ನಿಸ್ವಾರ್ಥ, ಪ್ರಾಮಾಣಿಕ ಸೇವೆಯೇ ಎನ್‌ಎಸ್‌ಎಸ್‌: ಪ್ರೊ. ಲೋಕೇಶ್ವರಯ್ಯ

KannadaprabhaNewsNetwork |  
Published : Oct 01, 2026, 02:00 AM IST
ನಿಸ್ವಾರ್ಥ ಹಾಗೂ ಪ್ರಾಮಾಣಿಕ ಸೇವೆಯೇ ರಾಷ್ಟ್ರೀಯ ಸೇವಾ ಯೋಜನೆ : ಪ್ರೊ. ಲೋಕೇಶ್ವರಯ್ಯ.  | Kannada Prabha

ಸಾರಾಂಶ

ಮುಖ್ಯ ಅತಿಥಿ ಡಾ.ವೆಂಕಟೇಶ್ ಎಲ್.ಎಂ. ಮಾತನಾಡಿ, ವಿದ್ಯಾರ್ಥಿಗಳು ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮದಲ್ಲಿ ಹೆಚ್ಚು ಹೆಚ್ಚು ಭಾಗವಹಿಸಿ ಮಾನವೀಯ ಮೌಲ್ಯನ್ನು ಅಳವಡಿಸಿಕೊಂಡು ತಮ್ಮ ಬದುಕನ್ನು ಚೆನ್ನಾಗಿ ಕಟ್ಟಿಕೊಳ್ಳಬೇಕೆಂದರು.

ಕನ್ನಡಪ್ರಭವಾರ್ತೆ ತಿಪಟೂರು

ಪ್ರತಿಫಲಾಪೇಕ್ಷೆ ಇಲ್ಲದೆ ನಿಸ್ವಾರ್ಥ ಹಾಗೂ ಪ್ರಾಮಾಣಿಕತೆಯಿಂದ ದುಡಿಯುವುದೇ ರಾಷ್ಟ್ರೀಯ ಸೇವಾ ಯೋಜನೆ ಎಂದು ಆಂಗ್ಲಭಾಷಾ ಪ್ರಾಧ್ಯಾಪಕ ಪ್ರೊ. ಲೋಕೇಶ್ವರಯ್ಯ ತಿಳಿಸಿದರು.

ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕಗಳ ವತಿಯಿಂದ ಆಯೋಜಿಸಿದ್ದ ರಾಷ್ಟ್ರೀಯ ಸೇವಾ ಯೋಜನೆ ಸದ್ಭಾವನಾ ದಿನಾಚರಣೆ ಪ್ರಯುಕ್ತ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದ ಅವರು, ರಾಷ್ಟ್ರೀಯ ಸೇವಾ ಯೋಜನೆ ಗಾಂಧೀಜಿಯವರ ಕನಸಿನ ಕೂಸು. ಸ್ವಾತಂತ್ರ್ಯಾನಂತರ ಸಮಸ್ಯೆಗಳ ನಿವಾರಣೆಗಾಗಿ ಭಾರತದ ಯುವಶಕ್ತಿ ಸದ್ಬಳಿಕೆ ಮಾಡಿಕೊಳ್ಳಲು ಗಾಂಧೀಜಿಯವರ ಜನ್ಮ ಶತಾಬ್ಧಿ ಅಂಗವಾಗಿ ರಾಷ್ಟ್ರೀಯ ಸೇವಾ ಯೋಜನೆ ಆರಂಭಿಸಲಾಯಿತು ಎಂದು ಹೇಳಿದರು.

ಕನ್ನಡ ವಿಭಾಗದ ಮುಖ್ಯಸ್ಥೆ ಪ್ರೊ. ಸ್ಮಿತಾ ಎಚ್.ಎಸ್. ಪ್ರಾಸ್ತಾವಿಕ ಮಾತನಾಡಿ, ರಾಷ್ಟ್ರೀಯ ಸೇವಾ ಯೋಜನೆಯು ವಿದ್ಯಾರ್ಥಿಗಳಲ್ಲಿ ಸಮಾಧಾನ, ಅರಿವು, ಹೊಂದಾಣಿಕೆ ಗುಣ, ಬದುಕಿನಲ್ಲಿ ಆತ್ಮವಿಶ್ವಾಸ, ನಂಬಿಕೆ, ಸಾಮರಸ್ಯದೊಂದಿಗೆ ಸಮುದಾಯದೊಂದಿಗೆ ಬದುಕುವ ಗುಣಗಳನ್ನು ಬೆಳೆಸುತ್ತದೆ ಎಂದು ಹೇಳಿದರು.

ಮುಖ್ಯ ಅತಿಥಿ ಡಾ.ವೆಂಕಟೇಶ್ ಎಲ್.ಎಂ. ಮಾತನಾಡಿ, ವಿದ್ಯಾರ್ಥಿಗಳು ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮದಲ್ಲಿ ಹೆಚ್ಚು ಹೆಚ್ಚು ಭಾಗವಹಿಸಿ ಮಾನವೀಯ ಮೌಲ್ಯನ್ನು ಅಳವಡಿಸಿಕೊಂಡು ತಮ್ಮ ಬದುಕನ್ನು ಚೆನ್ನಾಗಿ ಕಟ್ಟಿಕೊಳ್ಳಬೇಕೆಂದರು.

ಅಧ್ಯಕ್ಷತೆ ವಹಿಸಿದ ಪ್ರಾಂಶುಪಾಲ ಡಾ. ಶಶಿಕುಮಾರ್ ಎಚ್.ಸಿ. ಮಾತನಾಡಿ, ವಿದ್ಯಾರ್ಥಿಗಳು ಪಠ್ಯದ ಜೊತೆಗೆ ರಾಷ್ಟ್ರೀಯ ಸೇವಾ ಯೋಜನೆಯಲ್ಲಿ ತೊಡಗಿಕೊಂಡು ರಾಷ್ಟ್ರದ ಒಳಿತಿಗೆ ದುಡಿಯಬೇಕೆಂದರು.

ಶಿಬಿರ ಅಧಿಕಾರಿಗಳಾದ ಭಾರತಿ ವೈ.ಕೆ., ಡಾ. ತುಕಾರಾಮ, ಎನ್‌ಎಸ್‌ಎಸ್ ಸ್ವಯಂಸೇವಕರಾದ ನೂತನ್, ಲಾವಣ್ಯ, ದಿಲ್ಲಿರಾಣಿ, ವೀರೇಶ್ ಶಿಬಿರ ಅನುಭವ ಹಂಚಿಕೊಂಡರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಸ್ತೆ ಬದಿ ಕಸ ಎಸೆದವರಿಗೆ ಪಾಲಿಕೆ ಪಾಠ!
ಸಚಿವ ಜೋಶಿ ಕುಟುಂಬದ ಕುರಿತ ಹೇಳಿಕೆಗೆ ರೈತ ಹೋರಾಟಗಾರ ವಿಷಾದ