ಪುಟ 2ಕ್ಕೆ ಮಸ್ಟ್... ಯುವ ಪೀಳಿಗೆಯಲ್ಲಿ ಪೋಷಕಾಂಶಗಳ ಕೊರತೆ

KannadaprabhaNewsNetwork |  
Published : Apr 07, 2026, 03:15 AM IST
ಆರ್‌ಕೆಎಂ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಮಕ್ಕಳ ವೆಲ್‌ನೆಸ್ ಮತ್ತು ಮೌಲ್ಯ ಶಿಬಿರ  | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ವಿಜಯಪುರ ಇಂದಿನ ಕಾಲದಲ್ಲಿ ಮಕ್ಕಳಿಗೆ ಸಮರ್ಪಕವಾದ ಆಹಾರ ಪದ್ಧತಿ ಪಾಲಿಸುವುದು ಒಂದು ಸವಾಲಾಗಿದೆ. ಇಂದಿನ ಯುವ ಪೀಳಿಗೆ ಪೋಷಕಾಂಶಗಳ ಕೊರತೆಯಿಂದ ಬಳಲುತ್ತಿರುವುದು ಕಳವಳಕಾರಿ ಸಂಗತಿ ಎಂದು ಆರ್‌ಕೆಎಂ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಶಂಭುಲಿಂಗಯ್ಯ ಕರ್ಪೂರಮಠ ಹೇಳಿದರು. ನಗರದ ಆರ್‌ಕೆಎಂ ಹಾಸ್ಪಿಟಲ್ಸ್ ಹಾಗೂ ಆರ್‌ಕೆಎಂ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯದ ಕೌಮಾರಭೃತ್ಯ ವಿಭಾಗದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಮಕ್ಕಳ ವೆಲ್‌ನೆಸ್ ಮತ್ತು ಮೌಲ್ಯ ಶಿಬಿರ ಉದ್ಘಾಟಿಸಿ ಮಾತನಾಡಿದ ಅವರು, ತಾಯಂದಿರು ತಮ್ಮ ಮಕ್ಕಳ ಆರೋಗ್ಯದ ಕಡೆ ಹೆಚ್ಚು ಗಮನಹರಿಸಿ, ಮನೆಯಲ್ಲಿ ಸಿದ್ಧವಾಗುವ ಪೌಷ್ಟಿಕ ಆಹಾರವನ್ನು ನೀಡುವುದು ಅತ್ಯಂತ ಮುಖ್ಯವಾಗಿದೆ. ಆಯುರ್ವೇದವು ಮಕ್ಕಳ ಪೋಷಣೆಯಲ್ಲಿ ಮಹತ್ವದ ಪಾತ್ರವಹಿಸುತ್ತದೆ. ಮಕ್ಕಳ ಸಮಗ್ರ ಆರೋಗ್ಯ ಮತ್ತು ಮೌಲ್ಯಗಳನ್ನು ಬೆಳೆಸುವ ಉದ್ದೇಶದಿಂದ ಈ ಶಿಬಿರ ಹಮ್ಮಿಕೊಳ್ಳಲಾಗಿದೆ.

ಕನ್ನಡಪ್ರಭ ವಾರ್ತೆ ವಿಜಯಪುರ

ಇಂದಿನ ಕಾಲದಲ್ಲಿ ಮಕ್ಕಳಿಗೆ ಸಮರ್ಪಕವಾದ ಆಹಾರ ಪದ್ಧತಿ ಪಾಲಿಸುವುದು ಒಂದು ಸವಾಲಾಗಿದೆ. ಇಂದಿನ ಯುವ ಪೀಳಿಗೆ ಪೋಷಕಾಂಶಗಳ ಕೊರತೆಯಿಂದ ಬಳಲುತ್ತಿರುವುದು ಕಳವಳಕಾರಿ ಸಂಗತಿ ಎಂದು ಆರ್‌ಕೆಎಂ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಶಂಭುಲಿಂಗಯ್ಯ ಕರ್ಪೂರಮಠ ಹೇಳಿದರು.

ನಗರದ ಆರ್‌ಕೆಎಂ ಹಾಸ್ಪಿಟಲ್ಸ್ ಹಾಗೂ ಆರ್‌ಕೆಎಂ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯದ ಕೌಮಾರಭೃತ್ಯ ವಿಭಾಗದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಮಕ್ಕಳ ವೆಲ್‌ನೆಸ್ ಮತ್ತು ಮೌಲ್ಯ ಶಿಬಿರ ಉದ್ಘಾಟಿಸಿ ಮಾತನಾಡಿದ ಅವರು, ತಾಯಂದಿರು ತಮ್ಮ ಮಕ್ಕಳ ಆರೋಗ್ಯದ ಕಡೆ ಹೆಚ್ಚು ಗಮನಹರಿಸಿ, ಮನೆಯಲ್ಲಿ ಸಿದ್ಧವಾಗುವ ಪೌಷ್ಟಿಕ ಆಹಾರವನ್ನು ನೀಡುವುದು ಅತ್ಯಂತ ಮುಖ್ಯವಾಗಿದೆ. ಆಯುರ್ವೇದವು ಮಕ್ಕಳ ಪೋಷಣೆಯಲ್ಲಿ ಮಹತ್ವದ ಪಾತ್ರವಹಿಸುತ್ತದೆ. ಮಕ್ಕಳ ಸಮಗ್ರ ಆರೋಗ್ಯ ಮತ್ತು ಮೌಲ್ಯಗಳನ್ನು ಬೆಳೆಸುವ ಉದ್ದೇಶದಿಂದ ಈ ಶಿಬಿರ ಹಮ್ಮಿಕೊಳ್ಳಲಾಗಿದೆ. ಇದಕ್ಕಾಗಿ ಆರ್‌ಕೆಎಂ ಪೋಷಣಾ ವಿಭಾಗವನ್ನು ಭೇಟಿ ಮಾಡುವಂತೆ ಸಲಹೆ ನೀಡಿದರು.

ಪ್ರಾಚಾರ್ಯ ಡಾ.ನಂದಕುಮಾರ ರುದ್ರಗೌಡರ ಮಾತನಾಡಿ, ಮಕ್ಕಳ ದೈಹಿಕ ಮತ್ತು ಮಾನಸಿಕ ಅಭಿವೃದ್ಧಿಗೆ ಯೋಗ ಮಹತ್ವವಾಗಿದ್ದು, ಯೋಗದಿಂದ ಏಕಾಗ್ರತೆ ಹೆಚ್ಚಾಗಿ ಆರೋಗ್ಯಕರ ಜೀವನಶೈಲಿ ಬೆಳೆಸಬಹುದು. ಚಿಕ್ಕ ವಯಸ್ಸಿನಲ್ಲಿ ಮೊಬೈಲ್ ಫೋನ್‌ಗಳ ಅತಿಯಾದ ಬಳಕೆ ತಪ್ಪಿಸಬೇಕು ಎಂದು ಎಚ್ಚರಿಸಿದರು.

ಡಾ.ಸೌಮ್ಯ ಮಾತನಾಡಿ, ಈ ಶಿಬಿರದಲ್ಲಿ ಮಕ್ಕಳ ದೈಹಿಕ ಆರೋಗ್ಯ, ಮಾನಸಿಕ ಸ್ಥಿರತೆ, ನೈತಿಕ ಮೌಲ್ಯಗಳು ಹಾಗೂ ವ್ಯಕ್ತಿತ್ವ ವಿಕಸನಕ್ಕೆ ಸಂಬಂಧಿಸಿದ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿದೆ. ಈ ಶಿಬಿರವು ಮಕ್ಕಳಿಗೆ ಮನರಂಜನೆ ಜತೆಗೆ ಉತ್ತಮ ಅಭ್ಯಾಸಗಳು ಮತ್ತು ಜೀವನ ಮೌಲ್ಯಗಳನ್ನು ಬೆಳೆಸುವಲ್ಲಿ ಸಹಕಾರಿಯಾಗಲಿದೆ ಎಂದರು.

ಈ ವೇಳೆ ಕೌಮಾರಭೃತ್ಯ ವಿಭಾಗದ ಮುಖ್ಯಸ್ಥ ಡಾ.ಪುರುಷೋತ್ತಮ ಉಕ್ಕಲಿ, ಸಹಾಯಕ ಪ್ರಾಧ್ಯಾಪಕಿ ಡಾ.ಸೌಮ್ಯಶ್ರೀ ಅಮಿತ, ಮೇಧಾ ಹಿರೇಮಠ ಉಪಸ್ಥಿತರಿದ್ದರು.

------------

6bij08: ಆರ್‌ಕೆಎಂ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಮಕ್ಕಳ ವೆಲ್‌ನೆಸ್ ಮತ್ತು ಮೌಲ್ಯ ಶಿಬಿರವನ್ನು ಆರ್‌ಕೆಎಂ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಶಂಭುಲಿಂಗಯ್ಯ ಕರ್ಪೂರಮಠ ಉದ್ಘಾಟಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಯುದ್ಧದಿಂದ ವಿಶ್ವದ ಮೇಲೆ ನಕಾರಾತ್ಮಕ ಪರಿಣಾಮ
2ನೇ ಪುಟಕ್ಕೆ..ಕಟ್‌ ಲೀಡ್‌..ನಿಗದಿತ ಸಮಯಕ್ಕೆ ಕಚೇರಿಗೆ ಹಾಜರಾಗಿ