ರಾಮನಗರ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಪರೀಕ್ಷೆ ರದ್ದು ಮಾಡಿರುವ ಕೇಂದ್ರ ಸರ್ಕಾರದ ಕ್ರಮವನ್ನು ಖಂಡಿಸಿ ಎನ್‍ಎಸ್‍ಯುಐ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಬುಧವಾರ ಸಂಜೆ ಪಂಜಿನ ಮೆರವಣಿಗೆ ನಡೆಸಿದರು.
ಎನ್ ಎಸ್ ಯು ಐ ರಾಜ್ಯ ಪ್ರಧಾನ ಕಾರ್ಯದರ್ಶಿ ವಿನೋದ್ ಕುಮಾರ್ ಮಾತನಾಡಿ, ಕೇಂದ್ರ ಸರ್ಕಾರ ನೀಟ್ ಪರೀಕ್ಷೆಯನ್ನು ಸಮರ್ಥವಾಗಿ ನಿರ್ವಹಿಸಲಾಗದೇ ಯುವ ಜನಾಂಗದ ಕನಸುಗಳನ್ನು ಭಗ್ನಗೊಳಿಸಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಮಾನವ ಸಂಪನ್ಮೂಲ ಸಚಿವ ಧರ್ಮೇಂದ್ರ ಪ್ರಧಾನ್ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.
ಎನ್‌ಎಸ್‌ಯುಐ ರಾಜ್ಯಾಧ್ಯಕ್ಷ ಕೀರ್ತಿ ಗಣೇಶ್ ಮಾತನಾಡಿ, ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಜೀವನದಲ್ಲಿ ಚೆಲ್ಲಾಟ ಆಡುತ್ತಿದ್ದು, ನೀಟ್ ವಿಚಾರವಾಗಿ 17 ಜನ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ಒಂದು ಸಣ್ಣ ಪ್ರಶ್ನೆ ಪತ್ರಿಕೆ ತಡೆಯಲು ಸಾಧ್ಯವಾಗುತ್ತಿಲ್ಲ, ಮಾನವೀಯತೆ ದೃಷ್ಟಿಯಿಂದ 17 ಜನ ವಿದ್ಯಾರ್ಥಿಗಳ ಕುಟುಂಬಕ್ಕೆ ಸಾಂತ್ವನ ಹೇಳಲು ಮುಂದಾಗದ ಧರ್ಮೆಂದ್ರ ಪ್ರದಾನ್ ಈ ಕೂಡಲೇ ರಾಜೀನಾಮೆ ನೀಡಬೇಕು. ರಾಜೀನಾಮೆ ನೀಡುವವರೆಗೂ ನಮ್ಮ ಪ್ರತಿಭಟನೆ ಮುಂದುವರಿಯಲಿದೆ ಎಂದರು.ಜಿಲ್ಲಾಧ್ಯಕ್ಷ ಅಮರ್ ಮಾತನಾಡಿ, ವೈದ್ಯಕೀಯ ಪ್ರವೇಶಕ್ಕಾಗಿ 22ಲಕ್ಷ ವಿದ್ಯಾರ್ಥಿಗಳು ನೀಟ್ ಪರೀಕ್ಷೆ ಬರೆದಿದ್ದಾರೆ, ವಿದ್ಯಾರ್ಥಿಗಳಿಗೆ ನ್ಯಾಯ ಸಿಗಬೇಕು, ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ಕುಟುಂಬಗಳಿಗೆ ಪರಿಹಾರ ಘೋಷಿಸಬೇಕು. ಪ್ರಧಾನಿ ಮೋದಿ ಅವರು ಧರ್ಮೆಂದ್ರ ಪ್ರದಾನ್ ಅವರನ್ನು ಈ ಕೂಡಲೇ ಸಚಿವ ಸ್ಥಾನದಿಂದ ವಜಾಗೊಳಿಸಬೇಕು ಎಂದು ಅಗ್ರಹಿಸಿದರು.
28ಕೆಆರ್ ಎಂಎನ್ 6.ಜೆಪಿಜಿ