ಕನ್ನಡಪ್ರಭ ವಾರ್ತೆ ಮಳವಳ್ಳಿ
ತಾಲೂಕಿನ ಮಾದಹಳ್ಳಿ ಗ್ರಾಮದಲ್ಲಿ ಶಾಂತಿಕಾಲೇಜು ಪದವಿಪೂರ್ವ ಕಾಲೇಜು ವತಿಯಿಂದ ಹಮ್ಮಿಕೊಂಡಿರುವ ೨೦ನೇ ವರ್ಷದ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಧ್ವಜಾರೋಹಣ ನರೆವೇರಿಸಿ ಮಾತನಾಡಿ, ಎನ್‌ಎಸ್‌ಎಸ್ ವಿದ್ಯಾರ್ಥಿಗಳಿಗೆ ಸಮಯ, ಶಿಸ್ತು ಪಾಲನೆ ಜೊತೆಗೆ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾಗಿ ಸಹಾಯ ಮಾಡುತ್ತದೆ. ಶಿಬಿರ ಸಾಮಾಜಿಕ ಕಳಕಳಿಯನ್ನು ಕಲಿಸುತ್ತದೆ ಎಂದರು.
ಪಠ್ಯದ ಜೊತೆಗೆ ಪಠ್ಯೇತ್ತರ ಚಟುವಟಿಕೆಗಳು ವಿದ್ಯಾರ್ಥಿಗಳಿಗೆ ಪ್ರಮುಖವಾಗಿವೆ. ಎನ್‌ಎಸ್‌ಎಸ್ ಶಿಬಿರದಲ್ಲಿ ಶ್ರಮದಾನ, ಗಿಡನೆಟ್ಟು ಪರಿಸರ ಉಳಿಸುವುದು, ಸಾರ್ವಜನಿಕರಿಗೆ ಆರೋಗ್ಯದ ಜಾಗೃತಿ ಮೂಡಿಸುವುದು ಸೇರಿದಂತೆ ಅನೇಕ ಚಟುವಟಿಕೆಗಳು ಶಿಸ್ತು ಬದ್ದವಾಗಿ ನಡೆಯುವುದರಿಂದ ವಿದ್ಯಾರ್ಥಿಗಳಲ್ಲಿ ಕಲಿಸುವುದು ಹಾಗೂ ಕಲಿಯುವುದು ಏಕಕಾಲದಲ್ಲಿ ನಡೆಯುತ್ತದೆ. ನಾಯಕತ್ವದ ಗುಣ ಜೊತೆಯಲ್ಲಿಯೇ ಬೆಳೆಯುತ್ತದೆ ಎಂದರು.ಶಾಂತಿ ಸೇವಾ ಟ್ರಸ್ಟ್ ಕಾರ್ಯದರ್ಶಿ ಪುಟ್ಟರಾಜು ಉದ್ಘಾಟಿಸಿ ಮಾತನಾಡಿ, ಮಹಾತ್ಮ ಗಾಂಧೀಜಿಯವರ ಕನಸಿನ ಕೂಸು ರಾಷ್ಟ್ರೀಯ ಸೇವಾ ಯೋಜನೆಯಾಗಿದ್ದು, ರಾಷ್ಟ್ರಪ್ರೇಮ ಹಾಗೂ ಸೇವಾ ಮನೋಭಾವನೆಯನ್ನು ಬೆಳೆಸಲು ಶಿಬಿರ ಪ್ರಾಮುಖ್ಯತೆ ಪಡೆದಿದೆ ಎಂದು ವಿವರಿಸಿದರು.
ಮಾಹಿತಿ ಪುಸ್ತಕಕ್ಕೆ ಶಾಂತಿ ಶಿಕ್ಷಣ ಸಂಸ್ಥೆ ಯ ಉಪಾಧ್ಯಕ್ಷ ಎಚ್ ಎಂ ಮಹದೇವಸ್ವಾಮಿ ಚಾಲನೆ ನೀಡಿದರು. ಗ್ರಾಮ ಪಂಚಾಯಿತಿ ಅಧ್ಯಕ್ಷ ಗೋವಿಂದರಾಜು ವಸ್ತು ಪ್ರದರ್ಶನ ಕುಟೀರವನ್ನು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಶಾಂತಿ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಎಂ.ಎಚ್.ಕೆಂಪಯ್ಯ, ರಾಷ್ಟ್ರೀಯ ಸೇವಾ ಯೋಜನೆ ಅಧಿಕಾರಿ ಅನಿಲ್, ಹಿರಿಯ ಎನ್‌ಎಸ್‌ಎಸ್ ಅಧಿಕಾರಿ ರಂಗಸ್ವಾಮಿ ಸೇರಿದಂತೆ ಕಾಲೇಜಿನ ಎಲ್ಲಾ ಉಪನ್ಯಾಸಕರು ಹಾಗೂ ಮಾದಹಳ್ಳಿ ಮುಖಂಡರು ಇದ್ದರು.ಮಾಜಿ ಶಾಸಕರಿಂದ ಅಂಬೇಡ್ಕರ್ ಭವನ ಕಾಮಗಾರಿಗೆ ಚಾಲನೆ
ಶ್ರೀರಂಗಪಟ್ಟಣ ತಾಲೂಕಿನ ಮಹದೇವಪುರ ಬೋರೆ ಗ್ರಾಮದ ಅಂಬೇಡ್ಕರ್ ಕಾಲೋನಿಯಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅನುದಾನದಲ್ಲಿ ನಿರ್ಮಾಣಗೊಳ್ಳುತ್ತಿರುವ ಡಾ.ಬಿ.ಆರ್.ಅಂಬೇಡ್ಕರ್ ಭವನದ ಕಟ್ಟಡ ಕಾಮಗಾರಿಗೆ ಮಾಜಿ ಶಾಸಕ ರವೀಂದ್ರ ಶ್ರೀಕಂಠಯ್ಯ ಚಾಲನೆ ನೀಡಿದ ವೇಳೆ ಸ್ಥಳೀಯರು ಅಭಿನಂದಿಸಿದರು. ಜನಪ್ರತಿನಿಧಿಗಳು, ಜೆಡಿಎಸ್ ಮುಖಂಡರು ಇದ್ದರು.