ಎನ್ಎಸ್ಎಸ್‌ನಿಂದ ಸೇವಾ ಮನೋಭಾವ: ಡಾ. ಬಸವರಾಜ ಗೊರವರ

KannadaprabhaNewsNetwork |  
Published : Oct 27, 2025, 12:15 AM IST
ಕಾರ್ಯಕ್ರಮವನ್ನು ಕೆ.ವಿ.ಕುಷ್ಟಗಿ ಉದ್ಘಾಟಿಸಿದರು. | Kannada Prabha

ಸಾರಾಂಶ

ವಿದ್ಯಾರ್ಥಿಗಳ ಜೀವನದಲ್ಲಿ ಎನ್ಎಸ್ಎಸ್ ಸಮಯಪಾಲನೆ, ತುರ್ತು ಪರಿಸ್ಥಿತಿಗಳನ್ನು ಎದುರಿಸುವ ಸಾಮರ್ಥ್ಯ ಮತ್ತು ಆರೋಗ್ಯಕರ ದೈಹಿಕ ಹಾಗೂ ಮಾನಸಿಕ ಬೆಳವಣಿಗೆಯನ್ನು ಪ್ರೋತ್ಸಾಹಿಸುತ್ತದೆ.

ಗದಗ: ಎನ್ಎಸ್‌ಎಸ್ ಸಾಮಾಜಿಕ ಜವಾಬ್ದಾರಿ ಮತ್ತು ಸೇವಾ ಮನೋಭಾವವನ್ನು ಬೆಳೆಸುತ್ತದೆ ಎಂದು ಕರ್ನಾಟಕ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ ಡಾ. ಬಸವರಾಜ ಗೊರವರ ತಿಳಿಸಿದರು.

ನಗರದ ಆದರ್ಶ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಕರ್ನಾಟಕ ವಿಶ್ವವಿದ್ಯಾಲಯ ರಾಷ್ಟ್ರೀಯ ಸೇವಾ ಯೋಜನಾ ಕೋಶ ಹಾಗೂ ವಿ.ಆರ್. ಕುಷ್ಟಗಿ ಮೆಮೊರಿಯಲ್ ಕಾಲೇಜ್ ಆಫ್ ಕಾಮರ್ಸ್ ಸಹಯೋಗದಲ್ಲಿ ಕರ್ನಾಟಕ ವಿಶ್ವವಿದ್ಯಾಲಯ ಮಟ್ಟದ ಎನ್ಎಸ್‌ಎಸ್ ಕಾರ್ಯಕ್ರಮಾಧಿಕಾರಿಗಳಿಗೆ ನಡೆದ ಒಂದು ದಿನದ ತರಬೇತಿ ಕಾರ್ಯಗಾರದಲ್ಲಿ ಮಾತನಾಡಿದರು.

ವಿದ್ಯಾರ್ಥಿಗಳ ಜೀವನದಲ್ಲಿ ಎನ್ಎಸ್ಎಸ್ ಸಮಯಪಾಲನೆ, ತುರ್ತು ಪರಿಸ್ಥಿತಿಗಳನ್ನು ಎದುರಿಸುವ ಸಾಮರ್ಥ್ಯ ಮತ್ತು ಆರೋಗ್ಯಕರ ದೈಹಿಕ ಹಾಗೂ ಮಾನಸಿಕ ಬೆಳವಣಿಗೆಯನ್ನು ಪ್ರೋತ್ಸಾಹಿಸುತ್ತದೆ. ಶ್ರಮದ ಕೆಲಸಗಳನ್ನು ಮಾಡುವ ಮೂಲಕ ವಿದ್ಯಾರ್ಥಿಗಳಿಗೆ ಶ್ರಮದ ಘನತೆ ಮತ್ತು ಮೌಲ್ಯವನ್ನು ತಿಳಿಸುತ್ತದೆ. ಸಮುದಾಯ ಸೇವೆಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಜವಾಬ್ದಾರಿ ಮತ್ತು ಸಾರ್ವಜನಿಕ ಸೇವೆಗೆ ಸಿದ್ಧತೆ ಮೂಡಿಸುತ್ತದೆ ಎಂದರು.

ಸಂಸ್ಥೆಯ ಅಧ್ಯಕ್ಷ ಕೆ.ವಿ. ಕುಷ್ಟಗಿ ಮಾತನಾಡಿ, ಪ್ರತಿಯೊಬ್ಬ ವಿದ್ಯಾರ್ಥಿಗೂ ಎನ್ಎಸ್ಎಸ್ ಬಹಳಷ್ಟು ಅವಶ್ಯಕತೆವಾಗಿದೆ. ಅನೇಕ ವಿದ್ಯಾರ್ಥಿಗಳು ಮೊಬೈಲ್‌ನಿಂದ ತಮ್ಮ ಜೀವನವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ. ಅದರೊಂದಿಗೆ ಓದುವ ಆಸಕ್ತಿ ಕೂಡ ಕಡಿಮೆಯಾಗಿದ್ದು, ಸಮಾಜ ಸೇವೆಯ ಬಗ್ಗೆ ಸ್ವಲ್ಪ ಕೂಡ ಗಮನಹರಿಸದೆ ಇಡೀ ಪರಿಸರವನ್ನು ಹಾಳು ಮಾಡುತ್ತಿದ್ದಾರೆ. ಎನ್ಎಸ್ಎಸ್ ಮೂಲಕ ವನಮಹೋತ್ಸವ, ರಕ್ತದಾನ ಶಿಬಿರ, ಪರಿಸರ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕ ತಮ್ಮ ಉಜ್ವಲ ಜೀವನವನ್ನು ಸುಂದರವಾಗಿ ರೂಪಿಸಿಕೊಳ್ಳಬೇಕೆಂದರು.

ಕರ್ನಾಟಕ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ ಡಾ. ಬಿ.ಬಿ. ಹೊಳಗುಂದಿ ಮಾತನಾಡಿ, ಸಮಾಜ ಸೇವೆಯು ಸಮಾಜದ ಬಡವರು, ದುರ್ಬಲರು ಮತ್ತು ನಿರ್ಗತಿಕರಿಗೆ ಸಹಾಯ ಮಾಡುವುದಲ್ಲದೆ, ಸಮಾಜದ ಒಟ್ಟಾರೆ ಅಭಿವೃದ್ಧಿಗೆ ಕೊಡುಗೆ ನೀಡುತ್ತದೆ. ಇದು ವ್ಯಕ್ತಿಗಳಲ್ಲಿ ಜವಾಬ್ದಾರಿ, ಸಹಾನುಭೂತಿ ಮತ್ತು ನಾಯಕತ್ವದಂತಹ ಗುಣಗಳನ್ನು ಬೆಳೆಸುವುದರೊಂದಿಗೆ ದೇಶಭಕ್ತಿಯನ್ನು ಹೆಚ್ಚಿಸುತ್ತದೆ ಎಂದರು.

ಎನ್ಎಸ್ಎಸ್ ಕೋಶದ ಸಂಯೋಜನ ಅಧಿಕಾರಿ ಡಾ. ಎಂ.ಬಿ. ದಡಪತಿ ಮಾತನಾಡಿ, ರಾಷ್ಟ್ರೀಯ ಸೇವಾ ಯೋಜನೆ ಮಹತ್ವವೆಂದರೆ ಇದು ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಜವಾಬ್ದಾರಿ ಮತ್ತು ಸೇವಾ ಮನೋಭಾವವನ್ನು ಬೆಳೆಸುತ್ತದೆ. ಇದು ಸಮುದಾಯದ ಅಗತ್ಯತೆಗಳನ್ನು ಅರ್ಥ ಮಾಡಿಕೊಳ್ಳಲು, ಸಮಸ್ಯೆಗಳನ್ನು ಪರಿಹರಿಸಲು ಮತ್ತು ಶ್ರಮದ ಘನತೆ ತಿಳಿಯಲು ಸಹಾಯ ಮಾಡುತ್ತದೆ ಎಂದರು.

ಜಿಲ್ಲಾ ಎನ್ಎಸ್ಎಸ್ ನೋಡಲ್ ಅಧಿಕಾರಿ ಪ್ರೊ. ವಿ.ಎಚ್. ಕೊಳ್ಳಿ, ಮಂಜುನಾಥ ಸೋಲಾರ್ಗೊಪ್ಪ, ಪ್ರೊ. ಬಿ.ಪಿ. ಜೈನರ ಉಪನ್ಯಾಸ ನೀಡಿದರು. ಪ್ರಾ. ಪ್ರೊ. ಕೆ. ಗಿರಿರಾಜ ಕುಮಾರ, ಉಪ ಪ್ರಾಚಾರ್ಯ ಡಾ. ವಿ.ಟಿ. ನಾಯ್ಕರ್, ವಿದ್ಯಾರ್ಥಿ ಪ್ರತಿನಿಧಿಗಳಾದ ಭರತ್ ಸ್ವಾಮಿ, ವರ್ಷ, ನಮೃತ ಹಾಗೂ ವಿವಿಧ ತಾಲೂಕುಗಳಿಂದ ಆಗಮಿಸಿದ ಕಾರ್ಯಕ್ರಮಾಧಿಕಾರಿಗಳು, ಸ್ವಯಂ ಸೇವಕರು ಇದ್ದರು.

PREV

Recommended Stories

ಮೋಂಥಾ ಚಂಡಮಾರುತ ಅಬ್ಬರ : ಹವಾಮಾನ ಇಲಾಖೆ ಕಟ್ಟೆಚ್ಚರ
ಕೆಆರ್‌ಎಸ್‌ ವರ್ಷದಲ್ಲಿ 3ನೇ ಬಾರಿ ಭರ್ತಿ-ಬೆಂಗಳೂರಿಗಿಲ್ಲ ಜಲ ಸಂಕಷ್ಟ: ಡಿಸಿಎಂ