ಶಿವಮೊಗ್ಗ: ರಾಷ್ಟ್ರೀಯ ಸೇವಾ ಯೋಜನಾ ಕೋಶ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕರ್ನಾಟಕ ಸರಕಾರವು ನೀಡುವ ಎನ್ಎಸ್ಎಸ್ ಅತ್ಯುತ್ತಮ ಕಾರ್ಯಕ್ರಮಾಧಿಕಾರಿ ರಾಜ್ಯ ಪ್ರಶಸ್ತಿಗೆ ಸಹ್ಯಾದ್ರಿ ವಾಣಿಜ್ಯ ಕಾಲೇಜಿನ ಕನ್ನಡ ಪ್ರಾಧ್ಯಾಪಕಿ ಡಾ. ಶುಭಾ ಮರವಂತೆ ಆಯ್ಕೆಯಾಗಿದ್ದಾರೆ. ಕುವೆಂಪು ವಿಶ್ವವಿದ್ಯಾಲಯದ ಮೊದಲ ರಾಜ್ಯ ಪ್ರಶಸ್ತಿ ಪಡೆದ ಮಹಿಳೆ ಶುಭ ಅವರಾಗಿದ್ದಾರೆ. ಅತ್ಯುತ್ತಮ ಘಟಕ ಕಾಲೇಜು ಎಂಬ ಅಭಿಮಾನಕ್ಕೆ ಸಹ್ಯಾದ್ರಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜು ಭಾಜನವಾಗಿದೆ. ಸಾಹಿತ್ಯ, ಸಂಸ್ಕೃತಿ, ಸಾಮಾಜಿಕ ಸೇವೆ ಹೀಗೆ ವಿವಿಧ ಕ್ಷೇತ್ರಗಳಲ್ಲಿ ನಿರಂತರ ಕ್ರಿಯಾಶೀಲತೆಯ ಮೂಲಕ ಗುರುತಿಸಿಕೊಂಡಿರುವ ಡಾ. ಶುಭಾ ಅವರು ಮೈಸೂರಿನಲ್ಲಿ ನಡೆಯುತ್ತಿರುವ ದಸರಾ ಮಹಿಳಾ ಕವಿಗೋಷ್ಠಿ ಯಲ್ಲೂ ಭಾಗವಹಿಸುತ್ತಿದ್ದಾರೆ. ಕುಲಪತಿ ಡಾ ಎಸ್. ವೆಂಕಟೇಶ್, ಕುಲಸಚಿವ ಡಾ. ಸ್ನೇಹಲ್ ಸುಧಾಕರ್ ಲೋಖಂಡೆ, ಪ್ರಾಚಾರ್ಯ ಡಾ. ಎಂ.ಕೆ. ವೀಣಾ ಹಾಗೂ ಎಲ್ಲ ಸಹೋದ್ಯೋಗಿಗಳು, ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿದ್ದಾರೆ. - - - -15ಎಸ್ಎಂಜಿಕೆಪಿ05: ಶುಭ ಮರವಂತೆ