ಕನ್ನಡಪ್ರಭ ವಾರ್ತೆ ಬಾಗಲಕೋಟೆ
ಎಸ್.ನಿಜಲಿಂಗಪ್ಪ ವೈದ್ಯಕೀಯ ಮಹಾವಿದ್ಯಾಲಯದ ಶತಾಬ್ಧಿ ಭವನದಲ್ಲಿ ಬಿವಿವಿ ಸಂಘದ ಸಜ್ಜಲಶ್ರೀ ನರ್ಸಿಂಗ್ ಕಾಲೇಜ್, ಬಿವಿವಿ.ಎಸ್.ಕೆ. ನರ್ಸಿಂಗ್ ಕಾಲೇಜ್ ಮತ್ತು ಶಾರದಾಂಬೆ ನರ್ಸಿಂಗ್ ಕಾಲೇಜ್ ಈ ಮೂರು ಸಂಸ್ಥೆಗಳ ಪದವಿ ಪ್ರದಾನ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.
ಪದವಿಧರರಾಗುವುದೆಂದರೆ ಅವಲಂಬನೆಯಿಂದ ಸ್ವಾವಲಂಬನೆಯತ್ತ ಪಯಣ. ನಿಮ್ಮ ಯಶಸ್ಸಿನಲ್ಲಿ ಪಾಲಕರ ಮತ್ತು ಶಿಕ್ಷಕರ ಶ್ರಮವಿದೆ. ಶಿಕ್ಷಣ ನೀಡಿದ ಸಂಸ್ಥೆಗೆ ಗೌರವ ತರುವಂತೆ ಆರೋಗ್ಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.ಬಿವಿವಿ ಸಂಘದ ಕಾರ್ಯಾಧ್ಯಕ್ಷ ಡಾ.ವೀರಣ್ಣ ಸಿ.ಚರಂತಿಮಠ ಅವರು ಮಾತನಾಡಿ, ಆರೋಗ್ಯ ಕ್ಷೇತ್ರದಲ್ಲಿ ನರ್ಸಿಂಗ್ ಸಿಬ್ಬಂದಿ ಕೊಡುಗೆ ಗಮನಾರ್ಹವಾಗಿದೆ. ಶುಶ್ರೂಷಕ ಸಿಬ್ಬಂದಿ ಆರೋಗ್ಯ ಕ್ಷೇತ್ರದ ಬೆನ್ನೆಲುಬು ಇದ್ದಂತೆ. ಕೋವಿಡ್ ಸಂದರ್ಭದಲ್ಲಿ ನಸಿಂಗ್ ವೃತ್ತಿ ಪರಿಣತರು ಸಲ್ಲಿಸಿದ ಸೇವೆ ಅಭಿನಂದನಾರ್ಹವಾಗಿದೆ. ನರ್ಸಿಂಗ್ ವಿಜ್ಞಾನದಲ್ಲಿ ಪದವಿ ಪಡೆದು ವೃತ್ತಿಕ್ಷೇತ್ರಕ್ಕೆ ಕಾಲಿಡುತ್ತಿರುವ ನೀವು ಸೇವಾಮನೋಭಾವ ಮೈಗೂಡಿಸಿಕೊಳ್ಳಿ ಎಂದು ಹೇಳಿದರು.ಪದವಿ ಪ್ರದಾನ ಸಮಾರಂಭದಲ್ಲಿ ಒಟ್ಟು 243 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು. ನರ್ಸಿಂಗ್ ಪಿ.ಜಿ ಕೋರ್ಸ್‌ನಲ್ಲಿ ವಿಶ್ವವಿದ್ಯಾಲಯದಿಂದ ಚಿನ್ನದ ಪದಕ ವಿಜೇತ ವಿದ್ಯಾರ್ಥಿನಿ ಮಹೇಶ್ವರಿ ಶಿರೋಳ ಅವರನ್ನು ಸನ್ಮಾನಿಸಲಾಯಿತು. ನರ್ಸಿಂಗ್ ವಿಜ್ಞಾನದಲ್ಲಿ ಪಿಎಚ್.ಡಿ ಪದವಿ ಪಡೆದ ಡಾ.ಸ್ಟಿಫನ್ ಜಾನ್ ಸಮಾರಂಭದಲ್ಲಿ ಪದವಿ ಪ್ರಮಾಣ ಪತ್ರ ಪಡೆದದ್ದು ವಿಶೇಷವಾಗಿತ್ತು.
ವೇದಿಕೆಯಲ್ಲಿ ಬಿವಿವಿ ಸಂಘದ ಗೌರವ ಕಾರ್ಯದರ್ಶಿ ಮಹೇಶ.ಎನ್. ಅಥಣಿ, ವೈದ್ಯಕೀಯ ಆಡಳಿತ ಮಂಡಳಿ ಕಾರ್ಯಾಧ್ಯಕ್ಷ ಅಶೋಕ. ಸಜ್ಜನ (ಬೇವೂರ), ನರ್ಸಿಂಗ್ ಕಾಲೇಜುಗಳ ಪ್ರಾಚಾರ್ಯರಾದ ಡಾ.ದಿಲೀಪ ನಾಟೆಕರ್, ಪ್ರೊ.ಜಯಶ್ರೀ ಇಟ್ಟಿ ಮತ್ತು ಡಾ.ಪ್ರವೀಣ ಪಾಟೀಲ ಹಾಗೂ ವಿವಿಧ ವಿಭಾಗಗಳ ಮುಖ್ಯಸ್ಥರು ಉಪಸ್ಥಿತರಿದ್ದರು. ಸಮಾರಂಭದಲ್ಲಿ ಡಾ.ರಿಯಾಜ್ ಬಾಷಾ ಅವರನ್ನು ಸನ್ಮಾನಿಸಲಾಯಿತು.
ಬಿವಿವಿ ಸಂಘದಡಿ ಅತ್ಯುತ್ತಮ ಶಿಕ್ಷಣ ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿವೆ. ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಮೆಡಿಕಲ್, ಡೆಂಟಲ್, ಆಯುರ್ವೇದ, ಹೊಮಿಯೋಪತಿ, ನರ್ಸಿಂಗ್, ಫಾರ್ಮಸಿ ಎಲ್ಲ ಪ್ರಕಾರದ ಶಿಕ್ಷಣ ಕೇಂದ್ರ ಸ್ಥಾಪಿಸಲಾಗಿದೆ. ಒಟ್ಟಾರೆ ಡಾ.ವೀರಣ್ಣ ಚರಂತಿಮಠ ಅವರು ನೂರಕ್ಕೂ ಅಧಿಕ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಿ ಉತ್ತರ ಕರ್ನಾಟಕದಲ್ಲಿ ಶೈಕ್ಷಣಿಕ ಕ್ರಾಂತಿಯ ಹರಿಕಾರರೆನಿಸಿಕೊಂಡಿರುವರು.