ದಾಬಸ್‍ಪೇಟೆ: ವಿದ್ಯಾರ್ಥಿಗಳಿಗೆ ಗ್ರಾಮೀಣರ ಬದುಕನ್ನು ಅರ್ಥ ಮಾಡಿಕೊಳ್ಳಲು ಎನ್ನೆಸ್ಸೆಸ್ ಶಿಬಿರಗಳು ಸಹಕಾರಿ ಎಂದು ವನಕಲ್ಲು ಮಠದ ಡಾ.ಶ್ರೀ ಬಸವರಮಾನಂದ ಸ್ವಾಮೀಜಿ ಹೇಳಿದರು.
ಬೆಂಗಳೂರು ವಿಶ್ವವಿದ್ಯಾಲಯದ ಎನ್ನೆಸ್ಸೆಸ್ ಯೋಜನಾ ಸಂಯೋಜಕ ಡಾ.ಗೋವಿಂದಗೌಡ ಮಾತನಾಡಿ, ಬ್ರಾತೃತ್ವ ಮತ್ತು ಸ್ನೇಹ ಸಮಾಜದ ದೊಡ್ಡ ಆಸ್ತಿ. ಈ ಶಿಬಿರವು ಅನುಭವ ಆಧಾರಿತ ಶಿಕ್ಷಣ ನೀಡುತ್ತದೆ. ಗ್ರಾಮೀಣ ಬದುಕು, ಸಂಸ್ಕೃತಿಯ ಪರಿಚಯ ಆಗಲಿದೆ. ಶಿಬಿರಾರ್ಥಿಗಳ ವ್ಯಕ್ತಿತ್ವ ಬೆಳವಣಿಗೆ ಹೊಂದಲಿದೆ. ಎನ್ನೆಸ್ಸೆಸ್ ಶಿಬಿರಾರ್ಥಿಯು ಮುಂದಿನ ದಿನಗಳಲ್ಲಿ ಸಮಾಜ ಮುಖಿಯಾಗಿ ಕೆಲಸ ಮಾಡಲು ಪ್ರೇರಣೆ ಆಗಲಿದೆ ಎಂದರು.
ಕಾರ್ಯಕ್ರಮದಲ್ಲಿ ಕಾಲೇಜಿನ ವ್ಯವಸ್ಥಾಪಕ ಡಾ. ಚಂದ್ರಶೇಖರ ಗಂದಿಗುಡಿ ಎನ್ನೆಸ್ಸೆಸ್ ಕಾರ್ಯಕ್ರಮ ಅಧಿಕಾರಿ ಮಂಜೇಗೌಡ ಸೇರಿದಂತೆ ಉಪನ್ಯಾಸಕ ವರ್ಗ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ಪೋಟೋ 3 : ಸೋಂಪುರ ಹೋಬಳಿಯ ವನಕಲ್ಲು ಮಠದಲ್ಲಿ ಬೆಂಗಳೂರಿನ ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀ ವೀರೇಂದ್ರ ಪಾಟೀಲ ವಿಜ್ಞಾನ, ಕಲಾ ಹಾಗೂ ವಾಣಿಜ್ಯ ಪದವಿ ಮಹಾವಿದ್ಯಾಲಯ ಹಮ್ಮಿಕೊಂಡಿದ್ದ ವಿಶೇಷ ಶ್ರಮದಾನ ಶಿಬಿರದ ಸಮಾರೋಪ ಸಮಾರಂಭದಲ್ಲಿ ಡಾ.ಶ್ರೀ ಬಸವರಮಾನಂದ ಸ್ವಾಮೀಜಿ ಪಾಲ್ಗೊಂಡಿದ್ದರು.