ಕನ್ನಡಪ್ರಭ ವಾರ್ತೆ ಮೂಡುಬಿದಿರೆ
ಆಳ್ವಾಸ್ ಪದವಿಪೂರ್ವ ಕಾಲೇಜಿನ ೨೦೨೫-೨೬ನೇ ಶೈಕ್ಷಣಿಕ ವರ್ಷದ ರಾಷ್ಟ್ರೀಯ ಸೇವಾ ಯೋಜನೆಯ (ಎನ್‌ಎಸ್‌ಎಸ್) ಚಟುವಟಿಕೆಗಳನ್ನು ಶುಕ್ರವಾರ ಉದ್ಘಾಟಿಸಿ ಮಾತನಾಡಿದರು.
ವಿದ್ಯಾರ್ಥಿಗಳು ಶಿಸ್ತು, ಪ್ರಾಮಾಣಿಕತೆ, ಸಂವಹನ ಕೌಶಲ್ಯಗಳೊಂದಿಗೆ ಕಾರ್ಯನಿರ್ವಹಿಸಬೇಕು. ನಾವು ನಮ್ಮ ದೃಷ್ಟಿಕೋನವನ್ನು ಬದಲಾಯಿಸಬೇಕು. ಜ್ಞಾನಕ್ಕೆ ಸಮನಾದದ್ದು ಯಾವುದು ಇಲ್ಲ. ವಿದ್ಯೆಯೊಂದಿಗೆ ನಾವು ಸದ್ಬುದ್ಧಿಯನ್ನು ಬೆಳೆಸಿಕೊಳ್ಳಬೇಕು ಎಂದರು.ಆಳ್ವಾಸ್ ಪ.ಪೂ. ಕಾಲೇಜಿನ ಪ್ರಾಂಶುಪಾಲ ಮೊಹಮ್ಮದ್ ಸದಾಕತ್ ಅಧ್ಯಕ್ಷತೆ ವಹಿಸಿ, ರಾಷ್ಟ್ರೀಯ ಸೇವಾ ಯೋಜನೆ ಎಂಬುದು ಯಾವುದೇ ಹುದ್ದೆ ಅಲ್ಲ. ಅದು ಮಾನವೀಯತೆಯ ಜವಾಬ್ದಾರಿ. ಮಾನವೀಯತೆಯನ್ನು ಅಳವಡಿಸಿಕೊಂಡು, ನಿಸ್ವಾರ್ಥ ಸೇವೆಯನ್ನು ಮಾಡಬೇಕು. ನಾವು ಭಾರತೀಯರು, ಭಾರತೀಯ ಸಂಸ್ಕೃತಿಯನ್ನು ಸದಾ ಪಾಲಿಸಬೇಕು ಎಂದರು.ಕಾರ್ಯಕ್ರಮದಲ್ಲಿ ವಾಣಿಜ್ಯ ವಿಭಾಗದ ಡೀನ್ ಡಾ. ಪ್ರಶಾಂತ್ ಎಂ.ಡಿ., ಸಂಸ್ಕೃತ ವಿಭಾಗದ ಮುಖ್ಯಸ್ಥ ಅಂಬರೀಷ್ ಚಿಪ್ಳೂಣ್ಕರ್ ಇದ್ದರು. ಎನ್‌ಎಸ್‌ಎಸ್ ಸಂಯೋಜಕಿ ಮೇಘನಾ ಸ್ವಾಗತಿಸಿ, ಸ್ವಯಂಸೇವಕರಿಗೆ ಪ್ರತಿಜ್ಞಾವಿಧಿ ಬೋಧಿಸಿದರು.ಉಪನ್ಯಾಸಕಿ ಸ್ವಾತಿ ಪರಿಚಯಿಸಿದರು. ಕನ್ನಡ ಉಪನ್ಯಾಸಕ ಗಣಪತಿ ನಾಯಕ್ ವಂದಿಸಿದರು. ಗಣಿತ ವಿಭಾಗದ ಮುಖ್ಯಸ್ಥ ಪ್ರಭಾತ್ ಕಾರ್ಯಕ್ರಮ ನಿರ್ವಹಿಸಿದರು.