ಹುಬ್ಬಳ್ಳಿ:
ಇಲ್ಲಿನ ನವನಗರದ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ರಾಜ್ಯ ಎನ್‌ಎಸ್‌ಎಸ್ ಘಟಕ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಎನ್ಎಸ್ಎಸ್‌ನ ಪ್ರಾದೇಶಿಕ ನಿರ್ದೇಶನಾಲಯ ಹಾಗೂ ಕಾನೂನು ವಿವಿ ರಾಷ್ಟ್ರೀಯ ಸೇವಾ ಯೋಜನೆ ಸಹಯೋಗದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಭಾವೈಕ್ಯತಾ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.
ಎನ್‌ಎಸ್‌ಎಸ್ ಆಯೋಜಿಸುವ ಚಟುವಟಿಕೆಗಳಲ್ಲಿ ಭಾಗವಹಿಸುವುದರಿಂದ ಯುವಕರಲ್ಲಿ ಏಕತೆ ಮತ್ತು ಸಮಗ್ರತೆಯ ಭಾವನೆ ಮೂಡುತ್ತದೆ. ಹಾಗಾಗಿ ಇಂತಹ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡಬೇಕು. ಭಾಷೆ ಬೇರೆಯಾದರೂ ಏಕತೆಯ ಸಂಸ್ಕೃತಿಯನ್ನು ಭಾರತೀಯ ಭಾವೈಕ್ಯತೆಯಲ್ಲಿ ಕಾಣಬಹುದು ಎಂದರು.ಬೆಂಗಳೂರು ಗಾಂಧಿಭವನದ ನಿರ್ದೇಶಕ ಜಿ.ಬಿ. ಶಿವರಾಜು ಮಾತನಾಡಿ, ವಿದ್ಯಾರ್ಥಿಗಳು ಸಾಮಾಜಿಕ ಜವಾಬ್ದಾರಿಯುತ ನಾಗರೀಕರಾಗಿ ದೇಶದ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸಬೇಕು. ಸಮಾಜದ ಬಗ್ಗೆ ಜವಾಬ್ದಾರಿ ತೆಗೆದುಕೊಂಡಾಗ ಮಾತ್ರ ಸಮಾಜ ಸುಧಾರಣೆಯಾಗುತ್ತದೆ ಎಂದು ತಿಳಿಸಿದರು. ಬೆಂಗಳೂರು ಎನ್‌ಎಸ್‌ಎಸ್ ಪ್ರಾದೇಶಿಕ ನಿರ್ದೇಶಕ ಡಿ. ಕಾರ್ತಿಗೆಯನ್ ಮಾತನಾಡಿ, ರಾಷ್ಟ್ರೀಯ ಭಾವೈಕ್ಯತಾ ಶಿಬಿರವು ಯುವಕರಿಗೆ ಮಾತನಾಡುವ ಶೈಲಿ, ಹಿರಿಯರಿಗೆ ಗೌರವ ನೀಡುವ ಬಗ್ಗೆ ತಿಳಿಸಿಕೊಡಲಿದೆ. ಸಂಸ್ಕೃತಿ, ಭಾಷೆ, ಸಹೋದರ ಮನೋಭಾವ ಬೆಳೆಸಿಕೊಳ್ಳಲು ಸಹಾಯಕವಾಗಿದೆ. ಇವು ವಿದ್ಯಾರ್ಥಿಗಳ ಮುಂದಿನ ಜೀವನಕ್ಕೆ ಉಪಯೋಗಕಾರಿಯಾಗಲಿವೆ ಎಂದರು.