ಕನ್ನಡಪ್ರಭ ವಾರ್ತೆ ಉಡುಪಿ
ರಾಷ್ಟ್ರೀಯ ಸೇವಾ ಯೋಜನಾ ಘಟಕಗಳ ಆಶ್ರಯದಲ್ಲಿ ನಶಾಮುಕ್ತ ಭಾರತ ಅಭಿಯಾನ ಅಂಗವಾಗಿ ಬಾಲಕಿಯರ ಸರಕಾರಿ ಪಪೂ ಕಾಲೇಜಿನ ಎನ್.ಎಸ್.ಎಸ್ ಘಟಕದ ವಾರ್ಷಿಕ ವಿಶೇಷ ವಾರ್ಷಿಕ ಶಿಬಿರದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಡಯಟ್‌ನ ಹಿರಿಯ ಉಪನ್ಯಾಸಕ ಚಂದ್ರ ನಾಯಕ್ ಮಾತನಾಡಿ, ಯುವಕರು ದೇಶದ ಭವಿಷ್ಯ. ರಾಷ್ಟ್ರವನ್ನು ಪ್ರಗತಿಯ ಹಾದಿಯಲ್ಲಿ ಮುನ್ನಡೆಸುವ ಅತಿದೊಡ್ಡ ಶಕ್ತಿ. ಅವರು ಸತ್ಯ, ನ್ಯಾಯ ಮತ್ತು ಸಮಾನತೆಯ ಮೌಲ್ಯಗಳನ್ನು ಪಾಲಿಸಿದಾಗ ಸಮಾಜದಲ್ಲಿ ಉತ್ತಮ ಬದಲಾವಣೆ ಸಾಧ್ಯ. ಎನ್ಎಸ್ಎಸ್ ವಿದ್ಯಾರ್ಥಿಗಳು ಮಾನವೀಯತೆ ಸಾರುವ ಮಕ್ಕಳಾಗಿ ಎಂದು ಕರೆ ನೀಡಿದರು.ಕಾಲೇಜಿನ ಅಭಿವೃದ್ಧಿ ಸಮಿತಿ ಉಪಾಧ್ಯಕ್ಷೆ ನಿರೂಪಮಾ ಪ್ರಸಾದ್ ಶಿಬಿರಕ್ಕೆ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರೌಢಶಾಲಾ ವಿಭಾಗದ ಮುಖ್ಯೋಪಾಧ್ಯಾಯಿನಿ ಇಂದಿರಾ, ಕಾಲೇಜಿನ ಶಿಕ್ಷಣ ಸೇವಾ ಸಮಿತಿಯ ಅಧ್ಯಕ್ಷ ರತ್ನಾಕರ್, ಖಜಾಂಜಿ ಶೇಖರ್ ಕೋಟ್ಯಾನ್, ನಿವೃತ್ತ ಉಪನ್ಯಾಸಕ ದಯಾನಂದ ಡಿ., ಹಿರಿಯ ಉಪನ್ಯಾಸಕಿ ಡಾ. ಉಷಾ, ಅಧ್ಯಾಪಕ ವೃಂದದವರು, ಶಿಬಿರಾರ್ಥಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಎನ್.ಎಸ್.ಎಸ್. ಶಿಬಿರಾಧಿಕಾರಿ ಭವ್ಯ ಸ್ವಾಗತಿಸಿ, ಉಪನ್ಯಾಸಕಿ ಗಿರಿಜಾ ಹೆಗ್ಡೆ ನಿರೂಪಿಸಿ, ಶುಭಗೀತಾ ವಂದಿಸಿದರು.