ರಾಷ್ಟ್ರೀಯ ಸೇವಾ ಯೋಜನೆಯು ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ಮಾತ್ರವಲ್ಲದೆ ಜೀವನದ ಸಾರವನ್ನು ತಿಳಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಎಸ್‌ಡಿಎಂಸಿ ಅಧ್ಯಕ್ಷ ನಿಂಗಪ್ಪ ಸಿದ್ದಾಪುರ ಹೇಳಿದರು.
ರಾಣಿಬೆನ್ನೂರು: ರಾಷ್ಟ್ರೀಯ ಸೇವಾ ಯೋಜನೆಯು ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ಮಾತ್ರವಲ್ಲದೆ ಜೀವನದ ಸಾರವನ್ನು ತಿಳಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಎಸ್‌ಡಿಎಂಸಿ ಅಧ್ಯಕ್ಷ ನಿಂಗಪ್ಪ ಸಿದ್ದಾಪುರ ಹೇಳಿದರು.ತಾಲೂಕಿನ ಹೊಸ ಹುಲಿಹಳ್ಳಿ ಗ್ರಾಮದ ದೇವಸ್ಥಾನದ ಸಭಾಭವನದಲ್ಲಿ ಬಿ.ಎ.ಜೆ.ಎಸ್.ಎಸ್ ಕಲಾ ಮತ್ತು ವಾಣಿಜ್ಯ ಮಹಿಳಾ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ ಘಟಕಗಳ ವತಿಯಿಂದ ಏರ್ಪಡಿಸಲಾಗಿದ್ದ ವಾರ್ಷಿಕ ವಿಶೇಷ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.
ಇಲ್ಲಿ ಎಲ್ಲರೂ ಒಂದೇ, ನಾನು ನೀನು ಎನ್ನುವ ಭೇದಭಾವಕ್ಕೆ ಅವಕಾಶವಿಲ್ಲ. ಪರಸ್ಪರ ಸಹಕಾರಿ ಮನೋಭಾವ ರೂಪಿಸಿಕೊಳ್ಳಲು ಬಹಳ ಮುಖ್ಯವಾದ ಶಿಬಿರ ಎಂದರು.ಜಿಪಂ ಮಾಜಿ ಸದಸ್ಯ ಸಿ.ಸಿ. ಪಾಟೀಲ ಮಾತನಾಡಿ, ನಮ್ಮ ಗ್ರಾಮದಲ್ಲಿ ಹೀಗೊಂದು ಶಿಬಿರ ನಡೆಯುತ್ತಿರುವುದು ನಮಗೆ ಹೆಮ್ಮೆಯ ವಿಚಾರ, ರಾ.ಸೇ. ಯೋಜನೆಯ ವಿಚಾರಧಾರೆಗಳು ಪ್ರತಿಯೊಬ್ಬ ಮನುಷ್ಯನಿಗೂ ಬಹಳ ಅಗತ್ಯ. ವಿದ್ಯಾರ್ಥಿ ದಿಸೆಯಲ್ಲೇ ಎನ್.ಎಸ್.ಎಸ್ ವಿಚಾರಗಳು ಮನದಲ್ಲಿ ಬೇರೂರಿದರೆ, ಆ ಧನಾತ್ಮಕ ಮಾನಸಿಕ ದೃಢತೆಗೆ ಸರಿಸಾಟಿ ಬೇರೆಯಿಲ್ಲ ಎಂದರು.ಬಿ.ಎ.ಜೆ.ಎಸ್.ಎಸ್. ಕಲಾ ಮತ್ತು ವಾಣಿಜ್ಯ ಮಹಿಳಾ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಸುರೇಶ ಬಣಕಾರ ಅಧ್ಯಕ್ಷತೆ ವಹಿಸಿ ಮಾತನಾಡಿ, ನಮ್ಮ ಕಾಲೇಜಿನಿಂದ ಪ್ರತಿ ವರ್ಷವೂ ವಿಶೇಷ ವಾರ್ಷಿಕ ಶಿಬಿರ ನಡೆಯುತ್ತದೆ. ಎನ್.ಎಸ್.ಎಸ್ ವಿದ್ಯಾರ್ಥಿಗಳಿಗೆ ಗ್ರಾಮ ಜೀವನ, ಹೊಂದಾಣಿಕೆಯ ಜೀವನ ಹಾಗೂ ಸರಳ ಜೀವನದ ಮಹತ್ವವನ್ನು ತಿಳಿಸುತ್ತದೆ. ವಿದ್ಯಾರ್ಥಿಗಳು ರಾ.ಸೇ. ಯೋಜನೆಯಲ್ಲಿ ಕಳೆಯುವ ದಿನಗಳು ಬಹಳ ಪ್ರಮುಖವಾದುದು. ನನಗಲ್ಲ ನಿನಗೆ ಎನ್ನುವ ಧೈರ್ಯದೊಡನೆ ಸರ್ವರನ್ನೂ ಸಮಾನವಾಗಿ ಕಾಣುವ ಮನೋಭಾವವನ್ನು ಹುಟ್ಟು ಹಾಕುವ ಇಂತಹ ಶಿಬಿರಗಳು ನಡೆಯುತ್ತಲೇ ಇರಬೇಕು ಎಂದರಲ್ಲದೆ, ವಿದ್ಯಾರ್ಥಿಗಳು ಶೈಕ್ಷಣಿಕ ವಿಚಾರಗಳ ಜೊತೆಗೆ ಇಂತಹ ಸಹಪಠ್ಯ ಚಟುವಟಿಕೆಗಳಲ್ಲಿ ಭಾಗವಹಿಸಲು ಮನಸ್ಸು ಮಾಡಬೇಕು ಎಂದರು..ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಲಾವಿದ ಡಾ.ಕೆ.ಸಿ. ನಾಗರಜ್ಜಿ, ಗ್ರಾಪಂ ಸದಸ್ಯರಾದ ಲಕ್ಷ್ಮಣ್ ರೆಡ್ಡಿ, ಭಾಗ್ಯಶ್ರೀ ಕುಪ್ಪೇಲೂರ, ನಿರ್ಮಲ ಕೋಟೆಗೌಡ, ಪ್ರೊ. ಕೆ.ಕೆ. ಹಾವಿನಾಳ ಪ್ರೊ. ದೇವರಾಜ ಹಂಚಿನಮನಿ, ಪ್ರೊ ಸಂತೋಷ ಭಜಂತ್ರಿ ಸೇರಿದಂತೆ ಮತ್ತಿತರು ಇದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.