚಟಗಳಿಗೆ ಬಲಿಯಾಗುವ ಇಂದಿನ ಕಾಲಮಾನದಲ್ಲಿ ವಿಶೇಷ ಗುಣಗಳನ್ನು ಬೆಳೆಸುವ ಇಂತಹ ಶಿಬಿರಗಳು ಅತ್ಯವಶ್ಯಕವಾಗಿವೆ ಎಂದರು.
ಕಾಲೇಜು ಮೇಲ್ವಿಚಾರಣಾ ಸಮಿತಿ ಕಾರ್ಯಾಧ್ಯಕ್ಷ ಸಿ.ಎಸ್. ಅರಸನಾಳ ಅಧ್ಯಕ್ಷತೆ ವಹಿಸಿ ಮಾತನಾಡಿ, ಪರಿಸರ ಸಂರಕ್ಷಣೆ ಹಿನ್ನೆಲೆ ಶಿಬಿರಾರ್ಥಿಗಳು ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಗ್ರಾಮಸ್ಥರಲ್ಲಿ ಜಾಗೃತಿ ಮೂಡಿಸಬೇಕು ಎಂದರು.ಕಾರ್ಯಕ್ರಮದಲ್ಲಿ ಕರಬಸಪ್ಪ ಹಂಚಿನಾಳ, ಎಂ.ಎಸ್. ಶಿವಶೆಟ್ಟಿ, ಎಸ್‌ಡಿಎಂಸಿ ಅಧ್ಯಕ್ಷ ಕೆಂಚಪ್ಪ ಕಂಬಳಿ, ಗುರುಪಾದಗೌಡ ಪಾಟೀಲ, ದೇವಪ್ಪ ಹೊಸಕುರುಬರ, ಎಂ.ಡಿ. ಪವಾರ, ದೇವಪ್ಪ ಕನಕಾಪೂರ, ರಾಮನಗೌಡ ಹೊರಗಲಮನಿ, ಜಗದೀಶ ಅಡರಕಟ್ಟಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.ಅಧ್ಯಕ್ಷತೆಯನ್ನು ಕಾಲೇಜು ಮೇಲ್ವಿಚಾರಣಾ ಸಮಿತಿ ಕಾರ್ಯಾಧ್ಯಕ್ಷ ಸಿ.ಎಸ್. ಅರಸನಾಳ ವಹಿಸಿ ಮಾತನಾಡಿ, ಪರಿಸರ ಸಂರಕ್ಷಣೆಯ ಹಿನ್ನೆಲೆಯಲ್ಲಿ ಶಿಬಿರಾರ್ಥಿಗಳು ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಗ್ರಾಮಸ್ಥರಲ್ಲಿ ಜಾಗೃತಿ ಮೂಡಿಸಬೇಕು ಎಂದು ಸಲಹೆ ನೀಡಿದರು.ಪ್ರಾ. ಡಾ. ಎಂ.ವಿ. ಕುಲಕರ್ಣಿ ಸ್ವಾಗತಿಸಿದರು. ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿ ಅನ್ನದಾನಸ್ವಾಮಿ ಮತ್ತೂರಮಠ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಶಿಕ್ಷಣಾರ್ಥಿ ಮಂಜುನಾಥ ಕಲ್ಮನಿ ನಿರೂಪಿಸಿ, ವಂದಿಸಿದರು.