ಕನ್ನಡಪ್ರಭ ವಾರ್ತೆ ಬಾಗಲಕೋಟೆ
ಬಸವೇಶ್ವರ ವಾಣಿಜ್ಯ ಮಹಾವಿದ್ಯಾಲಯ, ಬಾಗಲಕೋಟೆಯ ರಾಷ್ಟ್ರೀಯ ಸೇವಾ ಯೋಜನಾ ಘಟಕಗಳ ವತಿಯಿಂದ ಮುಚಖಂಡಿಯಲ್ಲಿ ಒಂದು ವಾರದ ಕಾಲ ಹಮ್ಮಿಕೊಂಡ ವಾರ್ಷಿಕ ವಿಶೇಷ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದರು.
ಎನ್.ಎಸ್.ಎಸ್ ಶಿಬಿರಗಳು, ವಿದ್ಯಾರ್ಥಿಗಳಲ್ಲಿ ಜೀವನದ ಶಿಸ್ತು, ಸೌಹಾರ್ದತೆ ಮತ್ತು ಗ್ರಾಮ ನೈರ್ಮಲ್ಯದ ಪರಿಕಲ್ಪನೆ ಮೂಡಿಸುತ್ತದೆ. ಇಂತಹ ಶಿಬಿರಗಳಲ್ಲಿ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಸಿಬೇಕೆಂದರು.ಕಾರ್ಯಕ್ರಮದಲ್ಲಿ ಬಿ.ವಿ.ವಿ. ಸಂಘದ ಕಾಲೇಜುಗಳ ಆಡಳಿತ ಮಂಡಳಿಯ, ಪದನಿಮಿತ್ತ ಕಾರ್ಯದರ್ಶಿ ಡಾ.ಎಸ್.ಎಂ.ಗಾಂವ್ಕರ್ ಎನ್.ಎಸ್.ಎಸ್. ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಜಗನ್ನಾಥ್ ಚೌವ್ಹಾಣ ವಹಿಸಿದ್ದರು. ಎನ್.ಎಸ್.ಎಸ್. ಅಧಿಕಾರಿ ಡಾ.ಎಂ.ಎಂ.ಹುದ್ದಾರ, ಪ್ರಿಯಾಂಕಾ ಮಠದ, ಶಿಬಿರದ ಸಂಘಟಕರಾದ ರವಿ ಬಳಿಗೇರಿ, ಅಮೃತ ಗದ್ದನಕೇರಿ,ಶಿಬಿರಾರ್ಥಿಗಳು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.