ಎನ್ನೆಸ್ಸೆಸ್‌ ಮಾನವೀಯ ಮೌಲ್ಯ, ಸೇವಾ ಮನೋಭಾವ ಬೆಳೆಸಲಿದೆ

KannadaprabhaNewsNetwork |  
Published : Sep 29, 2025, 03:02 AM IST
ಎನ್.ಎಸ್.ಎಸ್ ದಿನಾಚರಣೆ ನಿಮಿತ್ತ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಗಣ್ಯರು ಸಸಿಗೆ ನೀರುಣಿಸುವ ಮೂಲಕ ಉದ್ಘಾಟಿಸಿದರು. | Kannada Prabha

ಸಾರಾಂಶ

ವಿದ್ಯಾರ್ಥಿಗಳು ಆದರ್ಶ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು. ಎನ್.ಎಸ್.ಎಸ್ ವಿದ್ಯಾರ್ಥಿಗಳಲ್ಲಿ ಮಾನವೀಯ ಮೌಲ್ಯಗಳು ಹಾಗೂ ಸೇವಾ ಮನೋಭಾವ ಬೆಳೆಸುತ್ತದೆ ಎಂದು ಧಾರವಾಡದ ಸಾಹಿತಿ ಡಾ.ರುದ್ರೇಶ ಮೇಟಿ ಹೇಳಿದರು.

ಕನ್ನಡಪ್ರಭ ವಾರ್ತೆ ಬಾಗಲಕೋಟೆ

ವಿದ್ಯಾರ್ಥಿಗಳು ಆದರ್ಶ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು. ಎನ್.ಎಸ್.ಎಸ್ ವಿದ್ಯಾರ್ಥಿಗಳಲ್ಲಿ ಮಾನವೀಯ ಮೌಲ್ಯಗಳು ಹಾಗೂ ಸೇವಾ ಮನೋಭಾವ ಬೆಳೆಸುತ್ತದೆ ಎಂದು ಧಾರವಾಡದ ಸಾಹಿತಿ ಡಾ.ರುದ್ರೇಶ ಮೇಟಿ ಹೇಳಿದರು.

ನವನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಐಕ್ಯೂಎಸಿ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಸಹಯೋಗದಲ್ಲಿ ವಿಶ್ವಮಾನವ ಸಭಾಭವನದಲ್ಲಿ ಬುಧವಾರ ನಡೆದ ರಾಷ್ಟ್ರೀಯ ಸೇವಾ ಯೋಜನೆ ದಿನಾಚರಣೆಯ ವಿಶೇಷ ಉಪನ್ಯಾಸ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಇಂದಿನ ಮೊಬೈಲ್ ಬಳಕೆಯ ಸಮಾಜದಲ್ಲಿರುವ ವಿದ್ಯಾರ್ಥಿಗಳು ಆದರ್ಶ ವ್ಯಕ್ತಿತ್ವ ಕಟ್ಟಿಕೊಳ್ಳಲು ಭೌತಿಕ, ಬೌದ್ಧಿಕ ಸಂಪತ್ತು ಹೆಚ್ಚಿಸಿಕೊಳ್ಳಲು ಎನ್.ಎಸ್.ಎಸ್ ಘಟಕ ಪೂರಕವಾದೆ. ಸೇವೆಯ ಪರಿಕಲ್ಪನೆ ಅರಿತುಕೊಂಡು ಉತ್ತಮ ನಾಗರಿಕರಾಗಬೇಕು ಎಂದರು.ಪ್ರಾಂಶುಪಾಲ ಡಾ.ಅರುಣಕುಮಾರ ಗಾಳಿ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿಗಳು ಪರಿಸರ ಪ್ರಜ್ಞೆ ಬೆಳೆಸಿಕೊಳ್ಳುವ ಮೂಲಕ ಸಹಕಾರ, ಸಹಬಾಳ್ವೆಯಿಂದ ಬದುಕುವ ರೀತಿಯನ್ನು ಎನ್.ಎಸ್.ಎಸ್. ಕಲಿಸುತ್ತದೆ. ಸಮಾಜ ನಮಗೇನು ಕೊಟ್ಟಿದೆ ಎನ್ನುವುದಕ್ಕಿಂತ ಸಮಾಜಕ್ಕೆ ನಾವು ಏನು ಕೊಡುತ್ತಿದ್ದೇವೆ ಎನ್ನುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.ಕನ್ನಡ ವಿಭಾಗದ ಮುಖ್ಯಸ್ಥ ಡಾ.ಜಿ.ಜಿ.ಹಿರೇಮಠ ಅವರು ಆಶಯ ನುಡಿ ಹೇಳಿ, ಎನ್.ಎಸ್.ಎಸ್. ಮುಖ್ಯ ಉದ್ದೇಶ ವಿದ್ಯಾರ್ಥಿಗಳ ವ್ಯಕ್ತಿತ್ವವನ್ನು ಸಾರ್ವಜನಿಕ ಸೇವೆಯ ಮೂಲಕ ಅಭಿವೃದ್ಧಿಗೊಳಿಸುವುದಾಗಿದೆ. ಗಾಂಧೀಜಿಯವರ ತಿಳಿಸಿದ ಸರ್ವೋದಯ ತತ್ವಗಳನ್ನು ಎಲ್ಲರೂ ಅಳವಡಿಸಿಕೊಳ್ಳಬೇಕು ಎಂದರು.ಧಾರವಾಡ ಅಂಜುಮನ್ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಡಾ.ಮೇಟಿ ರುದ್ರೇಶ ಅವರು ವಿದ್ಯಾರ್ಥಿಗಳಲ್ಲಿ ಸ್ಪರ್ಧಾತ್ಮಕ ಮನೋಭಾವ ವಿಷಯದ ಕುರಿತು ಉಪನ್ಯಾಸ ನೀಡಿದರು. ಧಾರವಾಡ ಹಿರಿಮಲ್ಲೂರ್ ಈಶ್ವರನ್ ಕಾಲೇಜಿನ ಕನ್ನಡ ಅಧ್ಯಾಪಕ ಡಾ.ಈರಣ್ಣ ಇಂಜಗನೇರಿ ಎನ್.ಎಸ್.ಎಸ್ ಮತ್ತು ನಾಯಕತ್ವ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಿದರು. ಕಾಲೇಜಿನ ಐಕ್ಯೂಎಸಿ ಸಂಚಾಲಕರಾದ ಡಾ.ಬಸವರಾಜ ಬೀಳಗಿ, ಎನ್.ಎಸ್.ಎಸ್ ಘಟಕದ ಸಹ ಸಂಯೋಜನಾಧಿಕಾರಿ ಪ್ರೊ.ಸಂಪತ್ತ ಲಮಾಣಿ, ಡಾ.ಚಂದ್ರಶೇಖರ ಕಾಳನ್ನವರ ವೇದಿಕೆ ಮೇಲೆ ಉಪಸ್ಥಿತರಿದ್ದರು. ಪ್ರೊ.ಪರಸಪ್ಪ ತಳವಾರ ಪ್ರಾರ್ಥಿಸಿದರು. ಡಾ.ಬಸವರಾಜ ಬೀಳಗಿ ಸ್ವಾಗತಿಸಿದರು. ಡಾ.ಚಂದ್ರಶೇಖರ ಕಾಳನ್ನವರ ನಿರೂಪಿಸಿದರು. ಪ್ರೊ.ಸಂಪತ್ತ ಲಮಾಣಿ ವಂದಿಸಿದರು. ಕಾಲೇಜಿನ ಎನ್.ಎಸ್.ಎಸ್. ಘಟಕದ ಸ್ವಯಂ ಸೇವಕರು, ಕಾಲೇಜಿನ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

PREV

Recommended Stories

ಸಿಲೋಗನಾ ಹೆಸರಿನಲ್ಲಿ ವಿಜಯ ದಶಮಿ ಆಚರಿಸುವ ದನಗರ ಗೌಳಿಗರು
ಭಟ್ಕಳದಲ್ಲಿ ಭಾರೀ ಮಳೆ: ಜನಜೀವನ ಅಸ್ತವ್ಯಸ್ತ