ಕಾರ್ಮಿಕರ ಮಕ್ಕಳಿಗೆ ಕೂಸಿನ ಮನೆ ಸಹಕಾರಿ: ಸವಿತಾ ಎಂ.

KannadaprabhaNewsNetwork |  
Published : Jan 17, 2024, 01:46 AM IST
ಅಅಅ | Kannada Prabha

ಸಾರಾಂಶ

ಬೆಳಗಾವಿ ತಾಲೂಕಿನ ಕಂಗ್ರಾಳಿ ಗ್ರಾಪಂ ವ್ಯಾಪ್ತಿಯಲ್ಲಿ ಬರುವ ಅಲತಗಾ ಗ್ರಾಮದಲ್ಲಿ ಜಿಪಂ, ಎಸ್.ಐ.ಆರ್.ಡಿ ಹಾಗೂ ಗ್ರಾಪಂನಿಂದ ಮಂಗಳವಾರ ಆಯೋಜಿಸಿದ್ದ ಕೂಸಿನ ಮನೆಯ ಉದ್ಘಾಟನಾ ಕಾರ್ಯಕ್ರಮ ನೆರವೇರಿತು.

ಕನ್ನಡಪ್ರಭ ವಾರ್ತೆ ಬೆಳಗಾವಿ

ನರೇಗಾ ಯೋಜನೆಯಡಿ ಕೆಲಸ ಮಾಡುತ್ತಿರುವ ಕೂಲಿ ಕಾರ್ಮಿಕರ ಮಕ್ಕಳಿಗೆ ಕೂಸಿನ ಮನೆ ಸಹಕಾರಿಯಾಗಲಿದೆ ಎಂದು ಸಹಾಯಕ ನಿರ್ದೇಶಕ ಸವಿತಾ ಎಂ. ಹೇಳಿದರು.

ತಾಲೂಕಿನ ಕಂಗ್ರಾಳಿ ಗ್ರಾಪಂ ವ್ಯಾಪ್ತಿಯಲ್ಲಿ ಬರುವ ಅಲತಗಾ ಗ್ರಾಮದಲ್ಲಿ ಜಿಪಂ, ಎಸ್.ಐ.ಆರ್.ಡಿ ಹಾಗೂ ಗ್ರಾಪಂನಿಂದ ಮಂಗಳವಾರ ಆಯೋಜಿಸಿದ್ದ ಕೂಸಿನ ಮನೆಯ ಉದ್ಘಾಟನಾ ಕಾರ್ಯಕ್ರಮ ನೆರವೇರಿಸಿ ಅವರು ಮಾತನಾಡಿದರು. ಗ್ರಾಮೀಣ ಭಾಗದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ತಮ್ಮ ಜಮೀನುಗಳಲ್ಲಿ ಕೃಷಿ ಕೆಲಸಕ್ಕೆ ತೆರಳುತ್ತಾರೆ. ಕೂಲಿ ಕಾರ್ಮಿಕರು ಹಾಗೂ ಕೃಷಿ ಕಾರ್ಮಿಕರು ಬಹುತೇಕರು ಬಡ ಕುಟುಂಬದವರಾಗಿದ್ದು, ಪ್ರತಿ-ನಿತ್ಯ ಕೂಲಿ ಕೆಲಸಕ್ಕೆ ತೆರಳುವ ಅನಿವಾರ್ಯತೆ ಇರುತ್ತದೆ ಎಂದರು.

ಇಂತಹ ಕುಟುಂಬದ ಮಹಿಳೆಯರು ತಮ್ಮ ಚಿಕ್ಕ ಮಕ್ಕಳನ್ನು ತಮ್ಮೊಂದಿಗೆ ಕರೆದುಕೊಂಡು ಹೋಗುವುದು ಅಸಾಧ್ಯ. ಮಹಿಳೆಯರು ತಮ್ಮ ಮಕ್ಕಳನ್ನು ಮನೆಯಲ್ಲಿಯೇ ಬಿಟ್ಟು ಕೆಲಸಕ್ಕೆ ತೆರಳಿದ ಸಂದರ್ಭದಲ್ಲಿ ಅವರು ಕೆಲಸದಿಂದ ಮನೆಗೆ ಮರಳುವವರೆಗೆ ಮಗುವಿಗೆ ತಾಯಿ ಹಾಲು ದೊರೆಯುವುದಿಲ್ಲ. ಜೊತೆಗೆ ಪೌಷ್ಟಿಕ ಆಹಾರ ದೊರೆಯುವುದಿಲ್ಲ. ಇದರಿಂದ ಮಕ್ಕಳು ಅಪೌಷ್ಟಿಕತೆಗೆ ಒಳಗಾಗಬಹುದಾಗಿದೆ. ಇದರಿಂದ ಗ್ರಾಮೀಣರ ಮಾನಸಿಕ ಆರೋಗ್ಯವು ಹಾಳಾಗುತ್ತದೆ. ಈ ಸಮಸ್ಯೆಗಳ ನಿವಾರಣೆಗೆ ಸರ್ಕಾರ ಈ ಯೋಜನೆ ಆರಂಭಿಸಿದೆ ಎಂದರು.

ಗ್ರಾಪಂ ಅಧ್ಯಕ್ಷೆ ದೊಡ್ಡವ್ವ ಮಾಳಗಿ, ಉಪಾಧಕ್ಕ್ಷ ಕಲ್ಲಪ್ಪ ಪಾಟೀಲ, ಪಿಡಿಒ ಗೋಪಾಲ ನಾಯಕ, ತಾಂತ್ರಿಕ ಸಂಯೋಜಕ ನಾಗರಾಜ ಯರಗುದ್ದಿ, ತಾಲೂಕು ಐಇಸಿ ಸಂಯೋಕರಾದ ರಮೇಶ ಮಾದರ, ಮಾಂತೇಶ ಬಾಡವನಮಠ, ಗಣಕಯಂತ್ರ ನಿರ್ವಾಹಕ ಪ್ರಶಾಂತ ಹೊಸಮನಿ ಸರ್ವ ಸದಸ್ಯರು ಹಾಗೂ ಗ್ರಾಮ ಪಂಚಾಯತಿ ಸಿಬ್ಬಂದಿ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!